ನವದೆಹಲಿ: ಆಮ್ ಆದ್ಮಿ ಪಕ್ಷವು ಇಂದು(ಭಾನುವಾರ, ಫೆಬ್ರವರಿ 23) ಪಕ್ಷದ ಪ್ರಧಾನ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಿತು. ಇದರಲ್ಲಿ ವಿರೋಧ ಪಕ್ಷದ ನಾಯಕನ ಹೆಸರನ್ನು ಅಂತಿಮಗೊಳಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಅತಿಶಿ ಅವರನ್ನು ದೆಹಲಿ ವಿಧಾನಸಭೆಯ(Delhi Assembly) ವಿರೋಧ ಪಕ್ಷದ ನಾಯಕಿಯನ್ನಾಗಿ ನೇಮಿಸಲಾಗುವುದು ಎಂದು ಆಮ್ ಆದ್ಮಿ ಪಕ್ಷ ಘೋಷಿಸಿದೆ. ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದರು.
ಇದನ್ನು ಓದಿ: ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡ ನಟಿ; ಸದಸ್ಯತ್ವ ನೀಡಿ ಪಕ್ಷಕ್ಕೆ ಸ್ವಾಗತಿಸಿದ ಅರವಿಂದ್ ಕೇಜ್ರಿವಾಲ್ | Aam Aadmi Party
ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಶಾಸಕರು ಅತಿಶಿ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಿದರು. ಅದರ ನಂತರ ದೆಹಲಿಯ ಮಾಜಿ ಸಿಎಂ ಅತಿಶಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬುದು ಈಗ ಸ್ಪಷ್ಟವಾಗಿದೆ. ಗೋಪಾಲ್ ರೈ ಇದನ್ನು ಔಪಚಾರಿಕವಾಗಿ ಘೋಷಿಸಿದ್ದಾರೆ.
ಇಂದು ಆಮ್ ಆದ್ಮಿ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು ಶಾಸಕರು ಅತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ದೆಹಲಿಯ ಮುಖ್ಯಮಂತ್ರಿ ಹುದ್ದೆಯ ಜವಾಬ್ದಾರಿಯನ್ನು ಅತಿಶಿ ಅವರು ಉತ್ತಮವಾಗಿ ನಿರ್ವಹಿಸಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ ಕೇಜ್ರಿವಾಲ್ ಸರ್ಕಾರ ಮಾಡಿದ ಕೆಲಸವನ್ನು ರಕ್ಷಿಸುವ ಮತ್ತು ಬಿಜೆಪಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಜವಾಬ್ದಾರಿ ಅವರ ಮೇಲಿರುತ್ತದೆ ಎಂದು ಗೋಪಾಲ್ ರೈ ಹೇಳಿದರು.
ವಿರೋಧ ಪಕ್ಷದ ನಾಯಕಿಯಾಗಿ ಆಯ್ಕೆಯಾದ ನಂತರ ಮಾತನಾಡಿದ ಅತಿಶಿ, ನನ್ನನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ಮಾಡಿದ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಎಲ್ಲಾ ಶಾಸಕರಿಗೆ ನಾನು ಧನ್ಯವಾದ ಹೇಳುತ್ತೇನೆ. ಬಿಜೆಪಿ ಏನೇ ಭರವಸೆಗಳನ್ನು ನೀಡಿದರೂ ವಿರೋಧ ಪಕ್ಷವಾಗಿ ನಾವು ಆ ಎಲ್ಲಾ ಭರವಸೆಗಳನ್ನು ಈಡೇರಿಸುವ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇವೆ. ಮಹಿಳೆಯರಿಗೆ ನೀಡುತ್ತಿರುವ ಭರವಸೆಯೆಂದರೆ ಪ್ರಧಾನಿ ಮೋದಿ ಅವರು ಮೊದಲ ಸಂಪುಟ ಸಭೆಯಲ್ಲಿಯೇ ನೀಡಿದ ತಿಂಗಳಿಗೆ 2,500 ರೂ. ಖಾತರಿಯನ್ನು ಅವರು ಪಡೆಯುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ ಎಂದಿದ್ದಾರೆ.
ದೆಹಲಿ ವಿಧಾನಸಭಾ ಅಧಿವೇಶನ ಫೆಬ್ರವರಿ 24ರಂದು ಅಂದರೆ ನಾಳೆ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗಲಿದೆ. ಮೊದಲು ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಧ್ಯಾಹ್ನ ವಿಧಾನಸಭಾ ಸ್ಪೀಕರ್ ಚುನಾವಣೆ ನಡೆಯಲಿದೆ. ಫೆಬ್ರವರಿ 25ರಂದು ಲೆಫ್ಟಿನೆಂಟ್ ಗವರ್ನರ್ ಅವರ ಭಾಷಣ ನಡೆಯಲಿದೆ. ಫೆಬ್ರವರಿ 27 ರಂದು ಭಾಷಣದ ಮೇಲೆ ವಂದನಾ ನಿರ್ಣಯ ಮಂಡನೆಯಾಗಲಿದೆ. ಇದಾದ ನಂತರ ವಿಧಾನಸಭೆಯ ಉಪಸಭಾಪತಿಯನ್ನು ಆಯ್ಕೆ ಮಾಡಲಾಗುತ್ತದೆ. ಫೆಬ್ರವರಿ 26 ರಂದು ಮಹಾಶಿವರಾತ್ರಿ ಇರುವುದರಿಂದ ಅಧಿವೇಶನವನ್ನು ಕರೆಯಲಾಗಿಲ್ಲ. ಅಧಿವೇಶನದ ಮೂರನೇ ದಿನ ಅಂದರೆ ಫೆಬ್ರವರಿ 27 ರಂದು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಜಟಾಪಟಿ ನಡೆಯುವ ಸಾಧ್ಯತೆ ಇದೆ.(ಏಜೆನ್ಸೀಶ್)
ಅರವಿಂದ್ ಕೇಜ್ರಿವಾಲ್ ಸೋಲಿಗೆ ಇದೇ ಕಾರಣ.. ಅಣ್ಣಾ ಹಜಾರೆ ಹೇಳಿದ್ದೇನು? | Anna Hazare