ಹೈದರಾಬಾದ್: ಟಾಲಿವುಡ್ ಸ್ಟಾರ್ ಹೀರೋ ಅಕ್ಕಿನೇನಿ ನಾಗಚೈತನ್ಯ ಜೀವನದಲ್ಲಿ ಹೊಸ ಅಧ್ಯಾಯ ಶುರುವಾಗಿದೆ. ಗೆಳತಿ ಹಾಗೂ ನಟಿ ಶೋಭಿತಾ ಧೂಳಿಪಾಲ ಜತೆ ನಾಗಚೈತನ್ಯ ಗುರುವಾರ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಪ್ರೇಮ ಪಕ್ಷಿಗಳ ನಿಶ್ಚಿತಾರ್ಥದ ಎಂಬ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದೆ. ಇಬ್ಬರ ನಡುವೆ ಪ್ರೀತಿ ಇದೆ ಎಂಬುದು ಇಷ್ಟು ದಿನ ಕೇವಲ ವದಂತಿಯಾಗಿತ್ತು. ಆದರೆ, ಈಗ ವದಂತಿ ನಿಜವಾಗಿದೆ.
ನಾಗಚೈತನ್ಯ-ಶೋಭಿತಾ ಅವರ ನಿಶ್ಚಿತಾರ್ಥದ ಫೋಟೋಗಳನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಅಕ್ಕಿನೇನಿ ನಾಗಾರ್ಜುನ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಚೈತನ್ಯ ಅವರು ಬಿಳಿ ಬಣ್ಣದ ಶೇರ್ವಾನಿ ತೊಟ್ಟಿದ್ದರೆ, ಶೋಭಿತಾ ಗುಲಾಬಿ ಬಣ್ಣದ ಸೀರೆಯಲ್ಲಿ ಕಂಗೊಳಿಸಿದ್ದಾರೆ. ಅತ್ಯಂತ ಸರಳವಾಗಿ ಈ ನಿಶ್ಚಿತಾರ್ಥ ಸಮಾರಂಭ ಕೇವಲ ಕುಟುಂಬ ಸದಸ್ಯರ ಸಮ್ಮುಖದಲ್ಲಿ ನಡೆದಿದೆ. ನಾಗಚೈತನ್ಯ ಈ ಹಿಂದೆ ನಟಿ ಸಮಂತಾರನ್ನು ಪ್ರೀತಿಸಿ ವಿವಾಹವಾಗಿದ್ದರು. 2017 ರಲ್ಲಿ ಮದುವೆಯಾಗಿ 2021 ರಲ್ಲಿ ಇಬ್ಬರು ಭಿನ್ನಾಭಿಪ್ರಾಯಗಳ ಕಾರಣದಿಂದ ಬೇರ್ಪಟ್ಟರು. ಇದು ಕೂಡ ಭಾರಿ ಸುದ್ದಿಯಾಗಿತ್ತು.
ನಾಗಚೈತನ್ಯ ನಿಶ್ಚಿತಾರ್ಥ ಮಾಡಿಕೊಳ್ಳಲು ಆಗಸ್ಟ್ 8ನ್ನೇ ಏಕೆ ಆಯ್ಕೆ ಮಾಡಿಕೊಂಡರು ಎಂಬುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇದರ ನಡುವೆ ಅಭಿಮಾನಿಗಳು ಆಗಸ್ಟ್ 8ಕ್ಕೂ ಸಮಂತಾಗೂ ನಂಟು ಹುಡುಕಿದ್ದಾರೆ. ಅದೇನೆಂದರೆ, ವರ್ಷಗಳ ಹಿಂದೆ ಅಂದರೆ, ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದಂತ ಸಮಯದಲ್ಲಿ ಆಗಸ್ಟ್ 8ರಂದೇ ಮಾಜಿ ಪತ್ನಿ ಸಮಂತಾ, ನಾಗಚೈತನ್ಯಗೆ ಪ್ರೇಮ ನಿವೇದನೆ ಮಾಡಿಕೊಂಡಿದ್ದರು ಎಂದು ಕೆಲವು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಹರಿಬಿಡುತ್ತಿದ್ದಾರೆ. ಆದರೆ, ಈ ಪೋಸ್ಟರ್ ಎಷ್ಟರ ಮಟ್ಟಿಗೆ ನಿಜವೋ ಗೊತ್ತಿಲ್ಲ. ಸದ್ಯ ವೈರಲ್ ಆಗಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ.
#SamanthaRuthPrabhu Proposed Naga chaitanya On August 8 💔
And He Is Now Getting Enggaged With #SobhitaDhulipala On August 8 💞#NagaChaitanya ..! pic.twitter.com/6Om7YnL2Gb
— ꪆࣼꪒവᰢ͟།ᰈ།ໍ (@itz_sagaa) August 8, 2024
ಅಂದಹಾಗೆ ಸುದೀರ್ಘ ಡೇಟಿಂಗ್ ಬಳಿಕ 2017ರಲ್ಲಿ ಸಮಂತಾ ಮತ್ತು ನಾಗಚೈತನ್ಯ ವಿವಾಹವಾದರು. ಸಮಂತಾ ಕೂಡ ಪತಿಯ ಹೆಸರನ್ನು ಹಚ್ಚೆ ಹಾಕಿಸಿಕೊಂಡಿದ್ದರು. ಅಭಿಮಾನಿಗಳಿಂದ ಆದರ್ಶ ದಂಪತಿಗಳೆಂದು ಪರಿಗಣಿಸಲ್ಪಟ್ಟ ಸಮಂತಾ ಮತ್ತು ನಾಗಚೈತನ್ಯ ತಮ್ಮ ನಾಲ್ಕನೇ ವಿವಾಹ ವಾರ್ಷಿಕೋತ್ಸವಕ್ಕೂ ಮೊದಲೇ ಡಿವೋರ್ಸ್ ಘೋಷಣೆ ಮಾಡಿದರು. 2021ರಲ್ಲಿ ವಿಚ್ಛೇದನ ಪಡೆದ ನಂತರ, ಸಮಂತಾ ಚಲನಚಿತ್ರಗಳಲ್ಲಿ ಸಕ್ರಿಯರಾದರು.
ಸಮಂತಾರಿಂದ ದೂರವಾದ ಬಳಿಕ ನಾಗಚೈತನ್ಯ ನಟಿ ಶೋಭಿತಾ ಅವರನ್ನು ಪ್ರೀತಿಸುತ್ತಿದ್ದರು. ಇವರಿಬ್ಬರೂ ಜೊತೆಯಾಗಿ ಹಲವು ಬಾರಿ ವಿದೇಶ ಪ್ರವಾಸ ಕೂಡ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಸಹ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಆದರೆ ಚೈತನ್ಯ ಆಗಲಿ ಶೋಭಿತಾ ಆಗಲಿ ತಮ್ಮ ಪ್ರೀತಿಯ ಬಗ್ಗೆ ಒಮ್ಮೆಯೂ ಬಾಯ್ಬಿಟ್ಟಿರಲಿಲ್ಲ. ಆದರೆ, ಇದೀಗ ತಮ್ಮ ಸಂಬಂಧಕ್ಕೆ ನಿಶ್ಚಿತಾರ್ಥದ ಮೂಲಕ ಅಧಿಕೃತ ಮುದ್ರೆಯನ್ನು ಒತ್ತಿದ್ದಾರೆ.
ನಾಗಚೈತನ್ಯ ಮತ್ತು ಶೋಭಿತಾ ನಿಶ್ಚಿತಾರ್ಥದ ಸುದ್ದಿ ಹರಡಿದ ನಂತರ, ಅಭಿಮಾನಿಗಳು ಸಮಂತಾ ಅವರ ಪ್ರತಿಕ್ರಿಯೆಯನ್ನು ಹುಡುಕುತ್ತಿದ್ದಾರೆ. ನಿಶ್ಚಿತಾರ್ಥಕ್ಕೆ ಸಂಬಂಧಿಸಿದ ಸುದ್ದಿಯ ಅಡಿಯಲ್ಲಿ, ಸಮಂತಾ ಇಬ್ಬರಿಗೂ ವಿಶ್ ಮಾಡಿದ್ದೀರಾ ಎಂಬ ಕಾಮೆಂಟ್‌ಗಳು ಇವೆ. ಈ ಬಗ್ಗೆ ಸಮಂತಾ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಏನು ಪ್ರತಿಕ್ರಿಯೆ ನೀಡುತ್ತಾರೋ ಕಾದು ನೋಡಬೇಕಿದೆ. (ಏಜೆನ್ಸೀಸ್)
ಆಗಸ್ಟ್ 8ರಂದೇ ನಾಗಚೈತನ್ಯ-ಶೋಭಿತಾ ನಿಶ್ಚಿತಾರ್ಥ ಮಾಡಿಕೊಂಡಿದ್ದೇಕೆ? 888 ನಂಬರ್ ಹಿಂದಿದೆ ಈ ಅರ್ಥ…
ಗೆದ್ದಿದ್ದು ಒಂದೇ ಸರಣಿ ಬಿಲ್ಡಪ್ ಮಾತ್ರ ಬೆಟ್ಟದಷ್ಟು! ಲಂಕಾ ಬೌಲರ್ ಹೇಳಿಕೆಗೆ ಭಾರಿ ಆಕ್ರೋಶ