ಈ ದಿನಾಂಕಗಳಲ್ಲಿ ಜನಿಸಿದವರೊಂದಿಗೆ ತುಂಬಾ ಎಚ್ಚರಿಕೆಯಿಂದ ಇರಬೇಕಂತೆ! ಅಚ್ಚರಿಯ ಕಾರಣ ಹೀಗಿದೆ... Numerology

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on

ಪ್ರಮುಖ ಮುಖ್ಯಾಂಶಗಳು

  • ಸಂಖ್ಯೆಗಳು ನಮ್ಮ ಜೀವನದ ಎಲ್ಲ ವಿಷಯಗಳೊಂದಿಗೆ ಆಳವಾದ ಸಂಬಂಧವನ್ನು ಹೊಂದಿವೆ
  • ಸಂಖ್ಯಾಶಾಸ್ತ್ರವು ವ್ಯಕ್ತಿಯ ಹೆಸರು, ಹುಟ್ಟಿದ ದಿನಾಂಕ, ತಿಂಗಳು, ವರ್ಷದ ಆಧಾರದ ಮೇಲೆ ಭವಿಷ್ಯ ಹೇಳುತ್ತೆ
  • ಒಂಬತ್ತು ರಾಡಿಕ್ಸ್ ಸಂಖ್ಯೆಗಳು ಕೂಡ ನವಗ್ರಹಗಳಲ್ಲಿ ಒಂದೊಂದು ಗ್ರಹಗಳಿಗೆ ಸೀಮಿತವಾಗಿವೆ
Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಸಂಖ್ಯೆಗಳು ನಮ್ಮ ಜೀವನದ ಎಲ್ಲ ವಿಷಯಗಳೊಂದಿಗೆ ಆಳವಾದ ಸಂಬಂಧವನ್ನು ಹೊಂದಿವೆ. ಅಲ್ಲದೆ, ಈ ಸಂಖ್ಯೆಗಳು ನೈಸರ್ಗಿಕವಾಗಿ ವಿಶ್ವದಲ್ಲಿ ವಿಶಿಷ್ಟ ಶಕ್ತಿಯನ್ನು ಹೊಂದಿದ್ದು, ಯಾರನ್ನಾದರೂ ಮೇಲಕ್ಕೇರಿಸಬಹುದು ಮತ್ತು ಕೆಳಗಿಳಿಸಬಹುದು.
ಅಂದಹಾಗೆ ಸಂಖ್ಯಾಶಾಸ್ತ್ರವು ವ್ಯಕ್ತಿಯ ಹೆಸರು, ಆತನ ಹುಟ್ಟಿದ ದಿನಾಂಕ, ತಿಂಗಳು, ವರ್ಷದ ಆಧಾರದ ಮೇಲೆ ಅವರ ಭವಿಷ್ಯದ ಜೀವನ ಹೇಗಿರುತ್ತದೆ ಎಂದು ಊಹಿಸುವ ವಿಜ್ಞಾನವಾಗಿದೆ. ಈ ಸಂಖ್ಯಾಶಾಸ್ತ್ರವನ್ನು ರಾಡಿಕ್ಸ್ ಸಂಖ್ಯೆಗಳ ಆಧಾರದ ಮೇಲೆ ಹೇಳಲಾಗುತ್ತದೆ. ಒಬ್ಬ ವ್ಯಕ್ತಿಯ ಜನ್ಮ ದಿನಾಂಕದ ಮೊತ್ತವನ್ನು ರಾಡಿಕ್ಸ್ ಸಂಖ್ಯೆ ಅಥವಾ ಮೂಲಾಂಕ ಎಂದು ಕರೆಯಲಾಗುತ್ತದೆ. ಉದಾಹರಣೆಗೆ ಒಬ್ಬ 24ನೇ ತಾರೀಖಿನಂದು ಜನಿಸಿದರೆ ಆತನ ರಾಡಿಕ್ಸ್​ ಸಂಖ್ಯೆ 2+4= 6 ಆಗಿರುತ್ತದೆ.
ರಾಶಿಗಳಂತೆ ರಾಡಿಕ್ಸ್​ ಸಂಖ್ಯೆಗಳು ಕೂಡ ಗ್ರಹಗಳೊಂದಿಗೆ ಸಂಬಂಧ ಹೊಂದಿವೆ. ಸಂಖ್ಯಾಶಾಸ್ತ್ರದಲ್ಲಿ 01 ರಿಂದ 09ರವರೆಗಿನ ಸಂಖ್ಯೆಗಳನ್ನು ರಾಡಿಕ್ಸ್ ಸಂಖ್ಯೆಗಳು ಎಂದು ಹೇಳಲಾಗುತ್ತದೆ. ಈ ಒಂಬತ್ತು ರಾಡಿಕ್ಸ್ ಸಂಖ್ಯೆಗಳು ಕೂಡ ನವಗ್ರಹಗಳಲ್ಲಿ ಒಂದೊಂದು ಗ್ರಹಗಳಿಗೆ ಸೀಮಿತವಾಗಿವೆ.
ಈ ಸಂಖ್ಯಾಶಾಸ್ತ್ರದ ಪ್ರಕಾರ, ಕೆಲವು ದಿನಾಂಕಗಳಲ್ಲಿ ಜನಿಸಿದವರಿಂದ ದೂರವಿರುವುದು ಉತ್ತಮ ಎಂದು ಹೇಳಲಾಗುತ್ತದೆ. ಹಾಗಾದರೆ, ಆ ದಿನಾಂಕಗಳು ಯಾವುವು ಎಂಬುದನ್ನು ನಾವೀಗ ತಿಳಿದುಕೊಳ್ಳೋಣ.

ಸಂಖ್ಯೆ 7

ಸಂಖ್ಯಾಶಾಸ್ತ್ರವು ಒಂದು ಪ್ರಾಚೀನ ನಂಬಿಕೆಯಾಗಿದೆ. ಅದರ ದಿನಾಂಕ 7, 16 ಮತ್ತು 25ರಂದು ಜನಿಸಿದ ಜನರೊಂದಿಗೆ ಸ್ವಲ್ಪ ಜಾಗರೂಕರಾಗಿರಬೇಕು. ಏಕೆಂದರೆ ಅವರ ಗುಣಗಳು ಮತ್ತು ಪ್ರವೃತ್ತಿಗಳನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಒಂದು ರೀತಿಯಲ್ಲಿ ಅವರು ಗೊಂದಲಮಯ ವ್ಯಕ್ತಿಯಾಗಿರುತ್ತಾರೆ. ಅಲ್ಲದೆ, ದುರಹಂಕಾರಿ ಮತ್ತು ಸ್ವಾರ್ಥಿಗಳಾಗಿರುವುದರಿಂದ ಅವರೊಂದಿಗೆ ಮಾತನಾಡುವಾಗ ಹಾಗೂ ವ್ಯವಹರಿಸುವಾಗ ತುಂಬಾ ಜಾಗರೂಕರಾಗಿರಬೇಕೆಂದು ಹೇಳಲಾಗಿದೆ.

ಸಂಖ್ಯೆ 8

ದಿನಾಂಕ 8, 17 ಮತ್ತು 26ನೇ ತಾರೀಖಿನಂದು ಜನಿಸಿದ ಜನರು ತಮ್ಮ ಗುರಿಗಳನ್ನು ಸಾಧಿಸಲು ಪರಿಶ್ರಮದಿಂದ ವರ್ತಿಸುತ್ತಾರೆ. ಈ ಗುಣದಿಂದಾಗಿ ಅವರು ಯಶಸ್ವಿ ಸಹ ಆಗುತ್ತಾರೆ. ಆದರೆ, ಕೆಲವೊಮ್ಮೆ ತಮ್ಮ ಗುರಿಗಳನ್ನು ಸಾಧಿಸಲು ದುರಹಂಕಾರ ತೋರುತ್ತಾರೆ. ಅವರು ಎಲ್ಲರಿಗಿಂತ ತುಂಬಾ ವಿಶೇಷವಾಗಿ ಕಾಣಲು ಸ್ಪರ್ಧಾತ್ಮಕ ಮನೋಭಾವದಿಂದ ವರ್ತಿಸುತ್ತಾರೆ. ದ್ವೇಷ ಮತ್ತು ಅಸಮಾಧಾನದಿಂದ ವರ್ತಿಸುವುದರಿಂದ ಇತರರೊಂದಿಗೆ ಉತ್ತಮ ಸಂಬಂಧಗಳು ಎಂದಿಗೂ ಉಂಟಾಗುವುದಿಲ್ಲ.

ಸಂಖ್ಯೆ 1

ದಿನಾಂಕ 1, 10, 19 ಮತ್ತು 28 ನೇ ತಾರೀಖಿನಂದು ಜನಿಸಿದ ಜನರು ಬಲವಾದ ನಾಯಕತ್ವದ ಗುಣಗಳನ್ನು ಹೊಂದಿರುತ್ತಾರೆ. ಅವರು ಉತ್ತಮ ನಿಯಂತ್ರಣ ಕೌಶಲ್ಯಗಳನ್ನು ಹೊಂದಿರುತ್ತಾರೆ. ಈ ಗುಣಗಳು ಉತ್ತಮವಾಗಿದ್ದರೂ, ಅವರು ಕೆಲವೊಮ್ಮೆ ಅಹಂಕಾರದ ಪ್ರವೃತ್ತಿಯನ್ನು ತೋರಬಹುದು. ಅವರು ಇತರರ ಅಗತ್ಯಗಳನ್ನು ಆಧರಿಸಿ ವರ್ತಿಸುವ ಜನರಾಗಿದ್ದಾರೆ. ಹೀಗಾಗಿ ಇಂಥವರಿಂದಲೂ ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಿದೆ.
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್​ಸೈಟ್​ ಜವಾಬ್ದಾರರಾಗಿರುವುದಿಲ್ಲ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net