ಕಾಸರಗೋಡು: ಶಾಲಾ ವಿದ್ಯಾರ್ಥಿನಿಯರ ಮುಂದೆ ನಗ್ನದೇಹ ಪ್ರದರ್ಶನ ಮಾಡಿ ಅಸಭ್ಯವಾಗಿ ವರ್ತಿಸಿದ ಪ್ರಕರಣದ ಅಪರಾಧಿ ಮುಳಿಯಾರು ಬೋವಿಕ್ಕಾನ ಮುಲ್ಲಚ್ಚೇರಿ ನಿವಾಸಿ ಮಹಮ್ಮದ್ ಇಕ್ಬಾಲ್ ಎಂಬಾತನಿಗೆ ಕಾಸರಗೋಡು ಫಾಸ್ಟ್‌ಟ್ರ್ಯಾಕ್ ಸ್ಪೆಷಲ್ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ರಾಮು ರಮೇಶ್ ಚಂದ್ರಭಾನು ಎರಡು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 40 ಸಾವಿರ ರೂ. ದಂಡ ವಿಧಿಸಿದ್ದಾರೆ. 2019 ಜೂನ್‌ನಲ್ಲಿ ಮಹಮ್ಮದ್ ಇಕ್ಬಾಲ್ ಚಲಾಯಿಸುತ್ತಿದ್ದ ಆಟೋರಿಕ್ಷಾದಲ್ಲಿ ಶಾಲಾ ವಿದ್ಯಾರ್ಥಿನಿಯರು ಪ್ರಯಾಣಿಸಿ, ಇಳಿದು ಬಾಡಿಗೆ ಹಣ ನೀಡುವಾಗ ಅಸಭ್ಯವಾಗಿ ವರ್ತಿಸಿದ ಬಗ್ಗೆ ವಿದ್ಯಾರ್ಥಿನಿಯರು ನೀಡಿದ ದೂರಿನ ಮೇರೆಗೆ ಬದಿಯಡ್ಕ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.