ಕಾಯಂ ವೈದ್ಯರು ಸಿಬ್ಬಂದಿ ನೇಮಕಕ್ಕೆ ಯತ್ನ

ಕಳಸ: ಕಳಸ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಘಟಕವನ್ನು ಶಾಸಕಿ ನಯನಾ ಮೋಟಮ್ಮ ಉದ್ಘಾಟಿಸಿದರು.
ಈಗಾಗಲೇ ಎರಡು ಸುಸಜ್ಜಿತ ಡಯಾಲಿಸಿಸ್ ಯಂತ್ರಗಳು ಕೆಲಸ ಮಾಡುತ್ತಿವೆ. ನುರಿತ ಸಿಬ್ಬಂದಿಗಳು ಇದ್ದಾರೆ. ಪ್ರತಿದಿನ 8 ರೋಗಿಗಳಿಗೆ ಉಚಿತವಾಗಿ ಡಯಾಲಿಸಿಸ್ ಮಾಡಲಾಗುತ್ತಿದೆ. ಈವರೆಗೂ ಡಯಾಲಿಸಿಸ್ ಮಾಡಿಸಿಕೊಳ್ಳಲು ದೂರದ ಊರಿನ ಆಸ್ಪತ್ರೆಗೆ ಹೋಗುತ್ತಿದ್ದ ರೋಗಿಗಳಿಗೆ ಇದು ವರದಾನವಾಗಲಿದೆ ಎಂದರು.
ವೈದ್ಯ ಡಾ.ಮಂಜುನಾಥ್ ಮಾತನಾಡಿ, ಹಿರಿಯ ಕಾಯಂ ವೈದ್ಯರು ಆಸ್ಪತ್ರೆಯಲ್ಲಿ ಇದ್ದರೆ ಇನ್ನಷ್ಟು ಆತ್ಮವಿಶ್ವಾಸದಿಂದ ಕೆಲಸ ಮಾಡಬಹುದು.ಮರಣೋತ್ತರ ಪರೀಕ್ಷೆ, ಹೆರಿಗೆ ಮಾಡಲಾಗದೆ ಸಮಸ್ಯೆಯಾಗಿದೆ ಎಂದರು.
ಆಸ್ಪತ್ರೆಗೆ ಕಾಯಂ ವೈದ್ಯರ ನೇಮಕ ಮಾಡಿ ಅವರನ್ನೇ ಆಡಳಿತ ವೈದ್ಯಾಧಿಕಾರಿಯಾಗಿ ಮಾಡಿದರೆ ಆಸ್ಪತ್ರೆ ಆಡಳಿತ ಸುಸೂತ್ರವಾಗುತ್ತದೆ. ರೋಗಿಗಳಿಗೆ ತುರ್ತು ಸೇವೆ ನೀಡಲು ಇನ್ನಷ್ಟು ಆರೋಗ್ಯ ಸಹಾಯಕಿಯರು ಮತ್ತು ಾರ್ಮಾಸಿಸ್ಟ್, ಸಿಬ್ಬಂದಿ, ನೇಮಕವಾಗ ಬೇಕು ಎಂದು ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಮನವಿ ಮಾಡಿದರು.
ಆಸ್ಪತ್ರೆಗೆ ಕಾಯಂ ವೈದ್ಯರನ್ನು ನೇಮಿಸಲು ಕಳೆದ ಒಂದು ವರ್ಷದಿಂದ ಸತತವಾಗಿ ಪ್ರಯತ್ನ ಮಾಡಲಾಗುತ್ತಿದೆ. ಆದರೆ ಕಳಸದಲ್ಲಿ ಕೆಲಸ ಮಾಡಲು ವೈದ್ಯರಿಗೆ ಆಸಕ್ತಿ ಇಲ್ಲ.ಆದರೂ ವೈದ್ಯರು ಮತ್ತು ಅಗತ್ಯ ಸಿಬ್ಬಂದಿ ನೇಮಿಸುವ ಪ್ರಯತ್ನ ಸಾಗಿದೆ. ಡಿಜಿಟಲ್ ಎಕ್ಸರೇ ಯಂತ್ರ ಅಳವಡಿಕೆಗೆ ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ಈ ಆಸ್ಪತ್ರೆಯಿಂದ ಯಾರನ್ನೂ ಕೂಡ ವರ್ಗಾವಣೆ ಅಥವಾ ಬೇರೆಡೆಗೆ ನಿಯೋಜನೆ ಮಾಡುವುದಿಲ್ಲ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.
ಕಳಸ ಪಂಚಾಯಿತಿ ಅಧ್ಯಕ್ಷೆ ಉಷಾ ವಿಶ್ವನಾಥ್, ಪಂಚಾಯಿತಿ ಸದಸ್ಯರಾದ ವೀರೇಂದ್ರ, ಸುಜಯ ಸದಾನಂದ, ಮುಖಂಡರಾದ ಕೆ.ಆರ್.ಪ್ರಭಾಕರ್, ರಾಜೇಂದ್ರ ಪ್ರಸಾದ್, ಮಹಮ್ಮದ್ ರಫೀಕ್, ಕೆ.ಎ.ಶ್ರೇಣಿಕ, ವಿಶ್ವನಾಥ್, ಕೆ.ಸಿ.ಮಹೇಶ್, ಶ್ರೀನಿವಾಸ್, ಗೋಪಾಲ ಶೆಟ್ಟಿ, ಲಕ್ಷ್ಮಣಾಚಾರ್, ಗಣೇಶ್ ಭಟ್ ಇತರರು ಇದ್ದರು.

Share This Article

ತೂಕ ಇಳಿಸಿಕೊಳ್ಳಬೇಕಾ? ಸುಮ್ಮನೆ ಈ ಹಣ್ಣು, ಸೊಪ್ಪಿನ ವಾಸನೆಯನ್ನು ಒಮ್ಮೆ ಉಸಿರಾಡಿದ್ರೆ ಸಾಕು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದು ನೋಡಿ; ಆರೋಗ್ಯ ಸಮಸ್ಯೆಗೆ ಸಿಗುತ್ತೆ ಪರಿಹಾರ …

 ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…