ಅಂದಹಾಗೆ, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ ಸ್ಥಾನ ಆ ವ್ಯಕ್ತಿಯ ಭವಿಷ್ಯದ ಜೀವನ ಹೇಗಿರಲಿದೆ ಎಂಬುದನ್ನು ನಿರ್ಧರಿಸುತ್ತದೆ. ಅಲ್ಲದೆ, ಪಾಸಿಟಿವ್ ಹಾಗೂ ನೆಗೆಟಿವ್ ಅಂಶಗಳ ಮೇಲೆ ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ. ಮನುಷ್ಯನ ಎಲ್ಲ ಒಳಿತು-ಕೆಡುಕುಗಳಿಗೂ ಆತನ ಗ್ರಹಗತಿಗಳೇ ಕಾರಣ ಎನ್ನುತ್ತಾರೆ. ಹೀಗಾಗಿ ನಮ್ಮಲ್ಲಿ ಜ್ಯೋತಿಷ್ಯವನ್ನು ನಂಬುವ ಅಸಂಖ್ಯಾತ ಜನರಿದ್ದಾರೆ.