More

    ಸಾಂಕ್ರಾಮಿಕ ರೋಗಗಳ ಬಗ್ಗೆ ಇರಲಿ ಜಾಗೃತಿ

    ದೇವದುರ್ಗ: ಇಂದಿನ ಕಲುಷಿತ ವಾತಾವರಣದಲ್ಲಿ ಆರೋಗ್ಯವೇ ಸಂಪತ್ತು. ಅದನ್ನು ಕಾಪಾಡಿಕೊಳ್ಳಬೇಕಿದೆ. ಸಾಂಕ್ರಾಮಿಕ ರೋಗಗಳ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಕ್ಷಯರೋಗ ಮೇಲ್ವಿಚಾರ ರವಿಶುಕ್ಲ ಹೇಳಿದರು.

    ಇದನ್ನೂ ಓದಿ: ಪರಿಸರ ರಕ್ಷಣೆಯಿಂದ ಸಾಂಕ್ರಾಮಿಕ ರೋಗಗಳ ತಡೆ

    ಪಟ್ಟಣದ ಪುರಸಭೆ ವ್ಯಾಪ್ತಿಯ ಗುಗೆರದೊಡ್ಡಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಆಯುಷ್ಮಾನ್ ಭವ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು.

    ಮಳೆಗಾಲದಲ್ಲಿ ಮಲೇರಿಯಾ, ಡೆಂಘೆ, ಚಿಕ್ಯೂನ್ ಗುನ್ಯಾ ರೋಗಗಳು ಸಾಂಕ್ರಾಮಿಕ ಕಾಯಿಲೆಯಾಗಿದ್ದು ಇವುಗಳ ಬಗ್ಗೆ ಎಚ್ಚರಿ ಇರಲಿ. ಕ್ಷಯರೋಗ, ರಕ್ತದ ಒತ್ತಡ, ಸಕ್ಕರೆ ಕಾಯಿಲೆ ಬಗ್ಗೆ ಅರಿವು ಮೂಡಿಸುವ ಅಗತ್ಯ. ಸಾರ್ವಜನಿಕರು ವೈದ್ಯರಿಂದ ಮಾಹಿತಿ ಪಡೆಯಬೇಕು.

    ಮಕ್ಕಳು ಹಾಗೂ ಗರ್ಭಿಣಿ, ತಾಯಂದಿರಲ್ಲಿ ಅಪೌಷ್ಟಿಕತೆ, ಕಡಿಮೆ ತೂಕದ ರೋಗ ಕಂಡುಬರುತ್ತಿದೆ. ಹಸಿತರಕಾರಿ, ಬೇಳೆಕಾಳು ಸೇರಿ ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಆರೋಗ್ಯ ಬಗ್ಗೆ ಪ್ರತಿಯೊಬ್ಬರೂ ಜಾಗೃತಿ ವಹಿಸಬೇಕು ಎಂದು ಹೇಳಿದರು.

    ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ.ಪ್ರವೀಣ್ ಕುಮಾರ ಮಾತನಾಡಿ, ಗ್ರಾಮೀಣ ಭಾಗದ ಜನರ ಆರೋಗ್ಯ ಸುಧಾರಣೆಗಾಗಿ ಆಯುಷ್ಮಾನ್ ಭವ ಜಾರಿಗೆ ತರಲಾಗಿದೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕು.

    ಗರ್ಭಿಣಿಯರಿಗೆ ವೈದ್ಯಕೀಯ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆಯುಷ್ಮಾನ್ ಭಾರತ್ ಕಾರ್ಡ್ ಮಾಡಲಾಗುವುದು ಎಂದು ಹೇಳಿದರು.
    ನಸಿರ್ಂಗ್ ಅಧಿಕಾರಿ ರೋಹಿಣಿ, ಎಲ್‌ಟಿಒ ಪೂರ್ಣಿಮಾ, ಅಂಗನವಾಡಿ ಕಾರ್ಯಕರ್ತೆ ಸುಜಾತ, ಆಶಾ ಕಾರ್ಯಕರ್ತೆಯರಾದ ನಾಗಮ್ಮ, ತಾಯಮ್ಮ, ಮಹಮ್ಮದಿ, ಆರೋಗ್ಯ ಇಲಾಖೆ ಸಿಬ್ಬಂದಿ ರಾಜು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts