More

    ಮಹಿಳಾ ಕ್ರಿಕೆಟ್ ನಿಷೇಧಿಸಿದ ತಾಲಿಬಾನಿಗಳಿಗೆ ಆಸ್ಟ್ರೇಲಿಯಾದ ಖಡಕ್ ಎಚ್ಚರಿಕೆ…

    ಕಳೆದ ಎರಡು ದಿನಗಳ ಹಿಂದೆ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದರ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಕ್ರಿಕೆಟ್ ಸೇರಿದಂತೆ ಇತರೆ ಕ್ರೀಡೆಗಳನ್ನು ಆಡಲು ಅನುಮತಿ ನೀಡುವುದಿಲ್ಲ ಎಂದು ತಾಲಿಬಾನ್​ ಈಗಾಗಲೇ ನಿಯಮ ಹೊರಡಿಸಿದೆ. ಈ ನಿಯಮದ ವಿರುದ್ಧವಾಗಿ ಕ್ರಿಕೆಟ್​ ಆಸ್ಟ್ರೇಲಿಯಾ ಕೂಡ ತಾಲಿಬಾನಿಗಳಿಗೆ ಖಡಕ್ ಎಚ್ಚರಿಕೆ ನೀಡಿದೆ.

    ಒಂದು ವೇಳೆ ತಾಲಿಬಾನ್​​ ಮಹಿಳಾ ಕ್ರಿಕೆಟ್​ ನಿಷೇಧ ಮಾಡಿದ್ರೆ, ನಾವು ಅಫ್ಘಾನಿಸ್ತಾನ ಪುರುಷ ತಂಡದೊಂದಿಗೆ ನಡೆಯಬೇಕಿರುವ ಐತಿಹಾಸಿಕ ಏಕೈಕ ಟೆಸ್ಟ್​ ಪಂದ್ಯದಲ್ಲೂ ಭಾಗಿಯಾಗುವುದಿಲ್ಲ ಎಂದು ಪ್ರಕಟಣೆ ಹೊರಡಿಸಿದೆ.

    ಈ ಕುರಿತಾಗಿ ಟ್ವಿಟರ್​​ನಲ್ಲಿ ಮಾಹಿತಿ ಹಂಚಿಕೊಂಡಿರುವ ಕ್ರಿಕೆಟ್ ಆಸ್ಟ್ರೇಲಿಯಾ, ಜಾಗತಿಕವಾಗಿ ಮಹಿಳೆಯರು ಎಲ್ಲ ವಿಭಾಗಗಳಲ್ಲೂ ಗಮನಾರ್ಹ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ಕ್ರಿಕೆಟ್ ಸೇರಿದಂತೆ ಎಲ್ಲ ವಿಭಾಗದ ಕ್ರೀಡೆಗಳಲ್ಲಿ ಅವರನ್ನು ಬೆಂಬಲಿಸುವುದು ಆಸ್ಟ್ರೇಲಿಯಾದ ಆದ್ಯ ಕರ್ತವ್ಯ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ​​ ಮಹಿಳಾ ಕ್ರಿಕೆಟ್​ಗೆ ನಿಷೇಧ ಹೇರಿದರೆ, ನಾವು ಅಫ್ಘಾನಿಸ್ತಾನ ಪುರುಷ ತಂಡದೊಂದಿಗೆ ಟೆಸ್ಟ್​ ಕ್ರಿಕೆಟ್​ ಆಡುವುದಿಲ್ಲ. ಈ ಟೆಸ್ಟ್​ ಪಂದ್ಯ ರದ್ದುಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

    ನವೆಂಬರ್​ ತಿಂಗಳಲ್ಲಿ ಅಫ್ಘಾನಿಸ್ತಾನದೊಂದಿಗೆ ಹೋಬರ್ಟ್​​ನಲ್ಲಿ ಆಸ್ಟ್ರೇಲಿಯಾ ಐತಿಹಾಸಿಕ ಏಕೈಕ ಟೆಸ್ಟ್​ ಪಂದ್ಯ ಆಯೋಜಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts