

ಜೈಪುರ: ಆಟೋ ಚಾಲಕನೋರ್ವ ವಿದೇಶಿ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಹಂಚಿಕೊಂಡಿದ್ದಾರೆ.
ವೈರಲ್ ಆಗಿರುವ ವಿಡಿಯೋದಲ್ಲಿ ಆಟೋ ಚಾಲಕ ವಿದೇಶಿ ಪ್ರಜೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದು ಕಂಡು ಬಂದಿದ್ದು, ಮಹಿಳೆ ಇದರಿಂದಾಗಿ ಕಿರಿಕಿರಿ ಅನುಭವಿಸುತ್ತಿರುವುದನ್ನು ನೋಡಬಹುದಾಗಿದೆ. ಆಕೆ ಫೇಸ್ಬುಕ್ನಲ್ಲಿ ಲೈವ್ ಬಂದ ವೇಳೆ ಕೃತ್ಯ ಎಸಗಲಾಗಿದ್ದು, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜೈಪುರ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು ಆರೋಪಿ ಪತ್ತೆಗಾಗಿ ವಿಶೇಷ ತಂಡ ಒಂದನ್ಉ ರಚಿಸಲಾಗಿದೆ ಎಂದು ಜೈಪುರ ಪೊಲೀಸರು ವಿಡಿಯೋ ವೈರಲ್ ಆದ ಬೆನ್ನಲ್ಲೇ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.