

ಮೇಷ: ನ್ಯಾಯವಾದಿಗಳಿಗೆ ಸ್ವಪ್ರಯತ್ನದಿಂದ ಕಾರ್ಯ ಕ್ಷೇತ್ರಗಳಲ್ಲಿ ಮುನ್ನಡೆ. ಮಕ್ಕಳಿಂದಲೇ ವಾದ-ವಿವಾದ ಹೆಚ್ಚಾಗಬಹುದು. ಶುಭಸಂಖ್ಯೆ: 9
ವೃಷಭ: ಮುಕ್ತ ಭಾವನೆಯಿಂದ ಸಮಸ್ಯೆಗೆ ಪರಿಹಾರ ಕಾಣುವಿರಿ. ಆಶ್ಚರ್ಯಕರ ರೀತಿಯಲ್ಲಿ ವಿರೋಧಿಗಳು ಬೆಂಬಲ ಸೂಚಿಸುವರು. ಶುಭಸಂಖ್ಯೆ:6
ಮಿಥುನ: ಹಿರಿಯರ ಸಕಾಲಿಕ ಸಲಹೆಯಿಂದ ಆಗಬಹುದಾಗಿದ್ದ ನಷ್ಟ ತಪ್ಪಿಸಿಕೊಳ್ಳುವಿರಿ. ಮಕ್ಕಳ ಆರೋಗ್ಯದತ್ತ ಹೆಚ್ಚಿನ ಗಮನ ಅಗತ್ಯ. ಶುಭಸಂಖ್ಯೆ:3
ಕಟಕ: ಕರಿದ ಪದಾರ್ಥ ತಯಾರಿಸಿ ಮಾರುವವರಿಗೆ ಲಾಭ ಹೆಚ್ಚುತ್ತದೆ. ಸಗಟು ಹೂವಿನ ವ್ಯಾಪಾರಿಗಳಿಗೆ ವ್ಯವಹಾರ ಹೆಚ್ಚಾಗಿ ಲಾಭ. ಶುಭಸಂಖ್ಯೆ: 5
ಸಿಂಹ: ಆತುರದ ನಿರ್ಧಾರ ಬೇಡ. ಮಹಿಳೆಯರಿಗೆ ಕುಟುಂಬ ವ್ಯವಹಾರದಲ್ಲಿ ತೃಪ್ತಿ. ಸಾಮಾಜಿಕ ಕಾರ್ಯದಲ್ಲಿ ಭಾಗವಹಿಸುವ ಅವಕಾಶ. ಶುಭಸಂಖ್ಯೆ: 7
ಕನ್ಯಾ: ಸ್ನೇಹಿತರೊಂದಿಗೆ ವಿಚಾರ ವಿನಿಮಯ. ಸಾಲ ಮರುಪಾವತಿ ಮಾಡಿ ಗೌರವ ಉಳಿಸಿಕೊಳ್ಳುವಿರಿ. ವಸ್ತ್ರ ವ್ಯಾಪಾರಿಗಳಿಗೆ ಆದಾಯ. ಶುಭಸಂಖ್ಯೆ: 6
ತುಲಾ: ಸಂಪನ್ಮೂಲಗಳನ್ನು ಕ್ರೋಡೀಕರಿಸಲು ಹಲವು ಪ್ರಯತ್ನ ಮಾಡುವಿರಿ. ಕೃಷಿಕರಿಗೆ ಬೆಲೆ ಕುಸಿತದ ಆತಂಕ ಎದುರಾಗಬಹುದು. ಶುಭಸಂಖ್ಯೆ:3
ವೃಶ್ಚಿಕ: ಅನಿರೀಕ್ಷಿತ ಮೂಲಗಳಿಂದ ಆರ್ಥಿಕ ಸಹಾಯ ಒದಗುವ ಸಾಧ್ಯತೆ. ಬಾಹ್ಯಾಕಾಶ ಸಂಸ್ಥೆಯಲ್ಲಿ ಕೆಲಸ ಮಾಡುವವರಿಗೆ ಬಡ್ತಿ. ಶುಭಸಂಖ್ಯೆ: 2
ಧನಸ್ಸು: ಕೆಲವೊಂದು ವಿಷಯಗಳಲ್ಲಿ ಭಾವೋದ್ವೇಗಕ್ಕೆ ಒಳಗಾಗುವ ಸಾಧ್ಯತೆ, ಸಮಾಧಾನ ಚಿತ್ತದಿಂದ ವ್ಯವಹರಿಸಿರಿ. ಕೃಷಿಕರಿಗೆ ಲಾಭ. ಶುಭಸಂಖ್ಯೆ: 1
ಮಕರ: ಆಂತರಿಕ ಗೊಂದಲ ಸತ್ಯಶೋಧನೆಯಿಂದ ನಿವಾರಣೆ. ಹಣಕಾಸಿನ ವಿಷಯದಲ್ಲಿ ಜಾಗರೂಕತೆ ಅಗತ್ಯ. ಉದ್ದಿಮೆಗಳಲ್ಲಿ ಪ್ರಗತಿ. ಶುಭಸಂಖ್ಯೆ: 7
ಕುಂಭ: ಕೃಷಿ ಯಂತ್ರ ಹೊಂದಿರುವವರಿಗೆ ಬಾಡಿಗೆಯಿಂದ ಲಾಭ. ಪ್ರೀತಿಯಲ್ಲಿ ಬಿದ್ದವರಿಗೆ ಹಿನ್ನಡೆ. ವಿದೇಶಿ ವ್ಯವಹಾರದಲ್ಲಿ ಮುನ್ನಡೆ. ಶುಭಸಂಖ್ಯೆ:4
ಮೀನ: ನಿಮ್ಮ ಸಾಮರ್ಥ್ಯ ಅರಿತು ಕೆಲಸ ಕಾರ್ಯ ಆಯ್ಕೆಮಾಡಿಕೊಳ್ಳಿ. ಬಯಸಿದ ಸ್ಥಳಕ್ಕೆ ವರ್ಗಾವಣೆ ದೊರೆಯುವ ಸಾಧ್ಯತೆ ಇದೆ. ಶುಭಸಂಖ್ಯೆ: 8