More

    ಜೆಎಸ್‌ಎಸ್ ಕಾಲೇಜಿನಲ್ಲಿ ಖಗೋಳವಿಜ್ಞಾನ ವಿಚಾರ ಸಂಕಿರಣ

    ಮೈಸೂರು: ಊಟಿ ರಸ್ತೆಯ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಸ್ನಾತಕ ಭೌತಶಾಸ್ತ್ರ ವಿಭಾಗದ ವತಿಯಿಂದ ‘ಖಗೋಳಶಾಸ್ತ್ರ ಮತ್ತು ಖಗೋಳವಿಜ್ಞಾನ’ ವಿಷಯ ಕುರಿತು ಬುಧವಾರ ರಾಜ್ಯಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗಿತ್ತು.

    ರೀಜನಲ್ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಷನ್ ನಿವೃತ್ತ ಪ್ರಾಂಶುಪಾಲ ಡಾ.ಎಸ್.ಎನ್. ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಖಗೋಳವಿಜ್ಞಾನದ ಅಧ್ಯಯನದಲ್ಲಿ ಹೆಚ್ಚು ಸಂಶೋಧನೆಗಳು ನಡೆಯಬೇಕು ಮತ್ತು ಈ ತರಹದ ವಿಚಾರ ಸಂಕಿರಣಗಳು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಸಹಕರಿಸುತ್ತದೆ ಎಂದರು.

    ಕಾಲೇಜಿನ ಮುಖ್ಯಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಶೈಕ್ಷಣಿಕ ಮತ್ತು ಸಂಶೋಧನೆಯ ಕ್ಷೇತ್ರದಲ್ಲಿ ಖಗೋಳವಿಜ್ಞಾನವು ಹೆಚ್ಚು ಹೊರಹೊಮ್ಮುತ್ತಿದೆ, ಖಗೋಳಶಾಸ್ತ್ರವು ನಕ್ಷತ್ರಗಳ ಅಧ್ಯಯನ, ನಕ್ಷತ್ರಗಳ ಆಕಾರ ಮತ್ತು ಚಲನೆ ಮತ್ತು ಸಂಶ್ಲೇಷಣೆ ಮತ್ತು ಕಪ್ಪುಕುಳಿಗಳ ಬಗ್ಗೆ ಅಧ್ಯಯನವಾಗುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಡಾ. ಎಸ್.ಪ್ರತಿಭಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts