More

    ನೈಜೀರಿಯಾ ಪ್ರಜೆಗಳಿಂದ ರಕ್ತ ಬರುವಂತೆ ಪೊಲೀಸರ ಮೇಲೆ ಹಲ್ಲೆ: 8 ಆರೋಪಿಗಳು ಬಂಧನ

    ಬೆಂಗಳೂರು: ನಗರದಲ್ಲಿ ನೈಜೀರಿಯಾ ಪ್ರಜೆಗಳ ಅಟ್ಟಹಾಸ ಮುಂದುವರಿದಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲು ತೆರಳಿದ್ದ ಸಿಸಿಬಿ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳು ಮಾರಕಾಸ್ತ್ರ, ಕಲ್ಲು ಮತ್ತು ದೊಣ್ಣೆಗಳಿಂದ ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ.

    ಇದನ್ನೂ ಓದಿ: ಆಂಧ್ರಪ್ರದೇಶ: ಚಂದ್ರಬಾಬು ನಾಯ್ಡು ಆಸ್ತಿ ಮೌಲ್ಯ 810 ಕೋಟಿ ರೂ.; 5 ವರ್ಷದಲ್ಲಿ 41% ಆಸ್ತಿ ಹೆಚ್ಚಳ

    ಕಳೆದ ರಾತ್ರಿ(ಏ.18) ಡ್ರಗ್​ ಪೆಡ್ಲರ್​ ಇರುವ ಕುರಿತು ಮಾಹಿತಿ ಬಂದ ಹಿನ್ನಲೆ ಸಿಸಿಬಿ ಪೊಲೀಸರು ರಾಜನಕುಂಟೆ ಪೊಲೀಸ್​ ಠಾಣೆಯ ಮಾವಳ್ಳಿ ಪುರದಲ್ಲಿ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ವಿದೇಶಿ ಪ್ರಜೆಗಳು ಹಲ್ಲೆ ಮಾಡಿದ್ದರು. ಘಟನೆಯಲ್ಲಿ ಸಿಸಿಬಿ ಇನ್‌ಸ್ಪೆಕ್ಟರ್ ಸುಬ್ರಮಣ್ಯ ಸ್ವಾಮಿ ಸೇರಿದಂತೆ ನಾಲ್ವರು ಪೊಲೀಸರು ಗಾಯಗೊಂಡಿದ್ದರು. ನೈಜೀರಿಯಾ ಪ್ರಜೆಗಳು ಸಿಸಿಬಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಕಾರಿನ ಗಾಜು ಒಡೆದು ಹಾನಿ ಮಾಡಿದ್ದಾರೆ.

    ಘಟನೆಯಲ್ಲಿ ಐವರು ಪೊಲೀಸರಿಗೆ ಗಾಯವಾಗಿದೆ. ನೈಜೀರಿಯಾ ಪ್ರಜೆಗಳು ಸಿಸಿಬಿ ಪೊಲೀಸರ ಮೇಲೆ ಹಲ್ಲೆ ಮಾಡಿರುವ ದೃಶ್ಯವು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಪೊಲೀಸರು ಮತ್ತು ನೈಜೀರಿಯಾ ಪ್ರಜೆಗಳ ಮಧ್ಯೆ ವಾಗ್ವಾದ ನಡೆದಿದ್ದು, ರಸ್ತೆಯಲ್ಲೇ ರಾದ್ಧಾಂತ ಮಾಡಿದ್ದಾರೆ. ಇದೇ ವೇಳೆ ನೈಜೀರಿಯಾ ಪ್ರಜೆಗಳು ತಮ್ಮವರಿಗೆ ಫೋನ್ ಮಾಡಿ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಬೈಕ್‌ನಲ್ಲಿ ಬೇರೆ ಬೇರೆ ಕಡೆಯಿಂದ 10ಕ್ಕೂ ಹೆಚ್ಚು ಮಂದಿ ಬಂದಿದ್ದಾರೆ. ಪೊಲೀಸರು ಜೀಪ್ ಹತ್ತಿಸುತ್ತಿದ್ದಂತೆ ತಿರುಗಿ ಬಿದ್ದ ನೈಜೀರಿಗಳು, ಕಲ್ಲು ದೊಣ್ಣೆಗಳಿಂದ ಪೊಲೀಸರ ಮೇಲೆ ದಾಳಿ ಮಾಡಿ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದಾರೆ.

    ಘಟನೆ ವಿವರ

    ಬೆಂಗಳೂರು ಗ್ರಾಮಾಂತರದ ಎಸ್.ಪಿ ಮಲ್ಲಿಕಾರ್ಜುನ ಬಾಲದಂಡಿ ಈ ಬಗ್ಗೆ ಮಾಹಿತಿ ನೀಡಿ ಹಿಂದೆ ಸಿಸಿಬಿ ಅಧಿಕಾರಿ ಸುಬ್ರಹ್ಮಣ್ಯಸ್ವಾಮಿ ಅವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರ ಮುಂದುವರಿದ ತನಿಖೆಗಾಗಿ ಸಿಸಿಬಿ ತಂಡ ತೆರಳಿದ್ದರು. ಆರೋಪಿಯನ್ನು ಹಿಂಬಾಲಿಸಿಕೊಂಡು ಹೋದಾಗ ನೈಜೀರಿಯನ್ ಪ್ರಜೆಗಳು ಗಲಾಟೆ ತೆಗೆದಿದ್ದರು. ತಾವು ಸಿಸಿಬಿ ಪೊಲೀಸರು ಎಂದು ತಿಳಿಸಿದರೂ ಏಕಾಏಕಿ ಹಲ್ಲೆಯನ್ನು ನಡೆಸಿದ್ದಾರೆ. ರಾತ್ರಿ ಸುಮಾರು 11 ಗಂಟೆ ಸಮಯದಲ್ಲಿ ಘಟನೆ ನಡೆದಾಗ ಸಿಸಿಬಿ ಪೊಲೀಸರು ಕಂಟ್ರೋಲ್ ರೂಂಗೆ ಕಾಲ್ ಮಾಡಿ ವಿಚಾರ ಮುಟ್ಟಿಸಿದ್ದರು. ವಿಚಾರ ತಿಳಿದು ರಾಜಾನುಕುಂಟೆ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಆದರೆ ಆರೋಪಿಗಳು ಅವರ ಮೇಲೆಯೂ ಹಲ್ಲೆ ನಡೆಸಿದ್ದಾರೆ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ. ಅವರಿಗೆ ಮನೆ ಬಾಡಿಗೆ ಕೊಟ್ಟ ಮಾಲೀಕನ ಜತೆ ಮಾತನಾಡಿದ್ದೇವೆ. ದಾಖಲಾತಿ ಕೊಡುವುದಾಗಿ ಹೇಳಿ ನೈಜೀರಿಯನ್ ಪ್ರಜೆಗಳು, ಮನೆ ಮಾಲೀಕರಿಂದ ಬಾಡಿಗೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಿಲ್ ಯು, ಐ, ವಿಲ್ ಕಿಲ್ ಯು

    ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಇನ್‌ಸ್ಪೆಕ್ಟರ್ ಆಗಿರುವ ಸುಬ್ರಮಣ್ಯ ಸ್ವಾಮಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದು, ಈ ಪ್ರಕರಣದಲ್ಲಿ ಒಬ್ಬ ವಿದೇಶಿ ಪ್ರಜೆಯನ್ನು ಬಂಧಿಸಿ ಆತನಿಂದ ೪ ಕೆ.ಜಿ ತೂಕದ ಎಂಡಿಎಂಎ ವಶಪಡಿಸಿಕೊಂಡು ನಂತರ ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ತನಿಖೆ ಮುಂದುವರಿಸಿ ಏ.18 ರಂದು ಉಳಿದ ಆರೋಪಿಗಳ ಪತ್ತೆ ಹೋದಾಗ ಕಿಲ್ ಯು, ಐ, ವಿಲ್ ಕಿಲ್ ಯು ಎಂದು 6 ಕ್ಕೂ ಹೆಚ್ಚು ಮಂದಿ ಜಮಾಯಿಸಿ ಕಲ್ಲು, ದೊಣ್ಣೆ ಮಾರಕಾಸಗಳಿಂದ ಹಲ್ಲೆ ನಡೆಸಿದ್ದು, ತೀವ್ರ ತರಹವಾದ ಗಾಯಗಳಾಗಿದ್ದು, ಕೊಲೆ ಮಾಡಲು ಪ್ರಯತ್ನಿಸಿ ಸರ್ಕಾರಿ ವಾಹನ ಜಖಂಗೊಳಿಸಿದ್ದ 6 ವಿದೇಶಿ ಪ್ರಜೆಗಳ ವಿರುದ್ಧ ಸುಬ್ರಮಣ್ಯ ದೂರು ನೀಡಿದ್ದು, ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ರಾಜನುಕುಂಟೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    ಖಚಿತ ಮಾಹಿತಿ ಮೇರೆಗೆ ಸಿಸಿಬಿ ವಿದೇಶಿ ಪ್ರಜೆ ವಾಸವಿರುವ ಸ್ಥಳದ ಬಳಿ ತೆರಳಿದ್ದರು. ಈ ವೇಳೆ ಕಲ್ಲುತೂರಾಟ ಆಗಿದೆ. ಸಿಸಿಬಿಯ ಓರ್ವ ಇನ್‌ಸ್ಪೆಕ್ಟರ್ ಸೇರಿ ಮೂವರಿಗೆ ಗಾಯಗಳಾಗಿವೆ. ರಾಜಾನುಕುಂಟೆಯಲ್ಲಿ ಪೊಲೀಸ್ ವಾಹನಕ್ಕೂ ಹಾನಿಯಾಗಿದೆ. ರಾಜಾನುಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಆರೋಪಿಗಳ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.

    ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಕೇಸ್​: ನಟ ಧ್ರುವ ಸರ್ಜಾ ಸರ್ಕಾರಕ್ಕೆ ಹೇಳಿದ ಕಿವಿ ಮಾತೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts