More

    ಮೂಡಲಗಿಯಲ್ಲಿ ಅಗ್ನಿಶಾಮಕ ಠಾಣೆ ಆರಂಭಕ್ಕೆ ಕ್ರಮ

    ಬೆಳಗಾವಿ: ಅಗ್ನಿಶಾಮಕ ಠಾಣೆ ಆರಂಭಕ್ಕೆ ಈಗಾಗಲೇ ಸಾಕಷ್ಟು ಬೇಡಿಕೆಗಳು ಬಂದಿದ್ದು, ಅದಕ್ಕಾಗಿ ಕೆಲ ಮಾನದಂಡ ವಿಧಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿ ಮೂಡಲಗಿಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

    ಚಳಿಗಾಲ ಅಧಿವೇಶನದಲ್ಲಿ ಅರಬಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಚುಕ್ಕಿ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಾನದಂಡಗಳ ಆಧಾರ ಮೇಲೆ ಮೂಡಲಗಿಯಲ್ಲಿ ಅಗ್ನಿಶಾಮಕ ಠಾಣೆ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಮೂಡಲಗಿಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಶಾಸಕ ಬಾಲಚಂದ್ರ ಅವರು ನಿವೇಶನ ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ.

    ಸದ್ಯ ನಿಯಮಗಳ ಅನುಸಾರ ಗ್ರಾಮೀಣ ಪ್ರದೇಶಗಳಲ್ಲಿ 50 ಚದರ ಕಿ.ಮೀ ಮತ್ತು ನಗರ ಪ್ರದೇಶಗಳಲ್ಲಿ 10 ಚದರ ಕಿ.ಮೀಗೆ ಒಂದು ಅಗ್ನಿಶಾಮಕ ಠಾಣೆಗಳು ಕರ್ತವ್ಯ ನಿರ್ವಹಿಸುತ್ತಿವೆ. ಅಗ್ನಿ ಅವಘಡಗಳ ಕರೆ ಆಧರಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮೂಡಲಗಿ ತಾಲೂಕಿನ ವ್ಯಾಪ್ತಿಯಲ್ಲಿ ವಾರ್ಷಿಕವಾಗಿ ಸರಾಸರಿ 8ರಿಂದ 10 ಅಗ್ನಿ ಕರೆಗಳು ಸ್ವೀಕೃತವಾಗುತ್ತಿವೆ. ಇಷ್ಟೆಲ್ಲ ಮಾನದಂಡಗಳು ಇರುವುದರಿಂದ ಮೂಡಲಗಿಗೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಅನುದಾನ ನೀಡಲು ಆಗುವದಿಲ್ಲ, ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚಿಸುತ್ತೇನೆ. ಮೂಡಲಗಿ ಅಗ್ನಿಶಾಮಕ
    ಠಾಣೆ ವಿಶೇಷ ಪ್ರಕರಣವೆಂದು ಘೋಷಿಸಿ ಮುಂದಿನ ಬಜೆಟ್‌ನಲ್ಲಿ ಠಾಣೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts