ಶಿವಶಂಕರ್ ಎಂ. ಹೆಬ್ಬಳ್ಳ
ಶಿವಶಂಕರ್ ಎಂ. ಹೆಬ್ಬಳ್ಳ ಅವರು ವಿಜಯವಾಣಿ ಪತ್ರಿಕೆ ಮೈಸೂರು ಬ್ಯೂರೋದಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ 15 ವರ್ಷಗಳ ಅನುಭವ ಹೊಂದಿರುತ್ತಾರೆ. ಪ್ರಚಲಿತ ವಿದ್ಯಾಮಾನಗಳು, ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ, ವನ್ಯಜೀವಿ, ಮಾನವ ಆಸಕ್ತಿ ಕುರಿತು ಲೇಖನಗಳನ್ನು ಬರೆಯುತ್ತಾರೆ. ಮೈಸೂರು ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಹಾಗೂ ಮಾನಸ ಗಂಗೋತ್ರಿಯಲ್ಲಿ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.