More

    ಕೆಎಸ್‌ನ ಪ್ರಶಸ್ತಿಗೆ ನಾಲ್ವರ ಆಯ್ಕೆ: ಆಡಳಿತಾಧಿಕಾರಿ ಮಲ್ಲಿಕಾರ್ಜುನಸ್ವಾಮಿ ಮಾಹಿತಿ

    ಮಂಡ್ಯ: ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್‌ನಿಂದ ಕೊಡಮಾಡುವ 2021-22ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಕವಯತ್ರಿ ಸವಿತಾ ನಾಗಭೂಷಣ್ ಮತ್ತು 2022-23ನೇ ಸಾಲಿನ ಪ್ರಶಸ್ತಿಗೆ ಕವಿ ಸರಜೂ ಕಾಟ್ಕರ್ ಅವರನ್ನು ಆಯ್ಕೆ ಮಾಡಲಾಗಿದೆ. ಅಂತೆಯೇ 2021-22ನೇ ಸಾಲಿನ ಕಾವ್ಯಗಾಯನ ಪ್ರಶಸ್ತಿಗೆ ಗಾಯಕಿ ಎಂ.ಕೆ.ಜಯಶ್ರೀ ಮತ್ತು 2022-23ನೇ ಪ್ರಶಸ್ತಿಗೆ ಗಾಯಕ ಗರ್ತಿಕೆರೆ ರಾಘಣ್ಣ ಅವರು ಆಯ್ಕೆಯಾಗಿದ್ದಾರೆ.
    ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜ.5ರಂದು ಸಂಜೆ 5ಗಂಟೆಗೆ ಆಯೋಜಿಸಿರುವ ಸಮಾರಂಭದಲ್ಲಿ ನಾಲ್ವರಿಗೂ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಂಡ್ಯ ಜಿಲ್ಲೆಯಲ್ಲಿ ಮೊದಲ ಬಾರಿಗೆ ಈ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಕವಿ ಬಿ.ಆರ್.ಲಕ್ಷ್ಮಣರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಮತ್ತು ಕ್ರೀಡಾ ಸಚಿವ ಕೆ.ಸಿ ನಾರಾಯಣಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
    ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ, ಸಾಹಿತಿ ಡಾ.ಪ್ರದೀಪ್‌ಕುಮಾರ್‌ಹೆಬ್ರಿ, ಸಾಹಿತಿ ಪ್ರೊ.ಜಿ.ಟಿ.ವೀರಪ್ಪ ಭಾಗವಹಿಸಲಿದ್ದಾರೆ ಎಂದರು.
    ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಡಾ.ಕಿಕ್ಕೀರಿ ಕೃಷ್ಣಮೂರ್ತಿ ಮಾತನಾಡಿ, ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಕಲಾವಿದರಾದ ಜೋಗಿ, ಸುನೀತಾ, ಅರ್ಚನ ಉಡುಪ, ಶ್ರೀನಿವಾಸ ಉಡುಪ, ಮಂಡ್ಯದ ಡೇವಿಡ್, ವಿದ್ಯಾಶಂಕರ್, ಶ್ರೀಧರ್ ಸೇರಿದಂತೆ ಹಲವು ಕಲಾವಿದರಿಂದ ಸುಗಮಸಂಗೀತ ಕಾರ್ಯಕ್ರಮ ನಡೆಯಲಿದೆ. ಅಂತೆಯೇ ಕೆಎಸ್‌ನ ಗೀತೆಗಳಿಗೆ ಚಿದಂಬರ ನಟೇಶ್ ನೃತ್ಯಶಾಲೆ ಹಾಗೂ ಸುನೀತಾ ಮತ್ತು ತಂಡದಿಂದ ನೃತ್ಯ ರೂಪಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್.ಉದಯಕುಮಾರ್, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts