ಸಹಕಾರ ಕ್ಷೇತ್ರದಲ್ಲಿ ರಾಜಕೀಯ ದೂರವಿಡಿ

blank

ಬಾಳೆಹೊನ್ನೂರು: ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಬದಿಗಿಟ್ಟು ಪಕ್ಷಾತೀತವಾಗಿ ನಿರ್ಧಾರ ಕೈಗೊಂಡು ವ್ಯವಹಾರ ನಡೆಸಿದರೆ ಸಹಕಾರ ಸಂಘಗಳು ಅಭಿವೃದ್ಧಿಯತ್ತ ಸಾಗಲಿದೆ ಎಂದು ಪಿಎಸಿಎಸ್ ಅಧ್ಯಕ್ಷ ಟಿ.ಎಂ.ಉಮೇಶ್ ಕಲ್ಮಕ್ಕಿ ಹೇಳಿದರು.
ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಆಡಳಿತ ಮಂಡಳಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ 5 ವರ್ಷಗಳ ಹಿಂದೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಬೆಂಬಲಿತ ಷೇರುದಾರರನ್ನು ನಿರ್ದೇಶಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿ ಆಡಳಿತ ಮಂಡಳಿ ರಚನೆ ಮಾಡಲಾಗಿತ್ತು. ಆಡಳಿತ ಮಂಡಳಿ, ಸಂಘವು ಉತ್ತಮವಾಗಿ ಕಾರ್ಯನಿರ್ವಹಿಸಿದ ಕಾರಣ ಜಿಲ್ಲೆಯಲ್ಲೇ ಅತ್ಯುತ್ತಮ ಸಹಕಾರ ಸಂಘ ಎಂದು ಪ್ರಶಸ್ತಿ ಪಡೆದಿರುವುದು ಸಂತಸ ತಂದಿದೆ. ರೈತರಿಗೆ ಹಾಗೂ ವ್ಯಾಪಾರಸ್ಥರಿಗೆ ಸಾಂದರ್ಭಿಕವಾಗಿ ಸಾಲ ನೀಡಿ ಸಹಕಾರ ನೀಡಿದೆ.
ೆ.2ಕ್ಕೆ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದ್ದು, ಷೇರುದಾರರು, ಎಲ್ಲ ಪಕ್ಷದ ಮುಖಂಡರು ಕುಳಿತು ಮಾತುಕತೆ ನಡೆಸಿ ನಿರ್ದೇಶಕರನ್ನು ಅವಿರೋಧ ಆಯ್ಕೆ ಮಾಡಿದರೆ ಸಂಘಕ್ಕೆ ಆರ್ಥಿಕ ಉಳಿತಾಯವಾಗಲಿದೆ ಎಂದರು.
ಎನ್.ಆರ್.ಪುರ ಭೂ ಅಭಿವೃದ್ಧಿ ಬ್ಯಾಂಕ್‌ನ ನಿರ್ದೇಶಕರಾಗಿ ಆಯ್ಕೆಯಾದ ಕೆ.ಟಿ.ಗೋವಿಂದೇಗೌಡ ಮತ್ತು ಎಚ್.ಎಸ್.ಕೌಶಿಕ್ ಅವರನ್ನು ಅಭಿನಂದಿಸಲಾಯಿತು.
ಸಂಘದ ಉಪಾಧ್ಯಕ್ಷ ಎಂ.ಸಿ.ಚಂದ್ರಶೇಖರ್, ನಿರ್ದೇಶಕರಾದ ಕೆ.ಟಿ.ಗೋವಿಂದೇಗೌಡ, ಕೆ.ಕೆ.ವೆಂಕಟೇಶ್, ಲೀಲಾವತಿ, ಸುಧಾ ಎಸ್.ಪೈ, ಕೆ.ಟಿ.ವೆಂಕಟೇಶ್, ಎಂ.ಎಸ್.ಅರುಣೇಶ್, ಹಿರಿಯಣ್ಣ, ಎಂ.ಡಿ.ಕೃಷ್ಣಪ್ಪ, ಇ.ಚಂದ್ರಶೇಖರ್, ಬಿ.ಎ.ರಾಜಪ್ಪಗೌಡ, ಡಿಸಿಸಿ ಬ್ಯಾಂಕ್ ಪ್ರತಿನಿಧಿ ರಾಜೇಶ್, ಸಿಇಒ ಎಚ್.ಉಮೇಶ್, ಸಿಬ್ಬಂದಿ ಎಚ್.ಎಂ.ವೆಂಕಟೇಶ್, ಡಿ.ರಾಜೇಂದ್ರ, ಸತೀಶ್, ಚಿರಾಗ್, ಪ್ರಮೀತ್, ಕಿಶೋರ್, ನಿತ್ಯಾ, ಪಿಗ್ಮಿ ಪ್ರತಿನಿಧಿ ಯಜ್ಞಪುರುಷ ಭಟ್, ಬಿ.ಎಸ್.ಶ್ರೀನಿವಾಸ್, ರಂಗನಾಥ ಆಚಾರ್ ಮತ್ತಿತರರು ಹಾಜರಿದ್ದರು.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…