

ಕುಂದಾಪುರ: ಡಾ.ಅಂಬೇಡ್ಕರ್ ನೀಡಿರುವ ಸಂವಿಧಾನದಡಿಯಲ್ಲಿ ಕರ್ತವ್ಯ ನಿರ್ವಹಿಸುವ ಸ್ವಾಯತ್ತತೆ ಹೊಂದಿರುವ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಹಾಗೂ ಸ್ವಜನ ಹಿತಾಸಕ್ತಿಗಳನ್ನು ಬಯಸದೆ ಸಂವಿಧಾನದ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ.ವಿಕಾಸ್ ಹೆಗ್ಡೆ ಅಭಿಪ್ರಾಯಪಟ್ಟರು.
ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿ ಮಂಗಳವಾರ ಜಿಲ್ಲಾ ಯುವ ಕಾಂಗ್ರೆಸ್ ಆಶ್ರಯದಲ್ಲಿ ನಡೆದ ‘ಸ್ಟಾಪ್ ವೋಟ್ ಚೋರಿ’ ಸ್ಟಿಕ್ಕರ್ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಮಾತನಾಡಿದರು. ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರಯ್ಯ ಅಂಜುಮ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಮತಾ ನಾಯಕ್, ಕುಂದಾಪುರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶಮಂತ್ ಎಸ್. ಕುಂದಾಪುರ, ಯುವ ಕಾಂಗ್ರೆಸ್ ಮುಖಂಡ ಮಂಜುನಾಥ ಶೆಟ್ಟಿ ಗುಡಿಬೆಟ್ಟು, ಗುಲ್ವಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಸುದೀಶ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಐಟಿ ಸೆಲ್ ಪ್ರಧಾನ ಕಾರ್ಯದರ್ಶಿ ರೋಶನ್ ಶೆಟ್ಟಿ, ಪ್ರಮುಖರಾದ ಸುನೀಲ್ ಪೂಜಾರಿ ಕೋಡಿ, ಕೇಶವ ಭ, ಭರತ್ ಶೆಟ್ಟಿ ಹುಣ್ಸೆಮಕ್ಕಿ, ನವಿನ್ ಸಾಲ್ಯಾನ್ ಕಾಪು, ಸಚಿನ್ ದಬ್ಬೆಕಟ್ಟೆ, ಉಮೇಶ್ ಶೆಟ್ಟಿ ಕ್ಯಾಸನಮಕ್ಕಿ ಇದ್ದರು.