

ಬೆಂಗಳೂರು: ರಾಜ್ಯ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಅವರನ್ನು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಈವರೆಗೆ ಆ ಹುದ್ದೆಯಲ್ಲಿದ್ದ ಡಾ. ರಜನೀಶ್ ಗೋಯಲ್ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ. ಹಾಗಾಗಿ ಅವರನ್ನು ಬಿಡುಗಡೆ ಮಾಡಲಾಗಿದೆ.
ಎಲ್.ಕೆ.ಅತೀಕ್ ಅವರು ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿಯೂ ಮುಂದಿನ ಆದೇಶದವರೆಗೆ ಹೆಚ್ಚುವರಿ ಹೊಣೆ ನಿರ್ವಹಿಸಲಿದ್ದಾರೆ.