ಮುದ್ರಾಡಿ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಣೆ

prashasti
Published on

ಮುದ್ರಾಡಿ ಎಂಎನ್‌ಡಿಎಸ್‌ಎಂ ಅನುದಾನಿತ ಪ್ರೌಢಶಾಲೆಯಲ್ಲಿ ಬೆಂಗಳೂರಿನ ಭಾರತ ಸಂಸ್ಕೃತಿ ಪ್ರತಿಷ್ಠಾನ ನಡೆಸಿದ ರಾಮಾಯಣ, ಮಹಾಭಾರತ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ಮುದ್ರಾಡಿ ಪ್ರೌಢಶಾಲೆ ಆಡಳಿತ ಮಂಡಳಿ ಕಾರ್ಯದರ್ಶಿ ಅಶೋಕ್ ಕುಮಾರ್ ಶೆಟ್ಟಿ ವಿತರಿಸಿದರು. ಪರೀಕ್ಷೆಗೆ 26 ವಿದ್ಯಾರ್ಥಿಗಳು ಹಾಜರಾಗಿದ್ದು, ಪ್ರಥಮ ಸ್ಥಾನ ಪಡೆದುಕೊಂಡ 8ನೇ ತರಗತಿಯ ಶೋಭಿತ್ ಅವರಿಗೆ ಪದಕದೊಂದಿಗೆ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು. ಶಿಕ್ಷಕ ರಕ್ಷಕ ಸಮಿತಿ ಅಧ್ಯಕ್ಷ ಸುರೇಶ್ ಕುಲಾಲ್, ವಿದ್ಯಾರ್ಥಿ ನಾಯಕ ರಂಜಿತ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಇಂದಿರಾ ಬಾಯರಿ ಸ್ವಾಗತಿಸಿದರು. ಪರೀಕ್ಷಾ ಸಂಯೋಜಕ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ನಿರೂಪಿಸಿದರು. ಶಿಕ್ಷಕರಾದ ಮಹೇಶ್ ನಾಯ್ಕ, ಪಿ.ವಿ.ಆನಂದ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net