

ನವದೆಹಲಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಿಂದ ಇನ್ನು ಮುಂದೆ ರೈತರಿಗೆ 2 ಲಕ್ಷ ರೂಪಾಯಿಯಷ್ಟು ನಗದು ರೂಪದಲ್ಲಿ ಸಾಲವನ್ನು ನೀಡಲು ಮತ್ತು ನಗದು ರೂಪದಲ್ಲಿ ಕಟ್ಟಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಕೇಂದ್ರ ಸರ್ಕಾರದ 2023-24ನೇ ಸಾಲಿನ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಘೋಷಿಸಿದ್ದಾರೆ.
ಕೃಷಿಕರಿಗೆ ನೀಡುವ ಸಾಲದ ಯೋಜನೆಯ ಕ್ರೆಡಿಟ್ ಗುರಿಯನ್ನು 20 ಲಕ್ಷ ಕೋಟಿ ರೂಪಾಯಿ ವರೆಗೆ ವಿಸ್ತರಿಸಲಾಗುವುದು. ಈ ಮೂಲಕ ಕೃಷಿಕರು ಆದ್ಯತೆಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದ್ದಾರೆ. ಇದರೊಂದಿಗೆ ಕೃಷಿಕರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಪಿಎಂ ಮತ್ಸ್ಯ ಸಂಪದ ಯೋಜನೆ ಅಡಿಯಲ್ಲಿ ಉಪ ಯೋಜನೆಗಳನ್ನು ಘೋಷಣೆ ಮಾಡಲಾಗುವುದು. ಇದಕ್ಕಾಗಿ 6000 ಕೋಟಿ ರೂಪಾಯಿ ಮೀಸಲು ಇಡಲಾಗುವುದು ಎಂದು ಹೇಳಿದ್ದಾರೆ.