ಪ್ಯಾಲೆಸ್ಟೀನ್ ಮೇಲೆ ಇಸ್ರೇಲ್​ ದಾಳಿ; 25 ಮಂದಿ ಬಲಿ!

isrel
Published on

ಜರುಸಲೇಮ್: ಪ್ಯಾಲೆಸ್ಟೀನ್ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದೆ. ಬುಧವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ 25 ಜನರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.

ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯುಲ್ಲಿ ಐವರು ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದಾರೆ. ಪ್ಯಾಲೇಸ್ಟಿನಿಯನ್ ಆರೋಗ್ಯ ಸಚಿವಾಲಯವು ಐದು ಜನರ ಸಾವಿನ ಸಂಖ್ಯೆಯನ್ನು ದೃಢಪಡಿಸಿದೆ. ಇದಲ್ಲದೆ, ಗಾಜಾಪಟ್ಟಿಯಲ್ಲಿ 16 ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 20 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.

ಇಸ್ರೇಲ್ ಮತ್ತು ಹಮಾಸ್​ ಯುದ್ಧ ಆರಂಭವಾದ ನಂತರ ಇದುವರೆಗೆ 40,000 ಪ್ಯಾಲೇಸ್ಟಿನಿಯನ್ನರು ಮೃತಪಟ್ಟಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮಂಗಳವಾರ (ಸೆ.10)  ಪ್ಯಾಲೆಸ್ತೀನ್ ಭೂಪ್ರದೇಶದ ದಕ್ಷಿಣ ಭಾಗದಲ್ಲಿರುವ ಮಾನವೀಯ ವಲಯದ ಮೇಲೆ ಇಸ್ರೇಲಿ ನಡೆಸಿದ ದಾಳಿಯಲ್ಲಿ 40 ಜನರು ಸಾವನ್ನಪ್ಪಿದ್ದು 60 ಮಂದಿ ಗಾಯಗೊಂಡಿದ್ದಾರೆ ಎಂದು ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ. ಈ ಪ್ರದೇಶದಲ್ಲಿ ಹಮಾಸ್‌ನ ಕಮಾಂಡ್ ಸೆಂಟರ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ಇಸ್ರೇಲಿ ಸೇನೆ ತಿಳಿಸಿದೆ.

ಗಾಜಾ ಪಟ್ಟಿಯಲ್ಲಿರುವ ಭಯೋತ್ಪಾದಕ ಸಂಘಟನೆಗಳು ಇಸ್ರೇಲ್ ರಾಜ್ಯ ಮತ್ತು IDF ಪಡೆಗಳ ವಿರುದ್ಧ ಭಯೋತ್ಪಾದಕ ಚಟುವಟಿಕೆಯನ್ನು ನಡೆಸಲು ಗೊತ್ತುಪಡಿಸಿದ ಮಾನವೀಯ ವಲಯ ಸೇರಿದಂತೆ ನಾಗರಿಕ ಮತ್ತು ಮಾನವೀಯ ಮೂಲಸೌಕರ್ಯಗಳನ್ನು ವ್ಯವಸ್ಥಿತವಾಗಿ ದುರುಪಯೋಗಪಡಿಸಿಕೊಳ್ಳುವುದನ್ನು ಮುಂದುವರೆಸಿದೆ ಎಂದು ಇಸ್ರೇಲ್ ಹೇಳಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net