More

    97 ಲಸಿಕಾ ಕೇಂದ್ರಗಳಲ್ಲಿ , 4414 ಮಕ್ಕಳಿಗೆ ಲಸಿಕೆ ಗುರಿ

    ಎನ್.ಆರ್.ಪುರ: ಮಾ.3 ರಂದು ಭಾನುವಾರ ನಡೆಯಲಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯಕುಮಾರ್ ತಿಳಿಸಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ 5 ವರ್ಷದೊಳಗಿನ 4,414 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. 97ಲಸಿಕಾ ಕೇಂದ್ರಗಳು, 21ಮೇಲ್ವೀಚಾರಕರು, 388ಲಸಿಕಾ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ.
    ತಾಲೂಕಿನಲ್ಲಿ 38 ಹೈರಿಸ್ಕ್ ಏರಿಯಾಗಳನ್ನು ಗುರುತಿಸಲಾಗಿದೆ. 18 ವಾಹನಗಳನ್ನು ಸಿದ್ದ ಪಡಿಸಿಕೊಳ್ಳಲಾಗಿದೆ. ಭಾನುವಾರ ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಪಲ್ಸ್ ಪೋಲಿಯೋ ಲಸಿಕೆ ನೀಡಲಾಗುತ್ತದೆ. ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಲಸಿಕೆ ಹಾಕಿದ್ದರೂ ಮತ್ತೆ ಲಸಿಕೆ ಹಾಕಬೇಕು. ಬೇಸಿಗೆಯ ಬಿಸಿಲು ಹೆಚ್ಚಾಗಿರುವುದರಿಂದ ಬೆಳಗ್ಗೆ ಬೇಗನೆ ಬಂದು ಮಕ್ಕಳಿಗೆ ಲಸಿಕೆ ಹಾಕಬೇಕು ಎಂದು ಮನವಿ ಮಾಡಿದರು.
    ಪಲ್ಸ್ ಪೋಲಿಯೋ ಅಭಿಯಾನಕ್ಕೆ ತಾಲೂಕಿನ ರೋಟರಿ ಸಂಸ್ಥೆ, ಲಯನ್ಸ್ ಕ್ಲಬ್, ಜೇಸಿ ಸಂಸ್ಥೆ, ಕಸಾಪ, ಭಾರತೀಯ ಮಾನವ ಹಕ್ಕುಗಳ ವೇದಿಕೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಲಿವೆ. ಭಾನುವಾರ ಬೆಳಗ್ಗೆ 8 ಗಂಟೆಗೆ ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ಶಾಸಕ ಟಿ.ಡಿ.ರಾಜೇಗೌಡ ಅವರು ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸೋಮವಾರ ಹಾಗೂ ಮಂಗಳವಾರ ಮನೆ, ಮನೆಗೆ ಆರೋಗ್ಯ ಕಾರ್ಯಕರ್ತರು ಹೋಗಿ ಪೋಲಿಯೋ ಲಸಿಕೆ ಹಾಕಲಿದ್ದಾರೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts