

ನವದೆಹಲಿ: ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯಂದು ದೆಹಲಿ ಸರ್ಕಾರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಅತಿಶಿ ಅವರು ತ್ರಿವರ್ಣ ಧ್ವಜವನ್ನು ಹಾರಿಸಲಿದ್ದಾರೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅತಿಶಿ ಅವರಿಗೆ ರಾಷ್ಟ್ರಧ್ವಜಾರೋಹಣ ಮಾಡುವಂತೆ ಹೇಳಿದ್ದಾರೆ ಎಂದು ಪರಿಸರ ಸಚಿವ ಗೋಪಾಲ್ ರಾಯ್ ಸೋಮವಾರ ಹೇಳಿದ್ದಾರೆ.
''ಆ.12ರಂದು ಮುಖ್ಯಮಂತ್ರಿ ಕೇಜ್ರಿವಾಲ್ರನ್ನು ಭೇಟಿಯಾಗಿದ್ದು, ಆಗಸ್ಟ್ 15ರಂದು ಛತ್ರಸಾಲ್ ಕ್ರೀಡಾಂಗಣದಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ಮಾಡಬೇಕು ಎಂದು ಸಿಎಂ ತಿಳಿಸಿದರು. ಅದಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಆಡಳಿತ ಇಲಾಖೆಗೆ ಬರೆದ ಪತ್ರದಲ್ಲಿ ರಾಯ್ ತಿಳಿಸಿದ್ದಾರೆ.
ಪ್ರತಿ ವರ್ಷ ದೆಹಲಿ ಸರ್ಕಾರವು ಛತ್ರಸಾಲ್ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಯೋಜಿಸುತ್ತದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ತ್ರಿವರ್ಣ ಧ್ವಜಾರೋಹಣ ಮಾಡುತ್ತಾರೆ.
ಆದರೆ ಈ ಬಾರಿ ಅತಿಶಿ ಧ್ವಜಾರೋಹಣ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಪತ್ರ ಬರೆದಿದ್ದಾರೆ ಎಂದು ಇದೇ ತಿಂಗಳ 7 ರಂದು 'ಆಪ್' ಪ್ರಕಟಿಸಿತು. ಈ ನಡುವೆ ಧ್ವಜಾರೋಹಣಕ್ಕೆ ಸಂಬಂಧಿಸಿದಂತೆ ಎಎಪಿಯಿಂದ ಯಾವುದೇ ಮಾಹಿತಿ ಬಂದಿಲ್ಲ ಎಂದು ಎಲ್ಜಿ ಕಚೇರಿ ತಿಳಿಸಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ.