18ರಂದು ಆಟೋ ಚಾಲಕರು-ಮಾಲೀಕರ ಸಂಘದ ಸಭೆ

ಸೋಮವಾರಪೇಟೆ: ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವಾರ್ಷಿಕ ಮಹಾಸಭೆ ಆ.18ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಚ್.ಕೆ.ಗಂಗಾಧರ್ ತಿಳಿಸಿದರು.

ಇಲ್ಲಿನ ಕೊಡವ ಸಮಾಜದಲ್ಲಿ ಅಂದು ಬೆಳಿಗ್ಗೆ 9.30 ರಿಂದ 12.30 ರವರೆಗೆ ಮಹಾಸಭೆ ನಡೆಯಲಿದೆ. ಮಧ್ಯಾಹ್ನ 2ರಿಂದ ನೂತನ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದೆ. ಸಂಜೆ 4-30ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲು ಸಂಘದಲ್ಲಿ ತಮ್ಮ ಸದಸ್ಯತ್ವವನ್ನು ನವೀಕರಿಸಿ ರಶೀದಿಯನ್ನು ಕಡ್ಡಾಯವಾಗಿ ಪಡೆದಿರಬೇಕು. ಆ. 4ರ ಸಂಜೆ 5 ಗಂಟೆವರೆಗೆ ಸಂಘದ ಕಚೇರಿಯಲ್ಲಿ ಸದಸ್ಯತ್ವ ನವೀಕರಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸಂಘದ ವಾರ್ಷಿಕ ಸಭೆಯಲ್ಲಿ ಎಲ್ಲ ಸದಸ್ಯರು ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಬೇಕೆಂದು ತಿಳಿಸಿದರು.

ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಉಪಕಾರ್ಯದರ್ಶಿ ಹಾಗೂ ಖಜಾಂಚಿ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸಂಘದ ಕಚೇರಿಯಲ್ಲಿ ಚುನಾವಣೆಗೆ ಸ್ಪರ‌್ಸುವವರು ನಾಮಪತ್ರ ಸಲ್ಲಿಸಲು ಆ.7 ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3ರ ವರೆಗೆ ಅವಕಾಶ ಇದೆ. ಆ.8ರಂದು ನಾಮಪತ್ರ ಪರಿಶೀಲನೆ ಮತ್ತು ನಾಮಪತ್ರ ಹಿಂದಕ್ಕೆ ಪಡೆಯಲು ಮತ್ತು ಅಂದೇ ಚುನಾವಣೆಯ ಚಿಹ್ನೆಯನ್ನು ಪಡೆಯಬಹುದು. ಮತದಾನಕ್ಕೆ 2024ರ ಸದಸ್ಯತ್ವ ನವೀಕರಣದ ರಶೀದಿ ತಂದು ಮತ ಚಲಾಯಿಸಬೇಕೆಂದರು.

ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಟಿ.ಎಂ.ಅಬ್ದುಲ್ ಕರೀಂ, ಪ್ರಧಾನ ಕಾರ್ಯದರ್ಶಿ ಬಿ.ಎಸ್.ಜನಾರ್ದನ್, ಉಪ ಕಾರ್ಯದರ್ಶಿ ಪಿ.ಎನ್.ರಮೇಶ್, ಖಜಾಂಚಿ ಸುದೀಪ್ ಆಲ್ಬರ್ಟ್ ಮತ್ತು ಸಹ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಇದ್ದರು.

Share This Article

ಕರಗಿದ ಮೇಣದಬತ್ತಿಯಿಂದ ಏನೆಲ್ಲಾ ಉಪಯೋಗ; ಬಿಸಾಡುವ ಬದಲು ಮರುಬಳಕೆ ಮಾಡಿ..

ಮನೆಯಲ್ಲಿ ಉಪಯೋಗಿಸುವ ಎಷ್ಟೋ ವಸ್ತುಗಳು ಕೆಲಕಾಲದ ನಂತರ ಹಳೆಯದಾಗುತ್ತದೆ. ಮತ್ತೆ ಕೆಲವು ಬಳಸಿದ ನಂತರ ನಾಶವಾಗುತ್ತದೆ.…

ಈರುಳ್ಳಿ ಸಿಪ್ಪೆಯನ್ನು ಎಸೆಯುವ ತಪ್ಪನ್ನು ಮಾಡಬೇಡಿ! ಸಿಪ್ಪೆ ವೇಸ್ಟ್​ ಎಂದು ಬಿಸಾಡೋ ಬದಲು ಹೀಗೆ ಮಾಡಿ

ಯಾವುದೇ ಅಡುಗೆ ಮಾಡಿದ್ರು ಈರುಳ್ಳಿ ಬೇಕೆ... ಬೇಕು. ಈರುಳ್ಳಿಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ, ಆದರೆ…

ನಿಮ್ಮ ಅಂಗೈನಲ್ಲಿ ತ್ರಿಶೂಲ ಗುರುತು ಇದೆಯಾ ನೋಡಿ… ಇದರರ್ಥ ತಿಳಿದ್ರೆ ನಿಮ್ಮ ಹುಬ್ಬೇರೋದು ಖಚಿತ!

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…