More

    ಕಲಬುರಗಿಯಲ್ಲಿ ವಿದ್ಯುತ್​ ಬಿಲ್​ ವಸೂಲಿಗೆ ಹೋದ ಜೆಇ, ಲೈನ್​ಮ್ಯಾನ್​ ಮೇಲೆ ಹಲ್ಲೆ

    ಕಲಬುರಗಿ: ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ವಿದ್ಯುತ್​ ಬಿಲ್​ ವಿಚಾರದಲ್ಲಿ ಲೈನ್​ಮ್ಯಾನ್​ ಮತ್ತು ಜನಸಾಮಾನ್ಯರ ನಡುವೆ ಜಟಾಪಟಿಗಳು ನಡೆಯುತ್ತಿದೆ. ಅಧಿಕಾರಕ್ಕೆ ಬಂದರೆ 200 ಯೂನಿಟ್​ ಉಚಿತ ಎಂದು ಕಾಂಗ್ರೆಸ್​ ಹೇಳಿತ್ತು. ಇದೀಗ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಯೋಜನೆ ಜಾರಿ ಮಾಡುವ ಮುನ್ನವೇ ಕೆಲ ಜನರು ವಿದ್ಯುತ್​ ಬಿಲ್​ ಕಟ್ಟುವುದಿಲ್ಲ ಎಂದು ಲೈನ್​ಮ್ಯಾನ್​ಗಳ ಜತೆ ಜಗಳಕ್ಕೆ ಇಳಿದಿದ್ದಾರೆ.

    ಇಷ್ಟು ದಿನ ಬರೀ ಮಾತಿನಲ್ಲಿ ನಡೆಯುತ್ತಿದ್ದ ಜಗಳ ಇಂದು ಹಲ್ಲೆ ಮಾಡುವ ಮಟ್ಟಿಗೆ ಬೆಳೆದಿರುವುದು ನಿಜಕ್ಕೂ ಆತಂಕಕಾರಿ ಸಂಗತಿಯಾಗಿದೆ. ಕಲಬುರಗಿಯ ಆಳಂದ ಪಟ್ಟಣದಲ್ಲಿ ಜೆಸ್ಕಾಂ ಜೆಇ ಹಾಗೂ ಲೈನ್​ಮ್ಯಾನ್​ ಮೇಲೆ ಹಲ್ಲೆ ಮಾಡಲಾಗಿದೆ. ಬಾಕಿ ಇರುವ ಕರೆಂಟ್ ಬಿಲ್ ಕಟ್ಟುವಂತೆ ಕೇಳಿದ್ದಕ್ಕೆ ಜೆಇ ಸಿದ್ದರಾಮಪ್ಪ ನಿಂಬಾಳ್ಕರ್ ಹಾಗೂ ಲೈನ್​ಮ್ಯಾನ್​ ಇಜಾಜ್ ಮೇಲೆ ವಸೀಂ ಸೈಫನ್​ ಎಂಬಾತ ಕಲ್ಲು ಮತ್ತು ಕಬ್ಬಿಣದ ರಾಡ್​ನಿಂದ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾನೆ.

    ಇದನ್ನೂ ಓದಿ: ಪ್ರೇಯಸಿಗೆ ಮೆಸೇಜ್ ಮಾಡಿದ್ದಕ್ಕೆ ಸ್ನೇಹಿತನಿಗೆ ಚಾಕು ಇರಿತ : ಆರೋಪಿ ಬಂಧನಕ್ಕೆ ಪೊಲೀಸರ ಬಲೆ

    ಆರೋಪಿ ವಸೀಂ ಕಳೆದ ಆರು ತಿಂಗಳಿಂದ ಕರೆಂಟ್​ ಬಿಲ್​ ಬಾಕಿ ಉಳಿಸಿಕೊಂಡಿದ್ದ. ಮನೆಯ 3 ಸಾವಿರ ರೂಪಾಯಿ ಮತ್ತು ಢಾಬಾದ 7, 300 ರೂಪಾಯಿ ಕರೆಂಟ್​ ಬಿಲ್ ಬಾಕಿ ಇತ್ತು. ಹಣವನ್ನು ಕಟ್ಟಿ, ಇಲ್ಲವಾದಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡುತ್ತೇವೆ ಎಂದಿದ್ದಕ್ಕೆ ಸಿಟ್ಟಿಗೆದ್ದು ವಸೀಂ ಹಲ್ಲೆ ಮಾಡಿದ್ದಾನೆ.

    ಗಂಭೀರವಾಗಿ ಗಾಯಗೊಂಡಿರುವ ಜೆಇ ಸಿದ್ರಾಮಪ್ಪ ನಿಂಬಾಳ್ಕರ್​ ಅವರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಕೊಪ್ಪಳದಲ್ಲಿ ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್​ಮ್ಯಾನ್​ಗೆ ಚಪ್ಪಲಿಯಿಂದ ಹಲ್ಲೆ

    ವಿದ್ಯುತ್ ಬಿಲ್ ವಸೂಲಿಗೆ ಬಂದ ಲೈನ್​ಮ್ಯಾನ್​ಗೆ ಚಪ್ಪಲಿಯಿಂದ ಹಲ್ಲೆ; ವ್ಯಕ್ತಿ ಅರೆಸ್ಟ್

    ರಾಮಲಲ್ಲಾ ಮೂರ್ತಿ ಕೆತ್ತನೆ ಆರಂಭ; ಕರ್ನಾಟಕದ ಇಬ್ಬರು ಶಿಲ್ಪಿಗಳು ಭಾಗಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts