More

    VIDEO: ಯೋಗ ದಿನಾಚರಣೆಯಲ್ಲಿ ಭಾಗವಹಿಸಿದವರ ಮೇಲೆ ಹಲ್ಲೆ: ತನಿಖೆಗೆ ಮಾಲ್ಡೀವ್ಸ್​ ಸರ್ಕಾರ ಆದೇಶ

    ಮಾಲೆ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಭಾರತೀಯ ರಾಯಭಾರ ಕಚೇರಿ ಮಾಲ್ಡೀವ್ಸ್​​ನ ಮಾಲೆಯಲ್ಲಿ ಆಯೋಜಿಸಿದ್ದ ಯೋಗ ಕಾರ್ಯಕ್ರಮದ ಮೇಲೆ ಪ್ರತಿಭಟನಾಕಾರರ ಗುಂಪೊಂದು ದಾಳಿ ನಡೆಸಿದ ಬೆನ್ನಲ್ಲೇ ಅಲ್ಲಿನ ಸರ್ಕಾರ ತನಿಖೆಗೆ ಆದೇಶಿಸಿದೆ.

    ಮಂಗಳವಾರ ಬೆಳಗ್ಗೆ ರಾಜಧಾನಿ ಮಾಲೆಯಲ್ಲಿ ಭಾರತೀಯ ಹೈಕಮೀಷನ್​​ನಲ್ಲಿ ಹಲವಾರು ಜನರು ಯೋಗ ಪ್ರದರ್ಶನ ಮಾಡುತ್ತಿದ್ದರು. ಈ ವೇಳೆ ಜನರ ಗುಂಪೊಂದು ಧಾವಿಸಿ, ದಾಳಿ ನಡೆಸಲು ಮುಂದಾಯಿತು. ಕೂಡಲೇ ಎಚ್ಚೆತ್ತ ಪೊಲೀಸರು ನಿಯಂತ್ರಣಕ್ಕೆ ಮುಂದಾಗಿದ್ದಾರೆ.

    ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ದಾಳಿಗೆ ಯತ್ನಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್​ ಸೊಲಿಹ್​ ತಿಳಿಸಿದ್ದಾರೆ. ಇನ್ನು ಪ್ರಕರಣ ಸಂಬಂಧ ತನಿಖೆಗೂ ಆದೇಶಿಸಿದ್ದಾರೆ.

    ಕಾರ್ಯಕ್ರಮದಲ್ಲಿ ರಾಜತಾಂತ್ರಿಕರು ಮತ್ತು ಸರ್ಕಾರಿ ಅಧಿಕಾರಿಗಳು ಸೇರಿದಂತೆ 150 ಕ್ಕೂ ಹೆಚ್ಚು ಜನರು ಇಲ್ಲಿನ ಕ್ರೀಡಾಂಗಣವೊಂದರಲ್ಲಿ ಭಾಗವಹಿಸಿದ್ದರು. ಕೂಡಲೇ ಕ್ರೀಡಾಂಗಣಕ್ಕೆ ನುಗ್ಗಿದ ಕೆಲವರು ಯೋಗ ಮಾಡಲು ತೀವ್ರ ವಿರೋಧ ವ್ಯಕ್ತಪಡಿಸಿದ್ದಲ್ಲದೇ ಯೋಗದಲ್ಲಿ ಭಾಗವಹಿಸಿದ್ದವರ ಮೇಲೆ ದಾಳಿ ನಡೆಸಿದ್ದಾರೆ. (ಏಜೆನ್ಸೀಸ್​)

    ವಿಶ್ವ ಯೋಗ ದಿನ: ವಿವಿಧ ಆಸನ ಪ್ರದರ್ಶಿಸಿದ ಬಾಲಿವುಡ್​ ನಟಿ ಅನುಷ್ಕಾ ಶರ್ಮಾಗೆ ಅಭಿಮಾನಿಗಳಿಂದ ಮೆಚ್ಚುಗೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts