ಮನೆಯಲ್ಲಿಯೆ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

0 Min Read
ಮನೆಯಲ್ಲಿಯೆ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

ಶಿಗ್ಗಾಂವಿ: ಗಾರ್ಮೇಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಮ್ಯಾಗೇರಿ ಓಣಿಯಲ್ಲಿ ನಡೆದಿದೆ.
ಹಿರೇಕೆರೂರ ತಾಲುಕಿನ ಚಿನ್ನಮುಳಗುಂದ ಗ್ರಾಮದ ಅನಿತಾ ಸುಭಾಸ ರಾಗೇರ (27) ಮೃತ ಮಹಿಳೆ.
ಇವರು ಶಿಗ್ಗಾಂವಿ ಪಟ್ಟಣದ ಗಾರ್ಮೇಂಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆದ್ದರಿಂದ ಮ್ಯಾಗೇರಿ ಓಣಿಯಲ್ಲಿ ಬಾಡಿಗೆ ಮನೆ ಪಡೆದು ಕೆಲಸ ಮಾಡುತ್ತಿದ್ದರು. ಆದರೆ ಯಾವ ಕಾರಣಕ್ಕೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿಲ್ಲ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಪ್ರತಿಯೊಬ್ಬರಲ್ಲಿ ರಾಷ್ಟ್ರೀಯ ಮನೋಭಾವ ಮೂಡಲಿ
Share This Article