ಮುಂಬೈ: ( Kareena Kapoor Khan was NOT at Saif Ali Khan home ) ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ಸೈಫ್ ಆರು ಸ್ಥಳಗಳಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಬೈನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಈ ಪ್ರಕರಣದ ಕುರಿತಾಗಿ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಈ ಘಟನೆ ನಡೆಯುವ ವೇಳೆ ಸೈಫ್ ಅವರ ಪತ್ನಿ ಕರೀನಾ ಹಾಗೂ ಮಕ್ಕಳು ಬಚಾಬ್ ಆಗಿದ್ದು ಹೇಗೆ ಎನ್ನುವ ಪ್ರಶ್ನೆ ಮುನ್ನೆಲೆಗೆ ಬಂದಿದೆ.
ನಡೆದಿದ್ದೇನು?: ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಮನೆಗೆ ಕಳ್ಳನೊಬ್ಬ ನುಗ್ಗಿದ್ದಾನೆ. ಕಳ್ಳ ಮನೆಗೆ ಪ್ರವೇಶಿಸಿದನ್ನು ಅರಿತುಕೊಂಡ ಮನೆಯ ಸಿಬ್ಬಂದಿ ಎಚ್ಚರಗೊಂಡರು. ಮನೆಯಲ್ಲಿ ಗಲಾಟೆಯಿಂದ ನಿದ್ದೆಯಿಂದ ಎದ್ದ ಸೈಫ್ ಕಳ್ಳನನ್ನು ಹಿಡಿಯಲು ಯತ್ನಿಸಿದ್ದಾರೆ. ಇದೇ ವೇಳೆ ಕಳ್ಳ ಸೈಫ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾನೆ. ಈ ಘಟನೆ ಬಳಿಕ ಕಳ್ಳ ತಲೆಮರೆಸಿಕೊಂಡಿದ್ದಾನೆ. ಆತನನ್ನು ಹಿಡಿಯಲು ಮುಂಬೈ ಪೊಲೀಸರು ಮತ್ತು ಕ್ರೈಂ ಬ್ರಾಂಚ್ ಶ್ರಮಿಸುತ್ತಿದ್ದಾರೆ. ಸೈಫ್ ಅಲಿ ಖಾನ್ ಪತ್ನಿ, ನಟಿ ಕರೀನಾ ಕಪೂರ್ ಖಾನ್ ಮತ್ತು ಅವರ ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಪ್ರಾಥಮಿಕ ತನಿಖೆಯ ನಂತರ ಪೊಲೀಸರು ಶೀಘ್ರದಲ್ಲೇ ಪ್ರಕರಣದ ವಿವರಗಳನ್ನು ಬಹಿರಂಗಪಡಿಸುವ ಸಾಧ್ಯತೆಯಿದೆ. ಮನೆಯ ಸುತ್ತ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.
ಕರೀನಾ ತಪ್ಪಿಸಿಕೊಂಡಿದ್ದು ಹೇಗೆ?
ಖದೀಮರು ಮನೆಗೆ ನುಗ್ಗಿ ದಾಳಿ ಮಾಡಿದ ವೇಳೆ ಸೈಫ್ ಅಲಿಖಾನ್ ಮನೆಯಲ್ಲಿ ಒಬ್ಬರೇ ಇದ್ದರು ಎಂದು ತಿಳಿದು ಬಂದಿದೆ. ಕರೀನಾ ಕಪೂರ್ ಬುಧವಾರ (ಜನವರಿ 15) ರಾತ್ರಿ ಕರಿಷ್ಮಾ ಕಪೂರ್, ಸೋನಮ್ ಕಪೂರ್ ಮತ್ತು ರಿಯಾ ಕಪೂರ್ ಅವರೊಂದಿಗೆ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಕರೀನಾ ಕಪೂರ್ ಕೂಡ ಪಾರ್ಟಿಯ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅದಕ್ಕೆ ‘ಗರ್ಲ್ಸ್ ನೈಟ್ ಇನ್’ ಎಂಬ ಶೀರ್ಷಿಕೆ ನೀಡಲಾಗಿತ್ತು. ಹಾಗಾಗಿ ದಾಳಿ ನಡೆದಾಗ ಆಕೆ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.
ಗುರುವಾರ (ಜನವರಿ 16) ಬೆಳಗಿನ ಜಾವ 3 ರಿಂದ 4 ಗಂಟೆ ಸುಮಾರಿಗೆ ಸೈಫ್ ಮನೆಯಲ್ಲಿ ದರೋಡೆ ಯತ್ನ ನಡೆದಿತ್ತು. ಕರೀನಾ ಪಾರ್ಟಿಗೆ ಹೋಗಿದ್ದರಿಂದ, ಅವರು ಹಲ್ಲೆಯಿಂದ ಬಚಾವ್ ಆಗಿದ್ದಾರೆ. ಇನ್ನು ಸೈಫ್ ಮಕ್ಕಳು ಬೇರೆ ಕೋಣೆಯಲ್ಲಿ ಮಲಗಿದ್ದರು.. ಹೀಗಾಗಿ ಸೇಫ್ ಆಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಮನೆಯಲ್ಲಿ ಕೆಲಸ ಮಾಡ್ತಿದ್ದ ಮೂವರು ಪೊಲೀಸ್ ವಶಕ್ಕೆ
ಮುಂಬೈನ ಪೊಲೀಸರು ಸೈಫ್ ಅಲಿ ಖಾನ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಮೂವರು ಶಂಕಿತರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿದ್ದು, ತನಿಖೆ ಮುಂದುವರಿದಿದೆ.
ಸೈಫ್ ಅಲಿಖಾನ್ ಚಾಕು ದಾಳಿ ಪ್ರಕರಣದಲ್ಲಿ ಮನೆಕೆಲಸದವರ ಮೇಲೂ ಶಂಕೆ ವ್ಯಕ್ತವಾಗಿದೆ. ನಟನ ಮನೆಗೆ ಎರಡು ಗೇಟ್‌ಗಳಿವೆ. 4 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಆದರೆ ಕಳ್ಳ ಬಂದಿದ್ದು ಹೇಗೆ ಎಂಬ ಪ್ರಶ್ನೆ ಮೂಡಿದೆ. ಮನೆಯಲ್ಲಿ ಯಾರಾದರೂ ಸಹಾಯ ಮಾಡಿದ್ದಾರಾ ಎಂಬ ಪ್ರಶ್ನೆಯೂ ಇದೆ. ಈ ಪ್ರಕರಣದ ತನಿಖೆಗಾಗಿ ಮುಂಬೈ ಪೊಲೀಸರು 7 ತಂಡಗಳನ್ನು ರಚಿಸಿದ್ದಾರೆ. ವಿವಿಧ ಕೋನಗಳಲ್ಲಿ ತನಿಖೆ ನಡೆಯುತ್ತಿದೆ.
6 ಬಾರಿ ಚಾಕು ಇರಿತ, 2 ಎರಡು ಗಂಭೀರ ಗಾಯ..ವೈದ್ಯರ ಮಾಹಿತಿ
ಗಾಯಗೊಂಡ ಸೈಫ್ ಅವರನ್ನು ಚಿಕಿತ್ಸೆಗಾಗಿ ಸಮೀಪದ ಮುಂಬೈನ ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಲೀಲಾವತಿ ಆಸ್ಪತ್ರೆಯ ಸಿಒಒ ಡಾ.ನೀರಜ್ ಉತ್ತಮನಿ ಮಾತನಾಡಿ, ಸೈಫ್‌ಗೆ ಆರು ಗಾಯಗಳಾಗಿದ್ದು, ಅವುಗಳಲ್ಲಿ ಎರಡು ಆಳವಾದವುಗಳಾಗಿವೆ. ಗಾಯಗಳಲ್ಲಿ ಒಂದು ಅವರ ಬೆನ್ನುಮೂಳೆಯ ಹತ್ತಿರದಲ್ಲಿದೆ. ನಾವು ಅವರಿಗೆ ಆಪರೇಷನ್ ಮಾಡುತ್ತಿದ್ದೇವೆ. ನರಶಸ್ತ್ರಚಿಕಿತ್ಸಕ ನಿತಿನ್ ಡಾಂಗೆ, ಕಾಸ್ಮೆಟಿಕ್ ಸರ್ಜನ್ ಲೀನಾ ಜೈನ್ ಮತ್ತು ಅರಿವಳಿಕೆ ತಜ್ಞ ನಿಶಾ ಗಾಂಧಿ ಅವರಿಂದ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ. ಶಸ್ತ್ರಚಿಕಿತ್ಸೆಯ ನಂತರವೇ ಹಾನಿಯ ಪ್ರಮಾಣವನ್ನು ನಾವು ತಿಳಿಸುತ್ತೇವೆ ಎಂದಿದ್ದಾರೆ.
ನಟ ಸೈಫ್ ಅಲಿಖಾನ್ಗೆ ಚಾಕು ಇರಿತ! ಆಸ್ಪತ್ರೆಗೆ ದಾಖಲು..Saif Ali Khan hospitalised