ರಾಯ್ಪುರ: ಇಲ್ಲಿನ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟಿ-20 ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಭಾರತದ ಎದುರು ಬೌಲಿಂಗ್ ಆಯ್ದುಕೊಂಡಿದೆ.
ಮೊದಲ ಮೂರು ಪಂದ್ಯಗಳಲ್ಲಿ ಭಾರಿ ರನ್ ಮಳೆಯಾಗಿದ್ದು, ಇದೀಗ ನಾಲ್ಕನೇ ಪಂದ್ಯದಲ್ಲೂ ಅದೇ ನಿರೀಕ್ಷೆಯಿದೆ. ಉಭಯ ತಂಡಗಳು ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಎರಡೂ ತಂಡಗಳಲ್ಲೂ ಸಾಕಷ್ಟು ಬದಲಾವಣೆಗಳೊಂದಿಗೆ ಕಣಕ್ಕಿಳಿದಿವೆ.
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟಿ20 ಪಂದ್ಯಕ್ಕೆ ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ನಾಲ್ಕು ಬದಲಾವಣೆ ಮಾಡಲಾಗಿದೆ. ಪ್ರಸಿದ್ಧ್ ಕೃಷ್ಣ ಬದಲಿಗೆ ಮುಖೇಶ್ ಕುಮಾರ್, ಅರ್ಷದೀಪ್ ಸಿಂಗ್ ಬದಲಿಗೆ ದೀಪಕ್ ಚಹಾರ್, ತಿಲಕ್ ವರ್ಮಾ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಬದಲಿಗೆ ಜಿತೇಶ್ ಶರ್ಮಾಗೆ ಅವಕಾಶ ಸಿಕ್ಕಿದೆ.
A look at #TeamIndia’s Playing XI for the 4th T20I 👌🏻👌🏻
— BCCI (@BCCI) December 1, 2023
Follow the Match ▶️ https://t.co/iGmZmBsSDt#INDvAUS | @IDFCFIRSTBank pic.twitter.com/DgHpRsNjyS
ಇದನ್ನೂ ಓದಿ: VIDEO| ಬೆಂಗಳೂರಿನಲ್ಲಿ ನಡೆದ ಪ್ರೈಡ್ ಮಾರ್ಚ್ನಲ್ಲಿ ಹಿಂದೂ ವಿರೋಧಿ ಘೋಷಣೆ; ವ್ಯಾಪಕ ಆಕ್ರೋಶ
ಭಾರತ: ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ, ರಿಂಕು ಸಿಂಗ್, ಮುಖೇಶ್ ಕುಮಾರ್, ದೀಪಕ್ ಚಾಹರ್, ಅವೇಶ್ ಖಾನ್, ಅಕ್ಸರ್ ಪಟೇಲ್ ಮತ್ತು ರವಿ ಬಿಷ್ಣೋಯ್.
ಆಸ್ಟ್ರೇಲಿಯಾ: ಜೋಶ್ ಫಿಲಿಪ್, ಟ್ರಾವಿಸ್ ಹೆಡ್, ಬೆನ್ ಮೆಕ್‌ಡರ್ಮಾಟ್, ಆರನ್ ಹಾರ್ಡಿ, ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ವೇಡ್ (ನಾಯಕ), ಬೆನ್ ದ್ವಾರ್ಶುಯಿಸ್, ಕ್ರಿಸ್ ಗ್ರೀನ್, ಜೇಸನ್ ಬೆಹ್ರೆನ್‌ಡಾರ್ಫ್, ತನ್ವೀರ್ ಸಂಗಾ.