ಕಾಗವಾಡ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉಪಯೋಗಕ್ಕಾಗಿ ಬಳಸುತ್ತಿರುವ ಕುರಿತು ಪಟ್ಟಣದಲ್ಲಿ ಕೆಲ ಹೋಲ್ ಮೇಲೆ ತಹಸೀಲ್ದಾರ್ ರಾಜೇಶ ಬುರ್ಲಿ ನೇತೃತ್ವದಲ್ಲಿ ಆಹಾರ ಇಲಾಖೆ ಅಧಿಕಾರಿ ಸಂಗಮೇಶ ಬಾಗೇವಾಡಿ ತಂಡ ಗುರುವಾರ ದಾಳಿ ನಡೆಸಿ 22 ಗ್ಯಾಸ್ ಸಿಲಿಂಡರ್ ವಶಕ್ಕೆ ಪಡೆದುಕೊಂಡು ಕ್ರಮ ಜರುಗಿಸಿದರು.

ತಹಸೀಲ್ದಾರ್ ರಾಜೇಶ ಬುರ್ಲಿ ಮಾತನಾಡಿ, ಗೃಹ ಉಪಯೋಗಿ ಗ್ಯಾಸ್ ಸಿಲಿಂಡರ್‌ನ್ನು ವಾಣಿಜ್ಯ ಬಳಿಕೆಗೆ ಬಳಸಿದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರ ವಿರುದ್ಧ ಉಪವಿಭಾಗೀಯ ಅಧಿಕಾರಿಗಳಿಗೆ ವರದಿ ಸಲ್ಲಿಸಿ ಹತ್ತು ಸಾವಿರ ರೂ. ಡಂದ ವಿಧಿಸಲಾಗುವುದು. ಗೃಹ ಉಪಯೋಗಿ ಸಿಲಿಂಡರ್ ಬಳಸುತ್ತಿರುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಗ್ರಾಮ ಆಡಳಿತಾಧಿಕಾರಿ ಕೆ.ಪಿ.ಬಡಿಗೇರ, ಇಂಡಿಯನ್ ಆಯಿಲ್ ಸಂಸ್ಥೆ ಸಿಬ್ಬಂದಿ ಸುನೀಲ ಮಾಂಜರೆ ಇತರರಿದ್ದರು.