ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘಕ್ಕೆ ಪ್ರಶಸ್ತಿ

sahakara sange
Published on

ಕೂಡಿಗೆ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ನೀಡಲ್ಪಡುವ ವಾರ್ಷಿಕ ಪ್ರಶಸ್ತಿಯಲ್ಲಿ ಕೂಡುಮಂಗಳೂರು ರಾಮೇಶ್ವರ ಸಹಕಾರ ಸಂಘ ಸೋಮವಾರಪೇಟೆ ತಾಲೂಕಿನ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದೆ.

ಸಹಕಾರ ಸಂಘದಲ್ಲಿ ಉತ್ತಮ ಕಾರ್ಯ ನಿರ್ವಹಣೆ, ರೈತರಿಗೆ ಸಾಲ ಸೌಲಭ್ಯಗಳ ವಿತರಣಾ ವ್ಯವಸ್ಥೆ, ವಾರ್ಷಿಕ ಲಾಭಾಂಶ ಸೇರಿದಂತೆ ಎಲ್ಲಾ ಮಾನದಂಡಗಳ ಅಧಾರದ, ಅಪೆಕ್ಸ್ ಬ್ಯಾಂಕ್‌ನಿಂದ ಮತ್ತು ಜಿಲ್ಲಾ ಕೇಂದ್ರ ಸಹಕಾರದಿಂದ ದ್ವಿತೀಯ ಸ್ಥಾನದ ಪ್ರಶಸ್ತಿ ಮತ್ತು ಬಹುಮಾನ ಪಡೆದಿದೆ.

ಪ್ರಶಸ್ತಿಯನ್ನು ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕ್‌ನ ಅಧ್ಯಕ್ಷ ಬಾಂಡ್ ಗಣಪತಿಯವರು ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್ ಅವರಿಗೆ ಶನಿವಾರ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಕೂಡುಮಂಗಳೂರು ಸಹಕಾರ ಸಂಘದ ನಿರ್ದೇಶಕರಾದ ಎಸ್.ಎಸ್.ಅರುಣ್ ರಾವ್, ಕೆ.ಪಿ.ರಾಜು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಆಡಳಿತ ಮಂಡಳಿಯ ಸರ್ವ ನಿರ್ದೇಶಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net