More

    ಕಾಗೋಡು ತಿಮ್ಮಪ್ಪಗೆ ಗೌರವ ಡಾಕ್ಟರೇಟ್ ನೀಡಿ

    ಶಿವಮೊಗ್ಗ: ಮಾಜಿ ಸಚಿವ, ಹಿರಿಯ ಸಮಾಜವಾದಿ ಕಾಗೋಡು ತಿಮ್ಮಪ್ಪ ಅವರಿಗೆ ಕುವೆಂಪು ವಿವಿಯಿಂದ ಗೌರವ ಡಾಕ್ಟರೇಟ್ ನೀಡುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಟ್ರಸ್ಟ್‌ನ ಪ್ರಮುಖರು ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.

    ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ದೇವರಾಜ ಅರಸು ಪ್ರಶಸ್ತಿಯೂ ಲಭಿಸಿದೆ. ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸುವ ಮೂಲಕ ಅವರು ಗಮನಸೆಳೆದಿದ್ದಾರೆ. ಹಿಂದುಳಿದ ವರ್ಗಗಳ ದನಿಯಾಗಿದ್ದಾರೆ. ಶಾಂತವೇರಿ ಗೋಪಾಲಗೌಡ, ರಾಮ ಮನೋಹರ ಲೋಹಿಯಾ, ಜಯಪ್ರಕಾಶ್ ನಾರಾಯಣ್ ಮುಂತಾದವರ ಒಡನಾಟದಲ್ಲಿದ್ದವರು ಕಾಗೋಡು. ಅವರು ಕಾಗೋಡು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು. ಅನೇಕ ಜನಪರ ಹೋರಾಟಗಳಲ್ಲಿ ಈಗಲೂ ಸಕ್ರಿಯವಾಗಿದ್ದಾರೆ. ಇಂತಹ ಸಾಧಕರಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್ ನೀಡುವುದರಿಂದ ಅದಕ್ಕೆ ನಿಜವಾದ ಅರ್ಥ ಸಿಗಲಿದೆ. ಹೀಗಾಗಿ ಸಿಂಡಿಕೇಟ್ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲು ನಿರ್ದೇಶನ ನೀಡಬೇಕೆಂದು ಆಗ್ರಹಿಸಿದರು.
    ಟ್ರಸ್ಟಿಗಳಾದ ಕಲ್ಲೂರು ಮೇಘರಾಜ್, ಡಾ.ನೇತ್ರಾವತಿ, ಪ್ರೊ.ಕಲ್ಲನ, ಎಸ್.ವಿ.ರಾಜಮ್ಮ, ಆದಿಶೇಷ, ನರಸಿಂಹಮೂರ್ತಿ, ಸಮೀನಾ ಕೌಸ್ಸರ್, ರಾಮಕೃಷ್ಣ, ಪ್ರದೀಪ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts