ಕಡೂರು: ಕಬಡ್ಡಿಯಂತಹ ಗ್ರಾಮೀಣ ಕ್ರೀಡೆಗಳಿಗೂ ಪ್ರಾಮುಖ್ಯತೆ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ತಾಲೂಕಿನ ಮಚ್ಚೇರಿ ಸಮೀಪದ ಬೆಂಕಿ ಲಕ್ಷ್ಮಯ್ಯ ಸಭಾಂಗಣದಲ್ಲಿ ಕಡೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ್ದ ಎರಡು ದಿನಗಳ ಕುವೆಂಪು ವಿಶ್ವವಿದ್ಯಾಲಯದ ಅಂತರ ಕಾಲೇಜುಗಳ ಕಬಡ್ಡಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಶನಿವಾರ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಕ್ರೀಡೆ ಎಂದರೆ ಕೇವಲ ಕ್ರಿಕೆಟ್ ಅಥವಾ ಫುಟ್‌ಬಾಲ್ ಮಾತ್ರವಲ್ಲ. ಅಷ್ಟೇ ದೈಹಿಕ ಶ್ರಮ, ಚಾಕಚಕ್ಯತೆ ಮತ್ತು ಚುರುಕುತನ ಹೊಂದಿರಬೇಕಾದ ಕಬಡ್ಡಿಯಂತಹ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ. ಈ ನಿಟ್ಟಿನಲ್ಲಿ ಕಾಲೇಜಿನ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಜತೆಗೆ ಕಡೂರಿಗೆ ಕಬಡ್ಡಿ ಹಾಸ್ಟೆಲ್ ತರಲು ಪ್ರಯತ್ನಿಸುವುದಾಗಿ ತಿಳಿಸಿದರು.
ಪ್ರಾಚಾರ್ಯ ಡಾ.ಕೆ.ಎ್.ರಾಜಣ್ಣ ಮಾತನಾಡಿ, ಕಡೂರಿನಲ್ಲಿ ಇದೇ ಮೊದಲ ಬಾರಿಗೆ ವಿವಿ ಮಟ್ಟದ ಪಂದ್ಯಾವಳಿಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಶೈಕ್ಷಣಿಕವಾಗಿ ಉತ್ತಮ ಸೇವೆ ನೀಡುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕ್ರೀಡಾ ಚಟುವಟಿಕೆಗಳಲ್ಲಿಯೂ ಸದಾ ಕ್ರಿಯಾಶೀಲವಾಗಿದೆ ಎಂದರು.
ಎರಡು ಜಿಲ್ಲೆಗಳ ವ್ಯಾಪ್ತಿಯ 29 ಕಾಲೇಜಿನ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ತೀರ್ಪುಗಾರರಾಗಿ ಮಂಜುನಾಥ್, ರಾಮಲಿಂಗಾಚಾರ್, ಸುರೇಂದ್ರ, ಕೌಶಿಕ್, ಪೂರ್ಣೇಶ್ ಕಾರ್ಯನಿರ್ವಹಿಸಿದರು. ಹಿರಿಯ ಯೋಗಪಟು ಬೆಂಕಿ ಶೇಖರಪ್ಪ, ಯುವಜನಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಮುರಳೀಧರ, ಕುವೆಂಪು ವಿ.ವಿ.ಯ ರಾಘವೇಂದ್ರ, ಉಪನ್ಯಾಸಕ ವರ್ಗದವರು ಇದ್ದರು.
ಕಡೂರಲ್ಲಿ ಕಬಡ್ಡಿ ಹಾಸ್ಟೆಲ್ ಸ್ಥಾಪನೆಗೆ ಪ್ರಯತ್ನ
You Might Also Like
ಹದ್ದಿನ ಕಣ್ಣಿನಂಥ ದೃಷ್ಟಿ ನಿಮ್ಮದಾಗಬೇಕಾ? ಇವು ನಿಮ್ಮ ಆಹಾರದಲ್ಲಿ ಇವೆಯೇ? ಚೆಕ್ ಮಾಡಿಕೊಳ್ಳಿ
ಬೆಂಗಳೂರು: ಮಾನವನ ಅಂಗಾಂಗಗಳಲ್ಲಿ ಎಲ್ಲವೂ ಮುಖ್ಯವೇ ಆದರೂ ಕಣ್ಣುಗಳು ಪ್ರಮುಖ ಸ್ಥಾನ ಪಡೆದುಕೊಂಡಿವೆ. ಹೀಗಾಗಿಯೇ ಕಣ್ಣುಗಳು…
ಇವುಗಳನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದ್ರೆ ಸಾಕು! ಚೆನ್ನಾಗಿ ನಿದ್ದೆ ಜತೆ, ಶ್ರೀಮಂತರಾಗೋದು ಪಕ್ಕಾ!
ಬೆಂಗಳೂರು: ತುರ್ತು ಸಂದರ್ಭಗಳಲ್ಲಿ ಹಣ ಅಥವಾ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈಗ ಹೇಳಿರುವ ಸರಳ ಪರಿಹಾರಗಳನ್ನು…
ಮನೆಯಲ್ಲಿ ಗುಲಾಬಿ ಗಿಡ ಬೆಳೆಸುತ್ತಿದ್ದೀರಾ? ಈ ವಾಸ್ತು ನಿಯಮಗಳು ಕಡ್ಡಾಯ!
ಬೆಂಗಳೂರು: ಸಾಮಾನ್ಯವಾಗಿ ನಮ್ಮ ಹಿತ್ತಲಿನಲ್ಲಿ ಹಲವು ಬಗೆಯ ಗಿಡಗಳನ್ನು ಬೆಳೆಸುತ್ತೇವೆ. ಗುಲಾಬಿ ಗಿಡಗಳನ್ನು ಇಷ್ಟಪಡದವರೇ ಇಲ್ಲ.…