More

    ಅಟಲ್ ಸಮರ್ಪಣಾ ಭಾವ ಬಿಜೆಪಿ ಬುನಾದಿ

    ಉಡುಪಿ: ಭಾರತೀಯ ಜನತಾ ಪಕ್ಷಕ್ಕೆ ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಕೊಡುಗೆ ಅನನ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯ್ಲಡಿ ಸುರೇಶ್ ನಾಯಕ್ ಬಣ್ಣಿಸಿದರು.

    ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ವತಿಯಿಂದ ಶುಕ್ರವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆ ಸಹಯೋಗದಲ್ಲಿ ವಾಜಪೇಯಿ ಅವರ 96ನೇ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿದ ಬೃಹತ್ ರಕ್ತದಾನ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಾಜಪೇಯಿ ಅವರ ಸಮರ್ಪಣಾಭಾವ ಪಕ್ಷಕ್ಕೆ ಗಟ್ಟಿ ಬುನಾದಿಯಾಗಿದೆ. ಪಕ್ಷದ ನಾಯಕರು, ಕಾರ್ಯಕರ್ತರಿಂದ ಕೃಷಿ ಮಸೂದೆ ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದರು.
    ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಡಾ. ಪ್ರದೀಪ್ ವರ್ಣೇಕರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ರಾಜ್ಯ ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಸಹಸಂಚಾಲಕ ಅಣ್ಣಯ್ಯ ಕುಲಾಲ್, ಜಿಲ್ಲಾ ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಸಹಸಂಚಾಲಕ ರಮಾನಂದ ಕಾಮತ್ ಉಪಸ್ಥಿತರಿದ್ದರು. ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿದರು.

    ಯುವ ಮೋರ್ಚಾದಿಂದ ಗೋಶಾಲೆ ಸ್ವಚ್ಛತೆ
    ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ನೀಲಾವರ ಗೋಶಾಲೆಯಲ್ಲಿ ವಾಜಪೇಯಿ ಜನ್ಮದಿನಾಚರಣೆ ಅಂಗವಾಗಿ ಮತ್ತು ರಾಜ್ಯ ಸರ್ಕಾರದ ಗೋಹತ್ಯೆ ನಿಷೇಧ ಮಸೂದೆ ಸ್ವಾಗತಿಸಿ ಗೋಶಾಲೆಯನ್ನು ಸ್ವಚ್ಛಗೊಳಿಸಿ, ಗೋಪೂಜೆ ಮೂಲಕ ಆಚರಿಸಿದರು. ಯುವಮೋರ್ಚಾ ಜಿಲ್ಲಾ ಅಧ್ಯಕ್ಷರಾದ ವಿಖ್ಯಾತ್ ಶೆಟ್ಟಿ, ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ಕುಮಾರಿ ಶ್ವೇತಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶರತ್ ಶೆಟ್ಟಿ ಉಪ್ಪುಂದ, ವಿನೋದ್ ಪೂಜಾರಿ ಶಾಂತಿನಿಕೇತನ, ಕಾರ್ಯದರ್ಶಿ ಅಭಿರಾಜ್ ಸುವರ್ಣ ಭಾಗವಹಿಸಿದ್ದರು.

    ಹಿಂದುಳಿದ ಮೋರ್ಚಾದಿಂದ ಆಹಾರ ವಿತರಣೆ
    ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ನೇತೃತ್ವದಲ್ಲಿ ಜಿಲ್ಲೆಯ ಆರು ಮಂಡಲಗಳ ಹಿಂದುಳಿದ ವರ್ಗಗಳ ಮೋರ್ಚಾಗಳ ಸಹಯೋಗದೊಂದಿಗೆ ಶ್ರೀ ಕೃಷ್ಣ ಬಾಲ ನಿಕೇತನ ಅನಾಥಶ್ರಮಕ್ಕೆ ಆಹಾರ ಸಾಮಗ್ರಿ ನೀಡುವ ಮೂಲಕ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ಆಚರಿಸಲಾಯಿತು. ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾ ಜಿಲ್ಲಾ ಅಧ್ಯಕ್ಷ ಸುರೇಂದ್ರ ಪಣಿಯೂರು, ರಾಜ್ಯ ಬಿಜೆಪಿ ವೈದ್ಯಕೀಯ ಪ್ರಕೋಷ್ಠ ಸಹ ಸಂಚಾಲಕ ಅಣ್ಣಯ್ಯ ಕುಲಾಲ್, ಜಿಲ್ಲಾ ಉಪಾಧ್ಯಕ್ಷ ಸುಧೀರ್ ಕೆ.ಎಸ್. ಮತ್ತು ಗಣೇಶ್ ಕುಮಾರ ಉದ್ಯಾವರ, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕುಲಾಲ್ ಕಡಿಯಾಳಿ, ಕಾರ್ಯದರ್ಶಿ ರಾಕೇಶ್ ಜೋಗಿ , ಕೋಶಾಧಿಕಾರಿ ಸತೀಶ್ ಪೂಜಾರಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಧರ ಅಮೀನ್, ಉಡುಪಿ ಮಂಡಲ ಹಿಂದುಳಿದ ವರ್ಗದ ಮೋರ್ಚಾ ಉಪಾಧ್ಯಕ್ಷ ಸುರೇಶ ಶೇರಿಗಾರ್, ಪ್ರಧಾನ ಕಾರ್ಯದರ್ಶಿ ಪ್ರಸಾದ ದೇವಾಡಿಗ, ಕೋಶಾಧಿಕಾರಿ ನಾಗರಾಜ ಕರ್ಕೇರ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts