More

    ಅರ್ಜಿಯೊಂದಿಗೆ ಸೂಕ್ತ ದಾಖಲಾತಿ ಲಗತ್ತಿಸಿ

    ಮದ್ದೂರು: ಜನತಾ ದರ್ಶನದಲ್ಲಿ ಸಲ್ಲಿಸುವ ಕುಂದುಕೊರತೆ ಅರ್ಜಿಯೊಂದಿಗೆ ಸೂಕ್ತ ದಾಖಲಾತಿ ಲಗತ್ತಿಸಿದರೆ ಒಂದು ತಿಂಗಳೊಳಗಾಗಿ ಸಮಸ್ಯೆ ಪರಿಹರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

    ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸೋಮವಾರ ಜನತಾ ದರ್ಶನ ನಡೆಸಿದ ಸಂದರ್ಭ ಮರಳಿಗ ಗ್ರಾಮದಲ್ಲಿ ಆಯೋಜಿಸಿದ್ದ ಜನತಾ ದರ್ಶನದಲ್ಲಿ ಮಾತನಾಡಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಅರ್ಜಿ ವಿಲೇವಾರಿ ತಡವಾಗಬಹುದು. ಚುನಾವಣೆ ನಂತರ ಜನತಾ ದರ್ಶನ ನಿರಂತರವಾಗಿ ನಡೆಯಲಿದೆ ಎಂದರು.

    ಮರಳಿಗ ಗ್ರಾಮದ 5047 ಕುಟುಂಬ ಒಂದಲ್ಲ ಒಂದು ಗ್ಯಾರಂಟಿ ಯೋಜನೆಯ ಲಾಭ ಪಡೆಯುತ್ತಿದೆ. ಅಲ್ಲದೇ, ಜನಸಾಮಾನ್ಯರನ್ನು ಸಬಲೀಕರಣಗೊಳಿಸಲು ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು, ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಜನರ ಸಮಸ್ಯೆಗಳಿಗೆ ಸ್ಪಂದಿಸಲಿದೆ ಎಂದರು.

    ಜಿಲ್ಲೆಯಲ್ಲಿ ಬರ ಇರುವುದರಿಂದ ಪ್ರತಿ ರೈತನಿಗೆ ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರವಾಗಿ 2000 ರೂ.ವನ್ನು ನೇರವಾಗಿ ಖಾತೆಗೆ ಜಮೆ ಮಾಡಲಾಗಿದೆ. ಬೆಳೆ ವಿಮೆ ಪಡೆದಿರುವವರಿಗೆ ಈಗಾಗಲೇ ಪರಿಹಾರ ನೀಡಲಾಗಿದ್ದು, ಉಳಿದವರಿಗೆ ಮಾರ್ಚ್ ಅಂತ್ಯಕ್ಕೆ ನೀಡಲಾಗುವುದು ಎಂದರು.

    ಮರಳಿಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ನೀಡಬೇಕೆಂಬ ಉದ್ದೇಶದಿಂದ ಸ್ವಸಹಾಯ ಗುಂಪುಗಳಿಗೆ 2 ಕೋಟಿ ರೂ. ನೀಡಲಾಗುತ್ತಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕಾಲುವೆ, ರಸ್ತೆಗಳ ಅಭಿವೃದ್ಧಿಯಾಗುತ್ತಿದ್ದು, ಮುಂದಿನ ಮೂರು ವರ್ಷದೊಳಗೆ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ ಎಂದು ತಿಳಿಸಿದರು.

    ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಜೋಗಿ ಗೌಡ, ಉಪವಿಭಾಗಾಧಿಕಾರಿ ಮಹೇಶ್, ತಹಸೀಲ್ದಾರ್ ಸೋಮಶೇಖರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಸುರೇಶ್, ಉಪಾಧ್ಯಕ್ಷೆ ನೀಲಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್, ಲೋಕಸಭಾ ಸಂಭಾವ್ಯ ಅಭ್ಯರ್ಥಿ ವೆಂಕಟರಮಣಗೌಡ (ಸ್ಟಾರ್ ಚಂದ್ರು), ತಾಪಂ ಇಒ ಮಂಜುನಾಥ್, ನರೇಗಾ ಸಹಾಯಕ ನಿರ್ದೇಶಕ ಟಿ.ವಿ.ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್. ಕಾಳೀರಯ್ಯ, ಮುಖಂಡರಾದ ಎಂ.ಬಿ. ವೆಂಕಟೇಶ್, ವಾಸು, ಸ್ವಾಮಿ, ಕೋಣಸಾಲೆ ರಘು, ಯೋಗಾನಂದ, ಸೋಮಶೇಖರ್, ಚೆನ್ನಕೇಶವ, ಮರಲಿಂಗಯ್ಯ, ವೆಂಕಟೇಶ್, ಕೃಷ್ಣೇಗೌಡ, ಶ್ರೀನಿವಾಸ್, ರವೀಂದ್ರ, ವಕೀಲ ಸತ್ಯಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts