More

    ಕೆಮಿಕಲ್​ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ; ನಾಲ್ವರು ಸಾವು, ಹಲವರು ಗಂಭೀರ

    ಥಾಣೆ: ಕೆಮಿಕಲ್​ ಫ್ಯಾಕ್ಟರಿಯಲ್ಲಿ ಸಂಭವಿಸಿದ ಬಾಯ್ಲರ್​ ಸ್ಫೋಟದಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವಿಲ್ಲಿಯಲ್ಲಿ ನಡೆದಿದೆ.

    ಡೊಂಬಿವಿಲ್ಲಿಯ ಎಂಐಡಿಸಿ ಪ್ರದೇಶದ ಎರಡನೇ ಹಂತದಲ್ಲಿರುವ ಅಂಬರ್​ ಕೆಮಿಕಲ್​ ಕಂಪನಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇದನ್ನೂ ಓದಿ: ಧೋನಿ-ರೋಹಿತ್​-ಕೊಹ್ಲಿ ಕೈಯಲ್ಲಿ ಸಾಧ್ಯವಾಗದ ದಾಖಲೆಯನ್ನು ನಿರ್ಮಿಸಿದ ಶ್ರೇಯಸ್​ ಅಯ್ಯರ್

    ಈ ಕುರಿತು ಪ್ರತಿಕ್ರಿಯಿಸಿರುವ ಥಾಣೆ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಸ್ಫೋಟದ ಶಬ್ದವು ಸುಮಾರು ಒಂದು ಕಿಲೋಮೀಟರ್​ ದೂರದವರೆಗೂ ಕೇಳಿರುವುದಾಗಿ ಪ್ರತ್ಯಕ್ಷದರ್ಶಿಗಳು ನಮಗೆ ತಿಳಿಸಿದ್ದಾರೆ. ಸ್ಫೋಟದ ರಭಸಕ್ಕೆ ಫ್ಯಾಕ್ಟರಿಯ ಸುತ್ತ ಮುತ್ತಲಿನ ಪ್ರದೇಶಗಳಲ್ಲಿನ ಕಟ್ಟಡಗಳಿಗೆ ಹಾನಿಯಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಥಾಣೆ ಜಿಲ್ಲಾಧಿಕಾರಿಗಳಿಗೆ ವಿಚಾರ ತಿಳಿಸಲಾಗಿದ್ದು, ಎನ್‌ಡಿಆರ್‌ಎಫ್, ಟಿಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಪ್ರಯತ್ನಿಸುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ಆಗದಂತೆ ಮುನ್ನೆಚ್ಚರಿಕೆಯನ್ನು ವಹಿಸಲಾಗುವುದು ಎಂದು ಥಾಣೆ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts