26.8 C
Bangalore
Friday, December 13, 2019

ಸಶಸ್ತ್ರ ಹೋರಾಟಕ್ಕೆ ಸಿದ್ಧರಾಗಿ: ಪಾಕ್ ಪ್ರಧಾನಿ ಇಮ್ರಾನ್ ಖಾನ್

Latest News

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮಲ್ಲಾಪುರದಲ್ಲಿ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ: ಜಾತ್ರೆ ಕಣ್ತುಂಬಿಕೊಂಡ ಅಪಾರ ಭಕ್ತರು

ನೆಲಮಂಗಲ: ತಾಲೂಕಿನ ಮಲ್ಲಾಪುರದ ಪ್ರಸಿದ್ಧ ಶ್ರೀ ಬಯಲು ಉದ್ಭವ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪರಿಷೆ...

ಹೆದ್ದಾರಿ 4ರ ಜಾಸ್ ಟೋಲ್ ಬಳಿ ಲಾರಿ-ಬಸ್ ಡಿಕ್ಕಿಯಾಗಿ 16 ಮಂದಿಗೆ ಗಾಯ

ನೆಲಮಂಗಲ: ತುಮಕೂರು-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಬಳಿ ಗುರುವಾರ ರಾಜ್ಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿರುವ ಅಪಘಾತದಲ್ಲಿ ಚಾಲಕ...

ಮುಜಾಫರಾಬಾದ್: ಕಾಶ್ಮೀರಿಗರು ಭಾರತದ ವಿರುದ್ಧ ನಿಲ್ಲಬೇಕು. ಬಿಜೆಪಿ-ಆರೆಸ್ಸೆಸ್ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಶಸ್ತ್ರಸಜ್ಜಿತ ಹೋರಾಟಕ್ಕೆ ಸಿದ್ಧರಾಗಿ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕರೆ ನೀಡಿದ್ದಾರೆ.

ಜಮ್ಮು- ಕಾಶ್ಮೀರ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಗಮನ ಸೆಳೆಯುವ ಉದ್ದೇಶದಿಂದ ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ರಾಜಧಾನಿ ಮುಜಾಫರಾಬಾದ್​ನಲ್ಲಿ ಶುಕ್ರವಾರ ಒಗ್ಗಟ್ಟಿನ ರ‍್ಯಾಲಿ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಇಮ್ರಾನ್ ಭಾರತದ ವಿರುದ್ಧ ಜನರನ್ನು ಎತ್ತಿಕಟ್ಟುವ ಕೆಲಸಕ್ಕೆ ಕೈಹಾಕಿದ್ದಾರೆ.

‘ವಿಶ್ವದೆದುರು ಕಾಶ್ಮೀರದ ರಾಯಭಾರಿಯಾಗಿ ಪಾಕ್ ಇರಲಿದೆ. ವಿಶ್ವಸಂಸ್ಥೆ ಮಹಾಅಧಿವೇಶನದಲ್ಲೂ ಕಾಶ್ಮೀರಿಗರಿಗೆ ನಿರಾಸೆ ಮಾಡುವುದಿಲ್ಲ. ಅಲ್ಲೂ ಕಾಶ್ಮೀರಿಗರ ವಿರುದ್ಧ ಭಾರತ ನಡೆಸುತ್ತಿರುವ ಅಮಾನವೀಯ ಕೃತ್ಯಗಳನ್ನು ಜಗತ್ತಿನೆದುರು ತೆರೆದಿಡುತ್ತೇನೆ ’ಎಂದಿದ್ದಾರೆ. ನರೇಂದ್ರ ಮೋದಿ ಸರ್ಕಾರ ಆರೆಸ್ಸೆಸ್ ಅಜೆಂಡಾ ಆಧರಿಸಿ ಕಾರ್ಯನಿರ್ವಹಿಸುತ್ತಿದ್ದು, ಹಿಂದುಗಳು ಮಾತ್ರವೇ ಭಾರತದಲ್ಲಿ ನೆಲೆಸಬೇಕು ಎನ್ನುವ ರೀತಿಯಲ್ಲಿ ನಡೆದುಕೊಳ್ಳುತ್ತಿದೆ. ಒಂದು ವೇಳೆ ಭಾರತ ವಿಪರೀತದ ಹೆಜ್ಜೆ ಇಟ್ಟರೆ ಪಾಕಿಸ್ತಾನ ಇದಕ್ಕೆ ದಿಟ್ಟ ಉತ್ತರವನ್ನೇ ನೀಡಲಿದೆ ಎಂದು ಹೇಳಿದ್ದಾರೆ.

ಅನಿರೀಕ್ಷಿತ ಯುದ್ಧವೆಂದ ಪಾಕ್ ಸಚಿವ

ಜಮ್ಮು-ಕಾಶ್ಮೀರದಲ್ಲಿನ ಈಗಿನ ಸ್ಥಿತಿ ಅನಿರೀಕ್ಷಿತ ಯುದ್ಧಕ್ಕೆ ಕಾರಣವಾಗಬಹುದು ಎಂದು ಪಾಕ್ ವಿದೇಶಾಂಗ ಸಚಿವ ಶಾ ಮೆಹ್ಮೂದ್ ಖುರೇಷಿ ಜಿನೀವಾದಲ್ಲಿ ತಿಳಿಸಿದ್ದಾರೆ. ಪಾಕ್ ಮತ್ತು ಭಾರತಕ್ಕೆ ಯುದ್ಧದ ಪರಿಣಾಮಗಳ ಬಗ್ಗೆ ಅರಿವಿದೆ ಹೀಗಾಗಿ ತಾನಾಗಿಯೇ ಯುದ್ಧಕ್ಕೆ ಮುಂದಾಗುವ ಸಾಧ್ಯತೆ ಕಡಿಮೆ. ಆದರೆ ಅನಿರೀಕ್ಷಿತ ಯುದ್ಧವನ್ನು ಅಲ್ಲಗಳೆಯಲಾಗದು ಎಂದಿದ್ದಾರೆ.

ಕಾಶ್ಮೀರಿಗಳ ತಾಳ್ಮೆ ಪರೀಕ್ಷೆ

‘ನಾವು ಶಾಂತಿಯನ್ನು ಬಯಸುತ್ತೇವೆ. ಆದರೆ, ಮೋದಿ ಅಮಾಯಕ ಕಾಶ್ಮೀರಿಗರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದಾರೆ. ಕಾಶ್ಮೀರಿಗರು ಭಾರತದ ವಿರುದ್ಧ ನಿಲ್ಲಬೇಕು. ಭಾರತೀಯ ಪಡೆಗಳ ಹಿಂಸೆಯಿಂದ ಬೇಸತ್ತು 20 ವರ್ಷದ ಕಾಶ್ಮೀರಿ ಯುವಕನೊಬ್ಬ ಪುಲ್ವಾಮಾದಲ್ಲಿ ಆತ್ಮಾಹುತಿ ದಾಳಿ ನಡೆಸಿದ. ಆದರೆ, ಭಾರತ ಇದರ ಆರೋಪವನ್ನು ನಮ್ಮ ಮೇಲೆ ಹೊರಿಸಿತು. ಬಾಲಾಕೋಟ್​ನಲ್ಲಿ ಏರ್​ಸ್ಟ್ರೈಕ್ ನಡೆಸಿತು. ನಾವು ಅವರ ಜೆಟ್​ನ್ನು ಹೊಡೆದುರುಳಿಸಿದೆವು. ಬಂಧಿತನಾದ ಪೈಲಟ್​ನನ್ನು ಬಿಡುಗಡೆ ಮಾಡುತ್ತಿರಲಿಲ್ಲ. ಅನಾವಶ್ಯಕವಾಗಿ ಯುದ್ಧ ಬೇಡವೆಂದು ಪೈಲಟ್​ನ್ನು ಹಿಂದಕ್ಕೆ ಕಳುಹಿಸಿಕೊಟ್ಟೆವು. ಆದರೆ, ಮೋದಿ ಅಂತಾರಾಷ್ಟ್ರೀಯ ಒತ್ತಡದ ಕಾರಣದಿಂದ ಪೈಲಟ್​ನ್ನು ಬಿಡುಗಡೆ ಮಾಡಲಾಗಿದೆ ಎಂದು ದೇಶದ ಜನರನ್ನು ನಂಬಿಸುತ್ತಿದ್ದಾರೆ ಎಂದು ಖಾನ್ ಹೇಳಿದ್ದಾರೆ.

ಟ್ರೋಲ್ ಆಯ್ತು ಟ್ವೀಟ್

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮತ್ತೊಮ್ಮೆ ಟ್ವಿಟ್ಟರ್​ನಲ್ಲಿ ಭಾರಿ ಟ್ರೋಲ್​ಗೊಳಗಾಗಿದ್ದಾರೆ. ಇತ್ತೀಚೆಗೆ ಜಿನೀವಾದಲ್ಲಿ ನಡೆದ ವಿಶ್ವ ಸಂಸ್ಥೆ ಮಾನವ ಹಕ್ಕು ಮಂಡಳಿ ಸಭೆಯಲ್ಲಿ ಭಾಗವಹಿಸಿದ್ದ ದೇಶಗಳು ಜಮ್ಮು-ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನದ ನಿಲುವಿಗೆ ಬೆಂಬಲ ಸೂಚಿಸಿವೆೆ ಎಂದು ಹೇಳಲು ಹೋಗಿ ಟ್ರೋಲ್​ಗೊಳಗಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಇಮ್ರಾನ್, ಕಾಶ್ಮೀರದಲ್ಲಿ ಹೆಚ್ಚುವರಿ ಭದ್ರತಾ ಪಡೆಗಳ ನಿಯೋಜನೆ, ನಾಯಕರ ಬಂಧನ, ಇತರ ನಿರ್ಬಂಧಗಳನ್ನು ತೊಡೆದು ಹಾಕಿ ಕಾಶ್ಮೀರಿಗರನ್ನು ರಕ್ಷಿಸಬೇಕು, ಯುಎನ್​ಎಸ್​ಸಿ ನಿರ್ಣಯದಂತೆ ಕಾಶ್ಮೀರ ವಿವಾದವನ್ನು ಬಗೆಹರಿಸಿಕೊಳ್ಳಬೇಕೆಂಬ ಪಾಕಿಸ್ತಾನದ ಬೇಡಿಕೆಗೆ ಸೆ.10ರಂದು ಮಾನವಹಕ್ಕು ಮಂಡಳಿ ಸಭೆಯಲ್ಲಿ ಬೆಂಬಲಿಸಿದ 58 ರಾಷ್ಟ್ರಗಳಿಗೆ ಧನ್ಯವಾದ ಸಲ್ಲಿಸುತ್ತೇನೆ. ಅವರ ನಿಲುವನ್ನು ಪ್ರಶಂಸಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು. ಆದರೆ, ವಿಶ್ವಸಂಸ್ಥೆಯ ಮಾನವಹಕ್ಕು ಮಂಡಳಿಯಲ್ಲಿ 47 ಸದಸ್ಯ ರಾಷ್ಟ್ರಗಳಿವೆ. ಹೀಗಾಗಿ ಪಾಕ್ ಬೆಂಬಲಕ್ಕೆ ನಿಂತ 58 ರಾಷ್ಟ್ರಗಳು ಯಾವುವು ಎಂದು ಕಾಲೆಳೆದಿದ್ದಾರೆ.

ಅಮೆರಿಕದ ಹಣದಲ್ಲಿ ಉಗ್ರರಿಗೆ ತರಬೇತಿ ಎಂದ ಇಮ್ರಾನ್ 

ಭಯೋತ್ಪಾದನೆ ನಿಯಂತ್ರಣಕ್ಕಾಗಿ ಅಮೆರಿಕದಿಂದ ಹರಿದುಬರುವ ಸಾವಿರಾರು ಕೋಟಿ ಡಾಲರ್ ಅನುದಾನ ವನ್ನು ಆಫ್ಘಾನ್ ಯುದ್ಧ ಸಂದರ್ಭದಲ್ಲಿ ಪಾಕ್ ಉಗ್ರ ಚಟುವಟಿಕೆಗಳಿಗೆ ಬಳಸಿದ್ದು ನಿಜ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

1980ರ ದಶಕದಲ್ಲಿ ಅಮೆರಿಕ ಹಣಕಾಸು ನೆರವು ಹಾಗೂ ಗುಪ್ತಚರ ಸಂಸ್ಥೆ ಸಿಐಎ ನೆರವಿನೊಂದಿಗೆ ಜಿಹಾದಿಗಳಿಗೆ ಪಾಕಿಸ್ತಾನದಲ್ಲಿ ತರಬೇತಿ ನೀಡಲಾಗಿತ್ತು ಎಂದು ಇಮ್ರಾನ್ ಖಾನ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಪಾಕಿಸ್ತಾನದಲ್ಲಿ ಜಿಹಾದಿಗಳು ಬೇರು ಬಿಡಲು ಅಮೆರಿಕ ಕಾರಣ. ಉಗ್ರರನ್ನು ಬೆಳೆಸಲು ಅಮೆರಿಕ ಉತ್ತೇಜಿಸಿತು. ಅದು ನೀಡಿದ ಹಣದಿಂದಲೇ ಉಗ್ರರಿಗೆ ತರಬೇತಿ ನೀಡಲಾಯಿತು ಎಂದು ‘ರಷ್ಯಾ ಟುಡೇ’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

ಅಮೆರಿಕ ವಿರುದ್ಧ ಕಿಡಿ: 1980ರ ದಶಕದಲ್ಲಿ ಅಫ್ಘಾನಿಸ್ತಾನದ ಮೇಲೆ ಹಿಡಿತ ಹೊಂದಿದ್ದ ಸೋವಿಯತ್ ಯೂನಿಯನ್ ವಿರುದ್ಧ ಮುಜಾಹಿದ್ದೀನ್​ಗಳನ್ನು ಹುಟ್ಟುಹಾಕಲಾಯಿತು. ಜಿಹಾದಿಗಳಿಗೆ ಅಮೆರಿಕವೇ ಪಾಕಿಸ್ತಾನದಲ್ಲಿ ತರಬೇತಿ ನೀಡಿತ್ತು. ಸಿಐಎಯಿಂದ ಕಠಿಣ ತರಬೇತಿಗಳನ್ನೂ ನೀಡಲಾಯಿತು. ಇದಕ್ಕೆ ಅಮೆರಿಕ ಹಣವನ್ನೂ ಪೂರೈಸುತ್ತಿತ್ತು. ಇದರ ಪರಿಣಾಮವಾಗಿ 10 ವರ್ಷಗಳ ನಂತರ ಅಫ್ಘಾನಿಸ್ತಾನದ ಮೇಲೆ ಅಮೆರಿಕ ಹಿಡಿತ ಸಾಧಿಸುವಂತಾಯಿತು. ಆದರೆ ಈಗ ಪಾಕಿಸ್ತಾನ ವಿರುದ್ಧವೇ ಆರೋಪ ಮಾಡಲಾಗುತ್ತಿದೆ ಎಂದು ಅಮೆರಿಕವನ್ನು ಇಮ್ರಾನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಅಂದು ಪಾಕ್ ತಟಸ್ಥ ನೀತಿ ಅನುಸರಿಸಿದ್ದರೆ ಈಗ ತಾಲಿಬಾನ್ ಮುಂತಾದ ಉಗ್ರ ಸಂಘಟನೆಗಳನ್ನು ಎದುರಿಸುವ ಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ.

ಹಫೀಜ್ ಸಯೀದ್​ನ ಜಮಾತ್-ಉದ್-ದಾವಾ ಸೇರಿ ಹಲವು ಉಗ್ರ ಸಂಘಟನೆಗಳಿಗೆ ನೂರಾರು ಕೋಟಿ ಹಣ ಸಂದಾಯವಾಗುತ್ತಿದೆ.

| ಇಜಾಜ್ ಅಹ್ಮದ್ ಶಾ, ನಿವೃತ್ತ ಬ್ರಿಗೇಡಿಯರ್, ಪಾಕ್​ನ ಆಂತರಿಕಾ ಭದ್ರತಾ ಸಚಿವ

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....