More

    ಗಣರಾಜ್ಯೋತ್ಸವಕ್ಕೆ ಹಾಜರಾತಿ ಕಡ್ಡಾಯ

    ಶ್ರೀರಂಗಪಟ್ಟಣ: ರಾಷ್ಟ್ರೀಯ ಹಬ್ಬವಾದ ಗಣರಾಜ್ಯೋತ್ಸವವನ್ನು ಜ.26ರಂದು ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹಾಜರಿದ್ದು, ಆಚರಿಸಬೇಕು ಎಂದು ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಸೂಚನೆ ನೀಡಿದರು.

    ಪಟ್ಟಣದ ಪುರಸಭಾ ಕಾರ್ಯಲಯದ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ಶಾಲೆಗಳಲ್ಲೂ ಅಂದು ಬೆಳಗ್ಗೆಯೇ ಶಿಸ್ತು ಹಾಗೂ ಶಿಷ್ಟಾಚಾರ ಪಾಲನೆಯೊಂದಿಗೆ ಧ್ವಜಾರೋಹಣ ನಡೆಸಿ ಬಿಸಿಲಿಗೂ ಮುನ್ನ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ಆಚರಿಸಬೇಕು. ಪಟ್ಟಣದಲ್ಲಿ ಶಾಲಾ ವಿದ್ಯಾರ್ಥಿಗಳ ಪಥಸಂಚಲನದೊಂದಿಗೆ ಪುರಸಭೆ ಹಾಗೂ ಐತಿಹಾಸಿಕ ಬತ್ತೇರಿಯಲ್ಲಿ ಧ್ವಜಾರೋಹಣ ನೆರವೇರಿಸಬೇಕು. ಶಾಲಾ ಮಕ್ಕಳ ಮನೋರಂಜನಾ ಕಾರ್ಯಕ್ರಮದಲ್ಲಿ ವಿಶೇಷ ಹಾಗೂ ವೈವಿಧ್ಯತೆಯೊಂದಿಗೆ ಭಾವೈಕ್ಯತೆ ಹಾಗೂ ಜಾಗೃತಿ ಮೂಡಿಸುವ ಕೆಲಸ ಶಿಕ್ಷಕರಿಂದ ಆಗಬೇಕು ಎಂದರು.

    ಶಾಲಾ ಮಕ್ಕಳಿಗೆ ಸಿಹಿಯೊಂದಿಗೆ ಗುಣಮಟ್ಟದ ಆಹಾರ ವಿತರಣೆಯಾಗಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಎಚ್ಚರ ವಹಿಸಿ ಕೆಲಸ ಮಾಡಬೇಕು. ಗೈರು ಹಾಜರಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮೇಲಧಿಕಾರಿಗಳಿಂದ ನೋಟಿಸ್ ಜಾರಿ ಮಾಡಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

    ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ತಾಪಂ ಇಒ ವೇಣು ಹಾಗೂ ಪುರಸಭಾ ಮುಖ್ಯಾಧಿಕಾರಿ ರಾಜಣ್ಣ,ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಎಸ್.ಪ್ರಕಾಶ್, ಬಿಇಒ ಅನಂತರಾಜು, ದೈಹಿಕ ಶಿಕ್ಷಣ ಸಂಯೋಜಕ ಸೋಮಶೇಖರ್, ಲೋಕೋಪಯೋಗಿ ಎಇಇ ಜಸ್ವಂತ್, ಸೆಸ್ಕ್ ಎಇಇ ಮಂಜುನಾಥ್ ಪ್ರಸಾದ್, ಎಡಿಎಲ್‌ಆರ್ ಮೇಘನಾ, ಕಂದಾಯ ಇಲಾಖೆ ಸಿಬ್ಬಂದಿ ಸಂಘದ ಅಧ್ಯಕ್ಷ ರೇವಣ್ಣ, ಜಿಲ್ಲಾ ಪಂಚಾಯಿತಿ ಇಂಜಿನಿಯರ್ ರಾಮಕೃಷ್ಣೇಗೌಡ, ಸಮಾಜ ಕಲ್ಯಾಣಾಧಿಕಾರಿ ಮೇಘನಾ, ತಾಲೂಕು ವಿಸ್ತರಣಾಧಿಕಾರಿ ಪುಷ್ಪಾ, ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಪಿ.ಮಾರುತಿ ಇತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts