More

    ‘ಮಮತಾ ನಾಟಕವನ್ನು ಸಿಬಿಐ ತನಿಖೆ ನಡೆಸಿ’ ಎಂದ ಬಂಗಾಳ ಬಿಜೆಪಿ

    ಕಲ್ಕತ್ತ: ನಂದಿಗ್ರಾಮದಲ್ಲಿ ಬುಧವಾರ ನಡೆದಿದ್ದ ಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಾಯಗೊಂಡಿರುವ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಪಶ್ಚಿಮ ಬಂಗಾಳ ಬಿಜೆಪಿ ಕೇಳಿಕೊಂಡಿದೆ.

    ಈ ಕುರಿತು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿರುವ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್, ಸುಮಾರು ಮುನ್ನೂರಕ್ಕೂ ಹೆಚ್ಚು ಪೊಲೀಸ್ ಭದ್ರತೆ ಇರುವ ಮಮತಾ ಅವರ ಮೇಲೆ ಹಲ್ಲೆ ನಡೆದಿದೆ ಎಂದರೆ ನಂಬಲಾಗುತ್ತಿಲ್ಲ. ಈ ಬಗ್ಗೆ ಸಿಬಿಐ ತನಿಖೆ ನಡೆಸಿದರೆ ಸತ್ಯಾಂಶ ಹೊರ ಬರಲಿದೆ ಎಂದು ಆಗ್ರಹಿಸಿದ್ದಾರೆ. ಈ ಘಟನೆ ಟಿಎಂಸಿ ಹಾಗೂ ಬಿಜೆಪಿ ನಡುವೆ ಬಹುದೊಡ್ಡ ವಾಕ್ಸಮರಕ್ಕೆ ಕಾರಣವಾಗಿದೆ. ಅಲ್ಲದೇ ನಂದಿಗ್ರಾಮದಲ್ಲಿ ಮಮತಾ ಸೋಲಲಿದ್ದಾರೆ ಎನ್ನುವ ಭಯದಿಂದ ಈ ರೀತಿಯ ನಾಟಕ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

    ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ರಾಲಿ ವೇಳೆ ಗಾಯಗೊಂಡಿದ್ದ ಘಟನೆ ಬುಧವಾರ ನಂದಿಗ್ರಾಮದಲ್ಲಿ ನಡೆದಿತ್ತು. ಅವರ ಕಾಲಿಗೆ ಮತ್ತು ಮುಖಕ್ಕೆ ಗಾಯಗಳಾಗಿತ್ತು.

    ಇದನ್ನೂ ಓದಿ: ‘ವೀಲ್​ ಚೇರ್​ ಮೇಲೆ ಕುಳಿತಾದರೂ ಪ್ರಚಾರ ಮಾಡ್ತೀನಿ’ ಆಸ್ಪತ್ರೆಯಿಂದಲೇ ವಿಡಿಯೋ ಸಂದೇಶ ಹರಿಬಿಟ್ಟ ದೀದಿ

    ‘ಯಾರೋ ಕಿಡಗೇಡಿಗಳು ನನ್ನನ್ನು ಬಲವಾಗಿ ನೂಕಿದ್ದರಿಂದ ಬಲಗಾಲಿಗೆ ಗಾಯವಾಗಿದೆ, ಮುಖವನ್ನು ಕೈ ಬೆರಳುಗಳಿಂದ ಪರಚಲಾಗಿದೆ’ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದರು. ಇದು ನನ್ನ ಮೇಲೆ ಹಲ್ಲೆ ಮಾಡುವ ಅಥವಾ ನನ್ನನ್ನು ಮುಗಿಸುವ ಸಂಚು ಎಂದು ಮಮತಾ ಗಂಭೀರ ಆರೋಪ ಮಾಡಿದ್ದರು. ಕಲ್ಕತ್ತಕ್ಕೆ ತೆರಳಿದ ಅವರು ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಪಶ್ಚಿಮ ಬಂಗಾಳದಲ್ಲಿ ದೊಡ್ಡ ರಾಜಕೀಯ ಬಿರುಗಾಳಿಯನ್ನೇ ಹುಟ್ಟಿಸಿದೆ.

    ನಂದಿಗ್ರಾಮದಲ್ಲಿ ಬುಧವಾರ ಟಿಎಂಸಿ ಪಕ್ಷದ ಚುನಾವಣಾ ರಾಲಿ ಆಯೋಜಿಸಲಾಗಿತ್ತು. ಇದಕ್ಕೂ ಮುನ್ನ ಮಮತಾ ಬ್ಯಾನರ್ಜಿ ಅವರು ಸ್ಥಳೀಯ ದುರ್ಗಾ ಮಾತೆ ಮಂದಿರಕ್ಕೆ ತೆರಳಿದ್ದರು. ಈ ವೇಳೆ ಘಟನೆ ನಡೆದಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೂ ಟಿಎಂಸಿ ದೂರು ನೀಡಿದೆ. ಎಫ್​ಐಆರ್​ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು, ಘಟನೆ ಸಂದರ್ಭದಲ್ಲಿ ಹಲ್ಲೆ ನಡೆದಿರುವಂತ ಸಂಗತಿಗಳು ಕಂಡು ಬಂದಿಲ್ಲ ಎಂದು ಹೇಳಿದ್ದಾರೆ.

    “ಚುನಾವಣೆ ಮುಗಿಯೋ ಮುನ್ನ ಮಮತಾ ಬ್ಯಾನರ್ಜಿ ಜೈ ಶ್ರೀ ರಾಮ್ ಅಂತಾರೆ”

    ಮಮತಾ ಬ್ಯಾನರ್ಜಿಗೆ ಏಟು ಬಿದ್ದಿದ್ದು ಹೇಗೆ ? ಘಟನೆ ಒಂದು, ಕಥೆಗಳು ಹಲವು !

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts