More

    ಬೆಂಗಳೂರಿನಲ್ಲಿ 24 ಗಂಟೆಗಳ ಕಾಲ ಆಟೋ ಸಂಚಾರ ಬಂದ್; 21 ಸಂಘಟನೆಗಳ ಬೆಂಬಲ

    ಬೆಂಗಳೂರು: ರ‌್ಯಾಪಿಡೋ, ಓಲಾ, ಊಬರ್ ಸೇರಿ ವಿವಿಧ ಕಂಪನಿಗಳ ಬೈಕ್ ಟ್ಯಾಕ್ಸಿ ಸೇವೆ ನಿಷೇಧಿಸಬೇಕೆಂದು ಒತ್ತಾಯಿಸಿ ಆಟೋ ಚಾಲಕರು ಮಾ.20ರಂದು ನಗರದಲ್ಲಿ 24 ಗಂಟೆ ಕಾಲ ಆಟೋ ಸಂಚಾರ ಬಂದ್ ಮಾಡಲು ತೀರ್ಮಾನಿಸಿದ್ದಾರೆ.

    ಖಾಸಗಿ ಹೋಟೆಲ್‌ನಲ್ಲಿ ನಡೆದ ಬೆಂಗಳೂರು ಆಟೋರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರ ಬೈಕ್‌ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿ ಬಡ ಆಟೋ ಚಾಲಕರು ಮತ್ತು ಕುಟುಂಬವರ್ಗ ಬೀದಿಗೆ ಬೀಳುವುದನ್ನು ತಡೆಯಬೇಕು. ಅಲ್ಲಿಯವರೆಗೂ ಹೋರಾಟ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

    ಇದನ್ನೂ ಓದಿ: ಈ ಯಂತ್ರವೊಂದಿದ್ದರೆ ಸಾಕು, ಕಳ್ಳರಿಗೆ ‘ಹೊಗೆ’ನೇ; ಕಳವಿಗೆ ಬಂದವರು ಧೂಮಕ್ಕೆ ಹೆದರಿ ಪರಾರಿ!?

    ಈ ಕುರಿತು ಒಕ್ಕೂಟದ ಸಂಚಾಲಕ ಎಂ.ಮಂಜುನಾಥ್ ಮಾತನಾಡಿ, ಆಟೋ ಚಾಲಕರಿಗೆ ಬೈಕ್ ಟ್ಯಾಕ್ಸಿಗಳಿಂದ ಸಾಕಷ್ಟು ಅನ್ಯಾಯವಾಗುತ್ತಿದೆ. ಈ ಕುರಿತು ಸರ್ಕಾರದ ಗಮನ ಸೆಳೆಯಲು 3 ದಿನಗಳ ಕಾಲ ಆಟೋ ಚಾಲಕರು ತಮ್ಮ ಆಟೋಗಳಿಗೆ ಸಾಂಕೇತಿಕವಾಗಿ ಕಪ್ಪುಬಾವುಟ ಕಟ್ಟಿ, ತಾವೂ ಧರಿಸಿ ಪ್ರತಿಭಟನೆ ನಡೆಸಲಿದ್ದಾರೆ. ತಮ್ಮ ಬೇಡಿಕೆ ಈಡೇರದಿದ್ದರೆ ಭಾನುವಾರ ರಾತ್ರಿ 12 ಗಂಟೆಯಿಂದ ಸೋಮವಾರ ರಾತ್ರಿ 12ರವರೆಗೆ ಆಟೋ ಸೇವೆ ಬಂದ್ ಮಾಡಲು ನಿರ್ಧರಿಸಿದ್ದೇವೆ ಎಂದರು.

    ಇದನ್ನೂ ಓದಿ: ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

    ಒಂದು ವೇಳೆ ಸೋಮವಾರ ಕೂಡ ರಾಜ್ಯ ಸರ್ಕಾರ ಯಾವುದೇ ನಿರ್ಧಾರವನ್ನು ಕೈಗೊಳ್ಳದಿದ್ದರೆ ಈ ಮುಷ್ಕರವನ್ನು ಅನಿರ್ದಿಷ್ಟಾವಧಿಗೆ ವಿಸ್ತರಿಸುತ್ತೇವೆ. ಮುಂದೆ ಆಗುವ ಅನಾಹುತಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ನಮ್ಮ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸೇರಿ ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಬೆಂಗಳೂರು ನಗರದ 21 ಆಟೋ ಚಾಲಕರು ಮತ್ತು ಮಾಲೀಕರ ಸಂಘಟನೆಗಳ ಬೆಂಬಲವಿದೆ ಎಂದು ತಿಳಿಸಿದ್ದಾರೆ.

    ಇದನ್ನೂ ಓದಿ: ಲಾಟರಿಯಲ್ಲಿ 75 ಲಕ್ಷ ರೂ. ಗೆದ್ದ ಬಳಿಕ ಹೆದರಿ ಪೊಲೀಸ್ ಠಾಣೆಗೆ ಹೋದ ಕಾರ್ಮಿಕ!

    ಆಟೋ ಚಾಲಕರಿಗೆ ನ್ಯಾಯ ಒದಗಿಸಬೇಕು: ಕಾನೂನು ಬಾಹಿರವಾಗಿ ಬೈಕ್ ಟ್ಯಾಕಿ ್ಸ ಸಂಚಾರ ರ‌್ಯಾಪಿಡೋ ಬೈಕ್ ಟ್ಯಾಕ್ಸಿಯಿಂದ ಆಟೋ ಚಾಲಕ ರಿಗೆ ಬಾಡಿಗೆ ಸರಿಯಾಗಿ ಸಿಗುತ್ತಿಲ್ಲ. ನ್ಯಾಯಬದ್ಧ ವಾಗಿ ಸರ್ಕಾರಕ್ಕೆ ಕಳೆದ ೬೦ ವರ್ಷಗಳಿಂದ ತೆರಿಗೆ ಕಟ್ಟುತ್ತಿದ್ದೇವೆ. ಆದರೆ, ಕಾನೂನುಬಾಹಿರವಾಗಿ ಬೈಕ್, ಟ್ಯಾಕ್ಸಿಗಳು ಸೇವೆ ನೀಡುತ್ತಿದ್ದರೂ ರಾಜ್ಯ ಸರ್ಕಾರ ಕ್ರಮಕೈಗೊಳ್ಳದೆ ಕಾರ್ಪೊರೇಟ್ ಕಂಪನಿಗಳ ಪರವಾಗಿ ನಿಂತಿದೆ. ಇದರಿಂದ ಆಟೋ ಚಾಲಕರ ಜೀವನ ದುಸ್ತರವಾಗಿದೆ. ಕೂಡಲೇ ಬೈಕ್ ಸೇವೆ ನೀಡುತ್ತಿರುವ ಕಂಪನಿಗಳ ವಿರುದ್ಧ ಸರ್ಕಾರ ಕ್ರಮಕೈಗೊಂಡು ಆಟೋ ಚಾಲಕರಿಗೆ ನ್ಯಾಯ ಒದಗಿಸಬೇಕು ಎಂದು ಆಟೋ ಸಂಘಟನೆಗಳು ಆಗ್ರಹಿಸಿವೆ.

    ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts