ಗ್ರಹಗತಿಗಳ ಅದ್ಭುತ ಚಮತ್ಕಾರ: ಮೂರು ರಾಜಯೋಗಗಳಿಂದ ಇವರ ಬದುಕೇ ಬಂಗಾರ! Astrology

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
Astrology: ಮೇ 2026 ರ ತಿಂಗಳು ಜ್ಯೋತಿಷ್ಯ ದೃಷ್ಟಿಕೋನದಿಂದ ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಈ ಸಮಯದಲ್ಲಿ ಶಕ್ತಿಶಾಲಿ ರಾಜಯೋಗಗಳಾದ ಬುದ್ಧಾದಿತ್ಯ ಯೋಗ, ಗಜಕೇಸರಿ ಯೋಗ, ಭದ್ರ ಯೋಗ ಮತ್ತು ಲಕ್ಷ್ಮಿ ನಾರಾಯಣ ಯೋಗವು ಏಕಕಾಲದಲ್ಲಿ ರೂಪುಗೊಳ್ಳುತ್ತದೆ. ಆದಾಗ್ಯೂ, ಎಲ್ಲಾ ಯೋಗಗಳು ಒಟ್ಟಾಗಿ ಸೇರಿದಾಗ ಸಂಪತ್ತು, ವೃತ್ತಿ, ಗೌರವ ಮತ್ತು ಅದೃಷ್ಟಕ್ಕೆ ಸಹಾಯ ಮಾಡಲಾಗುತ್ತದೆ ಎಂದು ಹೇಳಲಾಗುತ್ತದೆ.
ಈ ಗ್ರಹಗಳ ವಿಶೇಷ ಸ್ಥಾನವು ಕೆಲವೊಂದು ರಾಶಿಗಳ ಮೇಲೆ ಪರಿಣಾಮ ಬೀರಲಿದ್ದು, ಹಠಾತ್​ ಆರ್ಥಿಕ ಲಾಭದ ಕ್ಷಣಗಳನ್ನು ನೋಡಬಹುದಾಗಿದೆ. ಇದರ ಜೊತೆಗೆ ದೀರ್ಘಕಾಲದಿಂದ ಸ್ಥಗಿತಗೊಂಡ ಯೋಜನೆಗಳು ವೇಗವನ್ನು ಪಡೆದುಕೊಳ್ಳಲಿವೆ. ಹಾಗಿದ್ದರೆ, ಮೇ ತಿಂಗಳಲ್ಲಿ ಯಾವ ರಾಶಿಯವರಿಗೆ ಉತ್ತಮ ಫಲ ದೊರೆಯಲಿದೆ ಎಂದು ನೋಡೋಣ ಬನ್ನಿ....

ಕನ್ಯಾ ರಾಶಿ

ಕನ್ಯಾ ರಾಶಿಯವರಿಗೆ ಈ ರಾಜಯೋಗವು ಅನೇಕ ರೀತಿಯಲ್ಲಿ ಸಹಾಯ ಮಾಡಲಿದೆ. ಆದಾಗ್ಯೂ, ಈ ಸಮಯದಲ್ಲಿ ಹೊಸ ಆದಾಯದ ಮೂಲಗಳು ತೆರೆದುಕೊಳ್ಳಲಿದೆ. ನಿಮ್ಮ ಕಠಿಣ ಪರಿಶ್ರಮದಿಂದ ಪೂರ್ಣ ಫಲವನ್ನು ಪಡೆಯಲಿದ್ದೀರಿ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಿಸುತ್ತದೆ. ಅಂದುಕೊಂಡ ಕೆಲಸವನ್ನು ಮಾಡಿ ಮುಗಿಸಲಿದ್ದೀರಿ. ಕುಟುಂಬದಲ್ಲಿ ಸಂತೋಷದಿಂದ ಕಾಲ ಕಳೆಯುವ ಸಮಯ ಇದಾಗಿದೆ.

ಧನು ರಾಶಿ

ಈ ತಿಂಗಳಿಂದ ಈ ರಾಶಿಯವರಿಗೆ ಶುಭ ಲಗ್ನ ಪ್ರಾರಂಭವಾಗಲಿದ್ದು, ಅಂದುಕೊಂಡ ಕೆಲಸವನ್ನು ಮಾಡಿ ಮುಗಿಸಲಿದ್ದೀರಿ. ವಿದೇಶ ಪ್ರಯಾಣ ಅಥವಾ ದೂರದ ಪ್ರಯಾಣಕ್ಕೆ ಸಂಬಂಧಿಸಿದ ಅವಕಾಶಗಳು ಸಿಗಬಹುದು. ಶಿಕ್ಷಣ ಮತ್ತು ವೃತ್ತಿಜೀವನದಲ್ಲಿ ಪ್ರಗತಿಗೆ ಉತ್ತಮ ನಿರೀಕ್ಷೆಗಳಿವೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಅನಿರೀಕ್ಷಿತ ಬದಲಾವಣೆಯನ್ನು ಕಾಣಲಿದ್ದೀರಿ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರಲಿದೆ.

ಮೀನ ರಾಶಿ

ಮೀನ ರಾಶಿಯವರಿಗೆ ಇಂದಿನಿಂದ ಒಳ್ಳೆಯ ಸಮಯ ಆರಂಭವಾಗಿದೆ. ಈ ಸಮಯದಲ್ಲಿ ಈ ಜನರಿಗೆ ಆಧ್ಯಾತ್ಮಿಕತೆಯ ಬಗ್ಗೆ ಆಸಕ್ತಿ ಹೆಚ್ಚಾಗುವುದರ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ನೀಡುತ್ತದೆ. ಹೊಸ ಅವಕಾಶಳು ನಿಮ್ಮ ಭವಿಷ್ಯವನ್ನು ರೂಪಿಸಲಿವೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಕುಟುಂಬದಲ್ಲಿ ಸಂಭ್ರಮ ಮನೆಮಾಡಲಿದೆ (ಏಜೆನ್ಸೀಸ್​).

ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು/ ಪಂಚಾಂಗಗಳು/ ನಂಬಿಕೆಗಳು/ ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್​ಸೈಟ್​ ಜವಾಬ್ದಾರರಾಗಿರುವುದಿಲ್ಲ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net