ಮಧ್ಯರಾತ್ರಿ ಸ್ಪೈಸ್​ಜೆಟ್​ ವಿಮಾನದಲ್ಲಿದ್ದ ಪ್ರಯಾಣಿಕರಿಗೆ ಏನಾಯ್ತು? ವಿಮಾನಯಾನ ಸಚಿವಾಲಯದಿಂದ ತನಿಖೆಗೆ ಆದೇಶ

spicejet
Published on

ನವದೆಹಲಿ: ಮುಂಬೈಯಿಂದ ದುರ್ಗಾಪುರಕ್ಕೆ ಹೊರಟಿದ್ದ ಸ್ಪೈಸ್​ಜೆಟ್​ ವಿಮಾನದಲ್ಲಿದ್ದ ಮೂವರು ಸಿಬ್ಬಂದಿ ಹಾಗೂ 14 ಪ್ರಯಾಣಿಕರು ಗಾಯಗೊಂಡಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ.

ಹಾಗಾದರೆ ಮಧ್ಯರಾತ್ರಿ ವಿಮಾನದಲ್ಲಿದ್ದವರಿಗೆ ಏನಾಯಿತೆಂಬುದು ಕುತೂಹಲ ಮೂಡಿಸಿದೆ. ವಿಮಾನದಲ್ಲಿ ಪ್ರಯಾಣಿಕರು ಆಕ್ಸಿಜನ್​ ಹಾಕಿಕೊಳ್ಳಲು ಒದ್ದಾಡುತ್ತಿರುವ  ಗಾಬರಿಗೊಳಿಸುವ ದೃಶ್ಯ ನಿಜಕ್ಕೂ ಭಯಾನಕವಾಗಿದೆ.

ಹವಾಮಾನ ವೈಪರಿತ್ಯದಿಂದಾಗಿ ಇನ್ನೇನು ನಿಲ್ದಾಣದಲ್ಲಿ ಇಳಿಯಬೇಕಿದ್ದ ವಿಮಾನ ಭೀಕರ ಬಿರುಗಾಳಿಗೆ ಸಿಲುಕಿದೆ. ಈ ವೇಳೇ ವಿಮಾನ ಅಲುಗಾಡಿದ್ದು, ವಿಮಾದಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದು ಕುಳಿತುಕೊಂಡಿರುವ ಈ ದೃಶ್ಯವನ್ನು ಓರ್ವ ಪ್ರಯಾಣಿಕ ಸೆರೆ ಹಿಡಿದಿದ್ದಾರೆ.

ಸದ್ಯ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ವಿಮಾನಯಾನ ಸಚಿವಾಲಯ ತಿಳಿಸಿದೆ. ಇದು ಹೇಗಾಯಿತು ಎಂಬುದರ ಬಗ್ಗೆ ತಿಳಿದುಕೊಳ್ಳಲು ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net