More

    24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ: ಪ್ರಜ್ವಲ್‌, ಎಚ್‌ಡಿ ರೇವಣ್ಣಗೆ ಎಸ್‌ಐಟಿ ನೋಟಿಸ್‌!

    ಬೆಂಗಳೂರು: ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಸೆಕ್ಸ್ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ಶಾಸಕ ಎಚ್‌ಡಿ ರೇವಣ್ಣ ಅವರಿಗೆ ಎಸ್‌ಐಟಿ ನೋಟಿಸ್‌ ಜಾರಿ ಮಾಡಿದೆ. 24 ಗಂಟೆಗಳಲ್ಲಿ ಹಾಜರಾಗಲು ಸೂಚನೆ ನೀಡಿದೆ ಎನ್ನಲಾಗಿದೆ.

    ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಎಸ್​​ಐಟಿ ತನಿಖೆಗೆ ಸಿಎಂ ಆದೇಶ, ವಿದೇಶಕ್ಕೆ ಹಾರಿದ್ರಾ ಹಾಸನ ಸಂಸದ?

    ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳಾದ ತಾವುಗಳು ಖುದ್ದು ಹಾಜರಾಗಿ ಹೇಳಿಕೆ ನೀಡಬೇಕಿದೆ. ಹೀಗಾಗಿ, ನೋಟಿಸ್​ ತಲುಪಿದ 24 ಗಂಟೆಯ ಒಳಗೆ ಕಡ್ಡಾಯವಾಗಿ ಎಸ್‌ಐಟಿ ಮುಂದೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.

    ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ನೋಟಿಸ್‌ನಲ್ಲಿಯೇ ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ.

    ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ನೂರಾರು ಹೆಣ್ಣು ಮುಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯ ಲೈಂಗಿಕ ಆರೋಪ ಎದುರಿಸುತ್ತಿದ್ದಾರೆ. ಅಶ್ಲೀಲ ವಿಡಿಯೋಗಳು ಇರುವ ಪೆನ್‌ಡ್ರೈವ್ ಹೊರ ಬರುತ್ತಿದ್ದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (SIT)ಕ್ಕೆ ಪ್ರಕರಣದ ತನಿಖೆ ಹಸ್ತಾಂತರಿಸಿತ್ತು.
    ಪ್ರಕರಣ ಕೈಗೆತ್ತಿಕೊಂಡ ಎಸ್‌ಐಟಿ ಅಧಿಕಾರಿಗಳು ಹಾಸನ ಜಿಲ್ಲೆಯಲ್ಲಿ ಮಹಿಳಾ ಪೊಲೀಸರು ಸೇರಿದಂತೆ ಸುಮಾರು ಐದು ಮಂದಿ ಸಂತ್ರಸ್ತರನ್ನು ಸೋಮವಾರ ವಿಚಾರಣೆ ಮಾಡಿದ್ದಾರೆ.

    ಚುನಾವಣೆ ವೇಳೆ ಸಿಎಂ ಅರವಿಂದ್​ ಕ್ರೇಜಿವಾಲ್ ಬಂಧನ ಯಾಕೆ? ಇಡಿಗೆ ಕೋರ್ಟ್​ ಪ್ರಶ್ನೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts