More

    ಅತ್ತಿಬೆಲೆ ಪಟಾಕಿ ಗೋದಾಮು ದುರಂತ; ಮೃತರ ಸಂಖ್ಯೆ 14ಕ್ಕೆ ಏರಿಕೆ

    ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

    ಅಗ್ನಿ ಅವಘಡದಲ್ಲಿ ಮೃತಪಟ್ಟ ಬಹುತೇಕ ಕಾರ್ಮಿಕರೆಲ್ಲರೂ ತಮಿಳುನಾಡಿನ ಶಿವಕಾಶಿ ಹಾಗೂ ಧರ್ಮಪುರಿ ಮೂಲದದವರು ಎಂದು ತಿಳಿದು ಬಂದಿದೆ. ಗೋದಾಮು ಮಾಲೀಕನ ಪುತ್ರ ನವೀನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ಧಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ ಮಾಲಿಕರಾದ ರಾಮಸ್ವಾಮಿ ರೆಡ್ಡಿ ಹಾಗೂ ಜಾಗದ ಮಾಲೀಕ ಅನಿಲ್ ವಿರುದ್ಧ ಅತ್ತಿಬೆಲೆ ಪೊಲೀಸ್​​ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338, 304, 337, 338, 9 (ಬಿ) ಸ್ಪೋಟಕ ವಸ್ತು ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

    Fire Accident

    ಇದನ್ನೂ ಓದಿ: ಬಿಹಾರದ ಬಳಿಕ ರಾಜಸ್ಥಾನದಲ್ಲೂ ಜಾತಿ ಗಣತಿ; ಆದೇಶ ಹೊರಡಿಸಿದ ಗೆಹ್ಲೋಟ್ ಸರ್ಕಾರ

    ಪಟಾಕಿ ಯಾರು ಕಳಿಸಿದ್ದಾರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ. ಪಟಾಕಿ ಆರ್ಡರ್ ಬಂದಮೇಲೆ ಇಲ್ಲಿನ ದಾಖಲೆ ಪಡೆದು ಸಾಗಿಸಬೇಕು. ಜತೆಗೆ ಪಟಾಕಿ ಸಾಗಾಣಿಕೆ ವೇಳೆಯೂ ಎಸ್​​ಒಪಿ ಪಾಲಿಸಬೇಕಾಗುತ್ತದೆ. ಪಟಾಕಿಗಳನ್ನು ತಮಿಳುನಾಡಿನ ಧರ್ಮಪುರಿಯಿಂದ ತಂದಿರುವ ಮಾಹಿತಿ ಇದೆ. ದುರಂತ ಬಗ್ಗೆ ಅಧಿಕಾರಿಗಳ ತಂಡ ರಚಿಸಿ ತನಿಖೆ ನಡೆಸಲಾಗುತ್ತದೆ. ಗಾಯಾಳುಗಳಿಂದಲೇ ದೂರು ಪಡೆಯಲಾಗಿದೆ.

    ಮೃತಪಟ್ಟಿರುವವರ ಪೈಕಿ ಒಂಬತ್ತು ಜನರ ಗುರುತು ಸದ್ಯಕ್ಕೆ ಸಿಕ್ಕಿದೆ. ಇನ್ನೂ ಮೂರು ಜನ ಗಂಡಸರ ಶವ ಪತ್ತೆಯಾಗಿಲ್ಲ. ಗಾಯಾಳುಗಳಲ್ಲಿ ವೆಂಕಟೇಶ ಎಂಬಾತನ ಸ್ಥಿತಿ ಗಂಭೀರವಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಪಟಾಕಿ ದುರಂತೆ ನಡೆದ ಸ್ಥಳಕ್ಕೆ ಇಂದು (ಅಕ್ಟೋಬರ್ 8) ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ ಎಂದು ಉನ್ನತ ಸುದ್ದಿ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಶನಿವಾರ ತಡರಾತ್ರಿ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸರ್ಕಾರದ ವತಿಯಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts