

ತೆಲಂಗಾಣ: ಸೋಮವಾರ (ಜುಲೈ 31) 18 ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ಪಲ್ಟಿಯಾದ ಪರಿಣಾಮ ಹಲವಾರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ತೆಲಂಗಾಣದ ವಿಕಾರಾಬಾದ್‌ನಲ್ಲಿ ವರದಿಯಾಗಿದೆ.
18 ಶಾಲಾ ವಿದ್ಯಾರ್ಥಿಗಳನ್ನು ಬುಲ್ಕಾಪುರದಿಂದ ಕೊಡಂಗಲ್‌ನ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಕರೆದೊಯ್ಯುವ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು, ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಲ್ಲಿ ಆಟೋ ಮೇಲ್ಛಾವಣಿ ಅರ್ಧದಷ್ಟು ಜಖಂಗೊಂಡಿದೆ,(ಏಜೆನ್ಸೀಸ್).