More

    ಚುನಾವಣೆಯಲ್ಲಿ ಕೈ ಗೆಲ್ಲುವ ಆತಂಕಕ್ಕೆ ದಾಳಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

    ನೆಲಮಂಗಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ನಡೆಸಿದ ದಾಳಿಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭನೆ ನಡೆಸಿದರು.

    ತಾಲೂಕು ಕಚೇರಿ ಎದುರು ಮಂಗಳವಾರ ಸಮಾವೇಶಗೊಂಡ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

    ಮಾಜಿ ಸಚಿವ ಅಂಜನಾಮೂರ್ತಿ ಮಾತನಾಡಿ, ಸಿಬಿಐ ಮತ್ತು ಇಡಿ ಅಧಿಕಾರಿಗಳು ಬಿಜೆಪಿ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಶಿರಾ ಹಾಗೂ ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮೇಲುಗೈ ಆಗಬಹುದು ಎಂಬ ಭೀತಿಯಲ್ಲಿ ಬಿಜೆಪಿ ಸರ್ಕಾರ, ಕಾಂಗ್ರೇಸ್ ಮುಖಂಡರ ಮನೆಗಳ ಮೇಲೆ ಸಿಬಿಐ ದಾಳಿ ಮಾಡಿಸುತ್ತಿದೆ ಎಂದು ಆರೋಪಿಸಿದರು.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ. ನಾಗರಾಜು ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ರಾಜ್ಯದಲ್ಲಿ ಬಲವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಬಿಜೆಪಿ ಸರ್ಕಾರ ದ್ವೇಷದ ರಾಜಕೀಯಕ್ಕೆ ಮುಂದಾಗಿದೆ ಎಂದರು.

    ತಾಲೂಕು ಕಚೇರಿಗೆ ತೆರಳಿ ವಿಶೇಷ ತಹಸೀಲ್ದಾರ್ ಎಂ.ಎಸ್.ರಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.

    ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಡಾ. ಬಿ. ರಂಗನಾಥ್, ನಗರಸಭೆ ಸದಸ್ಯರಾದ ಗಂಗಾಧರ್‌ರಾವ್, ಸಿ. ಪ್ರದೀಪ್, ಪುರುಷೋತ್ತಮ್, ಕೆಪಿಸಿಸಿ ಸದಸ್ಯ ಖಲೀಮುಲ್ಲಾ, ಬ್ಲಾಕ್ ಅಧ್ಯಕ್ಷ ಜಗದೀಶ್, ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕ ಗ್ರಾಮಾಂತರ ಜಿಲ್ಲಾ ಕಾರ್ಯಧ್ಯಕ್ಷ ಕನಕರಾಜು, ಉಪಾಧ್ಯಕ್ಷ ಗಂಗರುದ್ರಯ್ಯ, ಕಿಸಾನ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ನಾಗರತ್ನಮ್ಮ, ಮುಂಖಂಡರಾದ ಚಂದ್ರಕುಮಾರ್, ದೀಪಕ್‌ಕಿರಣ್, ಮಿಲ್ಟ್ರೀ ಮೂರ್ತಿ, ಸಪ್ತಗಿರಿ ಶಂಕರ್ ನಾಯಕ್, ಚಿಕ್ಕಣ್ಣಸ್ವಾಮಿ. ರವಿಕುಮಾರ್, ರುಕ್ಮಿಣಿ, ರಾಜೇಶ್ವರಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts