ಬೈಕ್ ಟ್ಯಾಕ್ಸಿಗೆ ಆಟೋ ಚಾಲಕರ ವಿರೋಧ

Bike taxi

ಶಿವಮೊಗ್ಗ: ನಗರದಲ್ಲಿ ಗುರುವಾರ ಶುರುವಾದ ರ‌್ಯಾಪಿಡೋ ಬೈಕ್ ಟ್ಯಾಕ್ಸಿಗೆ ಆಟೋ ಚಾಲಕರು, ಮಾಲೀಕರು ವಿರೋಧ ವ್ಯಕ್ತಪಡಿಸಿ ಎರಡು ವಾಹನಗಳನ್ನು ಜಯನಗರ ಠಾಣೆ ಪೊಲೀಸರಿಗೆ ಒಪ್ಪಿಸಿದರು.
ನಗರದ ದುರ್ಗಿಗುಡಿಯಲ್ಲಿ ರ‌್ಯಾಪಿಡೋ ಬೈಕ್ ಬಾಡಿಗೆ ಸೇವೆ ನೀಡುತ್ತಿದ್ದುದನ್ನು ಕಂಡ ಆಟೋ ಚಾಲಕರು ತಡೆದು ನಿಲ್ಲಿಸಿದ್ದು, ಪರವಾನಗಿ ಇಲ್ಲದ ಕುರಿತು ತರಾಟೆಗೆ ತೆಗೆದುಕೊಂಡರು. ಈಗಾಗಲೇ ಆಟೋಗಳಿಗೆ ಪ್ರಯಾಣಿಕರಿಲ್ಲದೆ ಕಂಗಾಲಾಗಿದ್ದೇವೆ. ಮನೆ ಬಾಡಿಗೆ, ಮಕ್ಕಳ ಶಿಕ್ಷಣ ಹಾಗೂ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ಬಾಡಿಗೆ ಕಡಿಮೆಯಾಗಿದೆ. ಇದರ ನಡುವೆ ಬಾಡಿಗೆ ಬೈಕ್ ಟ್ಯಾಕ್ಸಿ ಬಂದರೆ ಮತ್ತಷ್ಟು ತೊಂದರೆಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೈಕ್ ಟ್ಯಾಕ್ಸಿಗಳನ್ನು ನಿರ್ಬಂಧಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದರು.
ವೈಟ್ ಬೋರ್ಡ್ ಬೈಕ್‌ಗಳಲ್ಲಿ ಸೇವೆ ನೀಡುವುದು ಕಾನೂನಿಗೆ ವಿರುದ್ಧ ಮತ್ತು ಅದಕ್ಕೆ ಅವಕಾಶವಿಲ್ಲ ಎಂದು ಹೇಳಿ ಇಬ್ಬರು ರ‌್ಯಾಪಿಡೋ ಚಾಲಕರನ್ನು ಜಯನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಬಳಿಕ ಠಾಣಾಧಿಕಾರಿಗಳು ವಶಕ್ಕೆ ಪಡೆದು ಆಟೋ ಚಾಲಕರಿಗೆ ಲಿಖಿತ ದೂರು ನೀಡುವಂತೆ ಹೇಳಿ ಕಳುಹಿಸಿದರು.

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…