More

    ಕನಿಷ್ಠ ವೇತನವನ್ನಾದರೂ ಕೊಡಿ

    ಬೆಳಗಾವಿ: ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ನಗರದ ಬಿಮ್ಸ್ ಆವರಣದಲ್ಲಿ ಶುಶ್ರೂಷಕರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಸೋಮವಾರ ಪ್ರತಿಭಟನೆ ನಡೆಸಿದರು. ಬಳಿಕ ಬಿಮ್ಸ್ ನಿರ್ದೇಶಕರ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

    ಕಳೆದ ಹಲವು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದೇವೆ. ಹೀಗಾಗಿ ಸಮಾನ ಕೆಲಸಕ್ಕೆ ಸಮಾನ ವೇತನ ಸಿಗುತ್ತಿಲ್ಲ. ಉದ್ಯೋಗದ ಭದ್ರತೆ ಇಲ್ಲದಿದ್ದರೂ ಹಗಲಿರುಳು ಕೆಲಸ ಮಾಡುತ್ತಿದ್ದೇವೆ. ಕೂಲಿ ಕಾರ್ಮಿಕರಿಗೆ ಸಿಗುವಷ್ಟು ಕನಿಷ್ಠ ವೇತನವೂ ನಮಗೆ ಸಿಬ್ಬಂದಿಗೆ ಸಿಗುತ್ತಿಲ್ಲ. ಈ ಕುರಿತು ಸ್ಥಳೀಯ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೋವಿಡ್-19 ಸಂದರ್ಭದಲ್ಲಿಯೂ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ 35 ಶುಶ್ರೂಷಕರಿಗೆ ಸರಿಯಾದ ವೇತನ ಸಿಗುತ್ತಿಲ್ಲ. ಬೇರೆ ಬೇರೆ ಜಿಲ್ಲೆಗಳಲ್ಲಿ ಈಗಾಗಲೇ ವೇತನ ನೀಡುತ್ತಿದ್ದಾರೆ. ಆದರೆ, ಬಿಮ್ಸ್ನಲ್ಲಿ 11 ವರ್ಷದಿಂದ ಕೆಲಸ ಮಾಡುತ್ತಿದ್ದೇವೆ. ನಮಗೆ ಮೂಲ ವೇತನ ಸಹ ನೀಡುತ್ತಿಲ್ಲ. ಕೇವಲ 10 ಸಾವಿರ ರೂ. ನೀಡುತ್ತಿದ್ದಾರೆ. ಇದರಿಂದ ಕುಟುಂಬ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಪೂರ್ಣಿಮಾ ಕಮ್ಮಾರ, ರೇಣುಕಾ ಮೇತ್ರಿ, ಆರತಿ ಬಳಗೇರಿ, ನಾಗೇಂದ್ರ, ಪವಿತ್ರಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts