More

    ನ.6ರಿಂದ 8ರವರೆಗೆ ಜೂನಿಯರ್ ಅಥ್ಲೆಟಿಕ್ ಮೀಟ್ : ಅಥ್ಲೆಟಿಕ್ ಅಸೋಸಿಯೇಷನ್ ಆರ್ಥಿಕ ನಿರ್ದೇಶಕ ಮಾಹಿತಿ

    ಕೋಲಾರ: ರಾಜ್ಯ ಅಂತರ ಜಿಲ್ಲಾ ಜೂನಿಯರ್ ಅಥ್ಲೆಟಿಕ್ ಮೀಟ್ ನ.6ರಿಂದ 8ರವರೆಗೆ ಕೋಲಾರದಲ್ಲಿ ನಡೆಯಲಿದೆ ಎಂದು ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ಆರ್ಥಿಕ ನಿರ್ದೇಶಕ, ಜಿಲ್ಲಾ ಕಾರ್ಯದರ್ಶಿ ಕೆ.ಜಯದೇವ್ ತಿಳಿಸಿದರು.

    ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 9ರಂದು ನಡೆದ ಸಭೆಯಲ್ಲಿ 14 ವರ್ಷ, 16 ವರ್ಷ, 18 ಹಾಗೂ 20 ವರ್ಷದೊಳಗಿನ ಹುಡುಗ, ಹುಡುಗಿಯರ ವರ್ಗದಲ್ಲಿ ಅಥ್ಲೆಟಿಕ್ ಕ್ರೀಡಾಕೂಟವನ್ನು ಕೋಲಾರದಲ್ಲಿ ನಡೆಸಲು ಅಸೋಸಿಯೇಷನ್ ಅನುಮತಿ ನೀಡಿದೆ ಎಂದರು.

    ಅಥ್ಲೆಟಿಕ್ ಟಿಕ್ ಮೀಟ್‌ನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 2300 ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆ ಇದೆ. ಕರೊನಾ ಹಿನ್ನೆಲೆಯಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳ ಸಂಖ್ಯೆಯಲ್ಲಿ ಸ್ವಲ್ಪ ಏರುಪೇರಾಗಬಹುದು. ಕ್ರೀಡಾಕೂಟದಲ್ಲಿ ಉತ್ತಮ ನಿರ್ವಹಣೆ ತೋರುವ ಕ್ರೀಡಾಪಟುಗಳನ್ನು 2021ರ ಜನವರಿ 28 ಮತ್ತು 29ರಂದು ತಮಿಳುನಾಡಿನಲ್ಲಿ ನಡೆಯುವ ದಕ್ಷಿಣ ವಲಯ ಅಂತಾರಾಜ್ಯ ಅಥ್ಲೆಟಿಕ್ ಮೀಟ್‌ಗೆ ಆಯ್ಕೆ ಮಾಡಲಾಗುವುದು ಎಂದರು.

    ಕೆಜಿಎಫ್‌ನ ಬೆಮೆಲ್ ಅಥವಾ ಮಾಲೂರಿನಲ್ಲಿ ಅಥ್ಲೆಟಿಕ್ ಮೀಟ್ ನಡೆಸಲು ನಿರ್ಧರಿಸಲಾಗಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ನೋಂದಣಿ ದಿನಾಂಕ ಇನ್ನಿತರ ವಿಚಾರಗಳ ಬಗ್ಗೆ ಅಸೋಸಿಯೇಷನ್‌ನ ಮುಂದಿನ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದರು.

    ಜಿಲ್ಲಾ ಕೇಂದ್ರದಲ್ಲಿನ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಕಾರ್ಯ ಅರ್ಧಕ್ಕೆ ಸ್ಥಗಿತಗೊಂಡಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್, ನಾಗೇಶ್, ಶಾಸಕರದ ಕೆ. ಶ್ರೀನಿವಾಸಗೌಡ, ಇಂಚರ ಗೋವಿಂದರಾಜು, ಮಾಜಿ ಸಂಸದ ಕೆ.ಎಚ್.ಮುನಿಯಪ್ಪ, ಡಿಸಿ ಸಿ ಸತ್ಯಭಾಮ, ಸಿಇಒ ಎಂ.ಆರ್. ರವಿಕುಮಾರ್ ಗಮನಕ್ಕೆ ತರಲಾಗಿದೆ. ಕೈಗಾರಿಕೆಗಳ ಸಿಎಸ್‌ಆರ್ ನಿಧಿ ಬಳಸಿಕೊಂಡು ಪೂರ್ಣಗೊಳಿಸುವ ಬಗ್ಗೆ ಜಿಲ್ಲಾಡಳಿತ ಕ್ರಮ ವಹಿಸಬೇಕು ಎಂದರು.

    ಅಸೋಸಿಯೇಷನ್ ಅಧ್ಯಕ್ಷ ಎಚ್.ಜಗನ್ನಾಥನ್ ಮಾತನಾಡಿ, ಸುಸಜ್ಜಿತ ಕ್ರೀಡಾಂಗಣ ಕೊರತೆಯಿಂದ ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಕೂಟ ನಡೆಸಲು ಸಾಧ್ಯವಾಗುತ್ತಿಲ್ಲ. ರಾಜ್ಯ, ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಜತೆ ಚರ್ಚಿಸಿ ಕ್ರೀಡಾಕೂಟದ ಮುಂದಿನ ಸಿದ್ಧತೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
    ಹಿರಿಯ ಕ್ರೀಡಾಪಟುಗಳಾದ ಅಂಚೆ ಅಶ್ವತ್ಥ್, ಹಾಬಿ ರಮೇಶ್, ಅಸೋಸಿಯೇಷನ್ ಪದಾಧಿಕಾರಿಗಳಾದ ಶ್ರೀನಿವಾಸ್, ಗೌಸ್‌ಖಾನ್, ರಾಜೇಶ್, ನಾಗೇಶ್, ರಾಷ್ಟ್ರೀಯ ಕ್ರೀಡಾಪಟು ಕಾಶಿ ಇತರರು ಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts