ವಾಲ್ನೂರು ತ್ಯಾಗತ್ತೂರಲ್ಲಿ 23 ಕಾಡಾನೆಗಳ ಹಿಂಡು ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ವಾಲ್ನೂರು ತ್ಯಾಗತ್ತೂರಲ್ಲಿ 23 ಕಾಡಾನೆಗಳ ಹಿಂಡು ಕಂಡು ಬಂದಿದ್ದು ಕಾಡಂಚಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಕೊಡಗು ಜಿಲ್ಲೆಯ ಗ್ರಾಮವೊಂದರಲ್ಲಿ‌ ಗಜಪಡೆ ಪರೇಡ್ ನಡೆಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿಯ ಕ್ಯಾಮರಾದಲ್ಲಿ ಕಾಡಾನೆ ಹಿಂಡಿನ ದೃಶ್ಯ ಸೆರೆಯಾಗಿದೆ.

ನಾಗರಹೊಳೆ ಅಭಯಾರಣ್ಯಕ್ಕೆ ಸಮೀಪವಿರುವ ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆಗಳು ಆಗಿಂದಾಗೆ ಕಂಡು ಬರುತ್ತಿದ್ದು ಇವುಗಳಿಂದ ಹಲವೆಡೆ ಜೀವಹಾನಿಯಾದರೆ, ಇನ್ನು ಹಲವೆಡೆ ಲಕ್ಷಾಂತರ ರೂ. ಮೌಲ್ಯದ ಬೆಳೆಗಳು ನಾಶವಾಗಿವೆ.

ಇತ್ತೀಚಿನ ದಿನಗಳಲ್ಲಿ ಮಡಿಕೇರಿ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಹಲವು ಜನವಸತಿ ಪ್ರದೇಶದಲ್ಲಿ ಕಾಡಾನೆಗಳು ಹೆಚ್ಚಾಗಿ ಕಂಡು ಬರುತ್ತಿದ್ದು ಕಾಡಾನೆ ಹಾಗೂ ಮಾನವನ ನಡುವಿನ ಸಂಘರ್ಷಕ್ಕೆ ಮತ್ತೊಂದು ದಾಖಲೆಯಾಗಿದೆ.(ದಿಗ್ವಿಜಯ ನ್ಯೂಸ್​)

 

Leave a Reply

Your email address will not be published. Required fields are marked *